ಮೇಕೆದಾಟು: ತಮಿಳುನಾಡಿಗೂ ಅನುಕೂಲ
Team Udayavani, Oct 6, 2021, 6:02 PM IST
ಹಾಸನ: ಮೇಕೆದಾಟು ಯೋಜನೆಯಿಂದ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಅನುಕೂಲವಾಗಲಿದ್ದು ಶತಮಾನಗಳ ಹಳೆಯದಾದ ಕಾವೇರಿ ಜಲವಿವಾದಕ್ಕೂ ಮುಕ್ತಿ ಸಿಗಲಿದೆ ಎಂದು ನಗರದ ಮಲೆನಾಡು ತಾಂತ್ರಿಕ ಕಾಲೇಜು ಪ್ರಾಧ್ಯಾಪಕ, ನೀರಾವರಿ ತಜ್ಞಪೊ›.ಬಿ.ಈ. ಯೋಗೇಂದ್ರ ಅಭಿಪ್ರಾಯಪಟ್ಟರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಕಾವತಿ ಮತ್ತು ಕಾವೇರಿ ನದಿ ಸೇರುವ ಸಂಗಮದಿಂದ 3.5 ಕಿ.ಮೀ. ದೂರದ ತಗ್ಗು ಪ್ರದೇಶದಲ್ಲಿ ಕನಕಪುರ ತಾಲೂಕಿನ ಮಹಾಲಿ ಗ್ರಾಮದ ಸಮೀಪ ಕಾವೇರಿ ನದಿ ಕಣಿವೆಯೇ ಮೇಕೆದಾಟು ಯೋಜನೆ ಸ್ಥಳ. ಇದು ಸಮುದ್ರ ಮಟ್ಟಕ್ಕಿಂತ 349 ಮೀಟರ್ ಎತ್ತರದಲ್ಲಿದ್ದು, ಅಣೆಕಟ್ಟೆ ಕಟ್ಟಲು ಸೂಕ್ತವಾದ ಸ್ಥಳವಾಗಿದೆ ಎಂದರು.
ಇದನ್ನೂ ಓದಿ:- ಅತಿ ವೇಗ ಮತ್ತು ಅವೈಜ್ಞಾನಿಕ ಚಾಲನೆ: ಕ್ರಷರ್ ಲಾರಿ ತಡೆದು ಸಾರಿಗೆ ಇಲಾಖೆ ವಿರುದ್ದ ಆಕ್ರೋಶ.
ವಿದ್ಯುತ್ ಉತ್ಪತ್ತಿ: ಈಗಾಗಲೇ ಕರ್ನಾಟಕ ಸರ್ಕಾರ ವಿಸ್ಕೃತವಾದ ಯೋಜನೆ ತಯಾರಿಸಲು ಕೇಂದ್ರ ಸರ್ಕಾರದಿಂದ ಷರತ್ತು ಬದ್ಧ ಒಪ್ಪಿಗೆ ಪಡೆದುಕೊಂಡಿದೆ. ಆದರೆ, ತಮಿಳುನಾಡು ತಕರಾರು ತೆಗೆದಿದೆ. ಹೀಗಾಗಿ 9 ಸಾವಿರ ಕೋಟಿ ರೂ.ವೆಚ್ಚದ ಮೇಕೆದಾಟು ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ. 67 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟನ್ನು ಮೇಕೆದಾಟಿನಲ್ಲಿ ಕಟ್ಟಿ ಬೆಂಗಳೂರು ಹಾಗೂ ಹಲವಾರು ನಗರಗಳಿಗೆ ಕುಡಿಯುವ ನೀರನ್ನು ಒದಗಿಸುವುದರ ಜತೆಗೆ 400 ಮೆಗಾವ್ಯಾಟ್ ವಿದ್ಯುತ್ ತಯಾರಿಸುವ ಯೋಜನೆ ಇದಾಗಿದೆ ಎಂದು ಹೇಳಿದರು.
ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣವ್ಯತ್ಯಾಸವಾಗುವುದರಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಂದಾಜಿಸಿರುವ ನೀರಿನ ಇಳುವರಿ ಇಲ್ಲ. ಆದರೆ, ತಮಿಳುನಾಡಿನ ಕಾವೇರಿ ಕಣಿವೆಯಲ್ಲಿ ಹೆಚ್ಚು ಮಳೆಯಾಗಿ ಕರ್ನಾಟಕದಲ್ಲಿ ಕಡಿಮೆ ಮಳೆಯಾದರೂ ನೀರು ಬಿಡಬೇಕಾದ ಅನಿವಾರ್ಯ ಸ್ಥಿತಿ ಕರ್ನಾಟಕದ್ದು ಎಂದು ಹೇಳಿದರು.
ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಳ – ಕಾವೇರಿ ನ್ಯಾಯಾಧೀಕರಣ ಮತ್ತು ಸುಪ್ರೀಂಕೋರ್ಟಿನ ತೀರ್ಪಿನಂತೆ ವಾರ್ಷಿಕ 177 ಟಿಎಂಸಿ ನೀರನ್ನು ತಿಂಗಳುವಾರು ತಮಿಳುನಾಡಿಗೆ ಕರ್ನಾಟಕ ಹರಿಸಬೇಕಾಗಿದೆ. ಕಾವೇರಿ ಜಲ ವಿವಾದ ನ್ಯಾಯಾಧೀಕರಣದ ತೀರ್ಪಿನಂತೆ ಕರ್ನಾಟಕ ರಾಜ್ಯದ ನೀರಿನ ಬಳಕೆ ಪಾಲು 285 ಟಿಎಂಸಿ. ಆದರೆ ಅಷ್ಟು ನೀರು ಸಂಗ್ರಹದ ವ್ಯವಸ್ಥೆ ಕರ್ನಾಟಕದಲ್ಲಿ ಇಲ್ಲ. ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕರ್ನಾಟಕ ಮೇಕೆದಾಟು ಅಣೆಕಟ್ಟೆ ನಿರ್ಮಾಣ ಮಾಡುವುದು ಅನಿವಾರ್ಯ.
ಇದರಿಂದ ನೀರಿನ ಸಂಗ್ರಹ ಮಾಡಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಾಗುತ್ತದೆ. ಕರ್ನಾಟಕದ ಪಾಲಿನನೀರಿನ್ನು ಬೆಂಗಳೂರು ಮಹಾ ನಗರ ಹಾಗೂ ರಾಮನಗರ ಜಿಲ್ಲೆ ಕುಡಿಯುವ ನೀರಿಗೆ ಬಳಸಿಕೊಳ್ಳಬಹುದು ಎಂದು ನೀರಾವರಿ ತಜ್ಞ ಪೊ›.ಬಿ.ಈ.ಯೋಗೇಂದ್ರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.