ಸ್ವಂತ ಸ್ಥಳಗಳಿಗೆ ತೆರಳಿದ ವಲಸೆ ಕಾರ್ಮಿಕರು
ಕಾರ್ಮಿಕರಿಗೆ ಬಸ್ ವ್ಯವಸ್ಥೆಕಲ್ಪಿಸಿದ ತಾಲೂಕು ಆಡಳಿತ
Team Udayavani, Apr 27, 2020, 4:33 PM IST
ಸಾಂದರ್ಭಿಕ ಚಿತ್ರ
ಅರಸೀಕೆರೆ: ಲಾಕ್‌ಡೌನ್ ಹಿನ್ನೆಲೆಯಲ್ಲಿ ನಗರದ ನಿರಾಶ್ರಿತ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಹೊರ ಜಿಲ್ಲೆಯ ಕೂಲಿ ಕಾರ್ಮಿಕರನ್ನು ಸರ್ಕಾರದ ಆದೇಶದ ಮೇರೆಗೆ ತಾಲೂಕು ಆಡಳಿತದಿಂದ ಅವರ ಸ್ವಂತ ಊರುಗಳಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಸಂತೋಷ್ ಕುಮಾರ್ ಕಲಬುರಗಿ ಜಿಲ್ಲೆಯ ಚಿಂಚೋಳಿ, ರಾಯಚೂರು, ಬೆಳಗಾವಿ, ವಿಜಯಪುರ, ಗದಗ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಯಿಂದ ಕೂಲಿ ಕೆಲಸಕ್ಕೆ ಆಗಮಿಸಿದ್ದ 84 ಮಂದಿ ವಲಸೆ ಕಾರ್ಮಿಕರನ್ನು ಸರ್ಕಾರದ
ಆದೇಶದನ್ವಯ ಅವರ ಸ್ವಂತ ಊರುಗಳಿಗೆ ಕೆಎಸ್‌ಆರ್ ಟಿಸಿ ಬಸ್‌ಗಳಲ್ಲಿ ಅಗತ್ಯ ಸೌಲಭ್ಯ ನೀಡಿ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು. ಎಲ್ಲಾ 84 ಮಂದಿ ಕಾರ್ಮಿಕರಿಗೆ ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿದ್ದು, ಕೋವಿಡ್ ಲಕ್ಷಣಗಳಿಲ್ಲ ಎಂದು ದೃಢೀಕರಿಸಲಾಗಿದೆ. ಮಾಸ್ಕ್, ಸ್ಯಾನಿಟೈಸರ್, ಉಪಾಹಾರ, ಕುಡಿಯುವ ನೀರು ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಒಂದು ಬಸ್ ನಲ್ಲಿ 21 ಮಂದಿ ಕಾರ್ಮಿಕರನ್ನು ಕಳುಹಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಯ್ಯ, ಕಾರ್ಮಿಕ ಇಲಾಖೆ ನಿರೀಕ್ಷಕರಾದ ಪ್ರಭಾಕರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಂಕರಮೂರ್ತಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.