‘ಎತ್ತಿನಹೊಳೆ ಯೋಜನೆಯಲ್ಲಿ ಸಚಿವ ರೇವಣ್ಣ ಅವ್ಯವಹಾರ’
Team Udayavani, May 21, 2019, 6:03 AM IST
ಸಾಂದರ್ಭಿಕ ಚಿತ್ರ
ಬೇಲೂರು: ‘ಕುಡಿಯುವ ನೀರಿನ ಮಹತ್ವದ ಎತ್ತಿನಹೊಳೆ ಯೋಜನೆಯಿಂದ ಚುನಾವಣೆ ವೆಚ್ಚಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಗುತ್ತಿಗೆ ದಾರರಿಂದ ಹಣ ವಸೂಲಿ ಮಾಡಿ ಇಡೀ ಕಾಮಗಾರಿ ಭ್ರಷ್ಟಾಚಾರದಲ್ಲಿ ಮುಳುಗುವಂತೆ ಮಾಡಿದ್ದಾರೆ’ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಕಲೇಶಪುರ ಭಾಗದಿಂದ ಬಯಲು ಸೀಮೆ ಪ್ರದೇಶಕ್ಕೆ ಕುಡಿಯುವ ನೀರಿಗಾಗಿ ಎತ್ತಿನ ಹೊಳೆ ಯೋಜನೆ ರೂಪಿಸಲಾಗಿದ್ದು ಸಾವಿರಾರು ಕೋಟಿ ರೂ.ಗಳ ಕಾಮಗಾರಿ ಪ್ರಗತಿಯಲ್ಲಿದೆ. ಹಿಂದಿನ ಕಾಂಗ್ರೆಸ್ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿ ತ್ವರಿತವಾಗಿ ಕಾಮಗಾರಿ ನಡೆಯಲು ಕ್ರಮ ಕೈಗೊಂಡಿತ್ತು. ಅದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಸಚಿವ ರೇವಣ್ಣ ಈವರೆಗೂ ಸ್ಥಳಕ್ಕೆ ಭೇಟಿ ನೀಡದೆ ಕಾಮಗಾರಿ ಕುಠಿತಗೊಂಡಿದೆ’ ಎಂದು ಆರೋಪಿಸಿದರು. ರೇವಣ್ಣ ಅವರು ಗುಣಮಟ್ಟದ ಕಾಮಗಾರಿ ಪರಿಶೀಲನೆ ಮಾಡದೆ ದಲಿತ ಗುತ್ತಿಗೆದಾರರಿಗೆ ಮೀಸಲಿದ್ದ 50 ಲಕ್ಷ ರೂ.ವರೆಗಿನ ಕಾಮಗಾರಿಗಳನ್ನು ತಮ್ಮ ಬೆಂಬಲಿತ ಗುತ್ತಿಗೆದಾರರಿಗೆ ಅನುಕೂಲ ಮಾಡಲು ಪ್ಯಾಕೇಜ್ ಮಾಡಿ ವಂಚಿಸಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.