ಆಶಾ ಕಾರ್ಯಕರ್ತೆಯರ ಬೃಹತ್‌ ಪ್ರತಿಭಟನೆ


Team Udayavani, Jan 10, 2020, 2:32 PM IST

hasan-tdy-1

ಹಾಸನ: ಬಾಕಿ ಉಳಿಸಿಕೊಂಡಿರುವ 15 ತಿಂಗಳ ಪ್ರೋತ್ಸಾಹಧನವನ್ನು ಸರ್ಕಾರ ತಕ್ಷಣ ಪಾವತಿಸಬೇಕೆಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಅಪರ ಜಿಲ್ಲಾಧಿಕಾರಿ ಕವಿತಾ ಅವರಿಗೆ ಮನ ಸಲ್ಲಿಸಲಾಯಿತು.

ನಗರದ ಮಹಾರಾಜ ಪಾರ್ಕ್‌ ಮುಂಭಾಗದ ಹೇಮಾವತಿ ಪ್ರತಿಮೆ ಬಳಿ ಸಮಾವೇಶಗೊಂಡ ಆಶಾ ಕಾರ್ಯಕರ್ತೆಯರು ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದರು.

ಸರ್ಕಾರ ಆಶಾ ಕಾರ್ಯಕರ್ತೆಯರ 15 ತಿಂಗಳ ಎಂಸಿಟಿಎಸ್‌ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದೆ. ನಮಗೆ ಪಾವತಿಯಾಗಬೇಕಾಗಿರುವ ಬಾಕಿ ಹಾಗೂ ಎಂಸಿಟಿಎಸ್‌ ಪ್ರೋತ್ಸಾಹ ಧನವನ್ನು ಪಾವತಿಸುವವರೆಗೂ ರಾಜ್ಯದಲ್ಲಿ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ಆಶಾ ಕಾರ್ಯಕರ್ತೆಯರು ಮನವಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಅನಿರ್ದಿಷ್ಟಾವಧಿ ಮುಷ್ಕರ: ಅನಿರ್ದಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸಿದ್ದು, ನಮ್ಮ ಬೇಡಿಕೆ ಈಡೇರಿಸುವವರೆಗೂ ಕೆಲಸ ಸ್ಥಗಿತ ಮಾಡಲಾಗುವುದು. ನಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗ ಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜ. 3 ರಂದು ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ಆ ಸಂದರ್ಭದಲ್ಲಿ ಕೆಲ ಬೇಡಿಕೆಗಳನ್ನು ಈಡೇರಿ ಸುವುದಾಗಿ ಸರ್ಕಾರವು ಒಪ್ಪಿಕೊಂಡಿದೆ. ಅದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇವೆ. ಆದರೆ ಪ್ರಮುಖ ಬೇಡಿಕೆಗಳಲ್ಲಿ ಒಂದಾದ15 ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ಎಂಸಿಟಿಎಸ್‌ ಪ್ರೋತ್ಸಾಹಧನವನ್ನು ಪಾವತಿಸುವ ಬಗ್ಗೆ ಭರವಸೆ ನೀಡಿದೆ.

ಆದರೆ ಸರ್ಕಾರವು ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡು ವರೆಗೂ ರಾಜ್ಯದಲ್ಲಿ ಸೇವೆಯನ್ನು ಸ್ಥಗಿತ ಗೊಳಿಸುವುದಾಗಿ

ಸ್ಪಷ್ಟಪಡಿಸಿರುವ ಆಶಾ ಕಾರ್ಯಕರ್ತೆಯರು, ಬೇಡಿಕೆಗಳು ಈಡೇರುವವರೆಗೂ ಆರೋಗ್ಯ ಸೇವೆಗಳು, ತರಬೇತಿ ಮತ್ತು ಪರೀಕ್ಷೆಗಳು, ಸಭೆಗಳು ಸೇರಿದಂತೆ ನಮ್ಮ ಸ್ಥಗಿತಗೊಳಿಸುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ಎಐಯುಟಿಯುಸಿ ಜಿಲ್ಲಾ ಸಂಘಟಕ ಜಿ. ಹನುಮೇಶ್‌, ಮುಖಂಡರಾದ ಪುಷ್ಪಲತಾ, ಮಮತಾ, ರೆಹಮತ್‌, ಸರಸಮ್ಮ, ಗೌರಮ್ಮ, ಛಾಯಾ, ಭಾರತಿ, ಶಿವಮ್ಮ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.