ರಾಜ್ಯ ಬಜೆಟ್‌ನಲ್ಲಿ ಹಾಸನ ಜಿಲ್ಲೆಗೆ ಬಂಪರ್‌ ನಿರೀಕ್ಷೆ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುದಾನ, ವಿವಿಧ ಅಭಿವೃದ್ಧಿ ಯೋಜನೆಗಳ ಘೋಷಣೆ: ಶಾಸಕ ಪ್ರೀತಂ ಜೆ.ಗೌಡ ವಿಶ್ವಾಶ

Team Udayavani, Mar 4, 2021, 8:37 PM IST

MLA Preatham Gouda

ಹಾಸನ: ಜಿಲ್ಲೆಯ ಜನರ ಬಹಳ ವರ್ಷಗಳ ಬೇಡಿಕೆಯ ಹಾಸನ ವಿಮಾನ ನಿಲ್ದಾಣಕ್ಕೆ ಅನುದಾನ ಘೋಷಣೆ ಸೇರಿ ರಾಜ್ಯ ಬಜೆಟ್‌ನಲ್ಲಿ ಜಿಲ್ಲೆಗೆ ಬಂಪರ್‌ ಕೊಡುಗೆ ನಿರೀಕ್ಷಿಸಲಾಗಿದೆ ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.

ನಗರದ ಸಹ್ಯಾದ್ರಿ ಸರ್ಕಲ್‌ ಬಳಿ ಒಂದು ಕೋಟಿ ರೂ. ಅಂದಾಜಿನ ಯುಜಿಡಿ ಸಂಪರ್ಕದ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿ, ಸಿಎಂ ಮಾ.8 ರಂದು ಮಂಡಿಸಲಿರುವ 2021- 22ನೇ ಸಾಲಿನ ಬಜೆಟ್‌ನಲ್ಲಿ ಜಿಲ್ಲೆಗೆ ಸಿಹಿ ಸಂದೇಶ ಸಿಗಲಿದೆ. ಹಾಸನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುದಾನ ಘೋಷಣೆ ಆಗಲಿದೆ ಎಂದು ಹೇಳಿದರು.

ಎಲ್ಲಾ ಮಂತ್ರಿಗಳಿಗೂ ಮನವಿ: ವಿಮಾನ ನಿಲ್ದಾಣ ನಿರ್ಮಾಣಕ್ಕೆ ಇದುವರೆಗೆ ಇದ್ದ ವಿಘ್ನ ನಿವಾರಣೆಯಾಗುವ ಕಾಲ ಸನ್ನಿಹಿತವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಉತ್ಸಕರಾಗಿದ್ದಾರೆ. ಬಜೆಟ್‌ನಲ್ಲಿ ಜಿಲ್ಲೆಗೆ ಯೋಜನೆಗಳ ಘೋಷಣೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಎಲ್ಲಾ ಮಂತ್ರಿಗಳು ಮನವಿ ಮಾಡಲಾಗಿದ್ದು, ಸಕಾರಾತ್ಮಕ ಸ್ಪಂದನೆಯೂ ಸಚಿವರಿಂದ ಸಿಕ್ಕದೆ ಎಂದು ಹೇಳಿದರು.

ಯುಜಿಡಿ ಸಮಸ್ಯೆಗೆ ಪರಿಹಾರ: ನಗರದ ದೇವಿಗೆರೆ ವೃತ್ತದಿಂದ ಮಲೆನಾಡು ಎಂಜಿನಿಯರಿಂಗ್‌ ಕಾಲೇಜುವರೆಗೂ ಸಂಪರ್ಕ ಕಲ್ಪಿಸುವ ಒಳಚರಂಡಿ ಸಂಪರ್ಕದಲ್ಲಿ ತೊಂದರೆಯಿತ್ತು. ದೇವಿಗೆರೆ ಬಳಿ ಹಲವು ಬಾರಿ ಚರಂಡಿ ಲೈನ್‌ ಬ್ಲಾಕ್‌ ಆಗುತ್ತಿತ್ತು. ಹಾಗಾಗಿ ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿ ಒಂದು ಕೋಟಿ ರೂ. ವೆಚ್ಚದಲ್ಲಿ ನಗರಸಭೆಯಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಒಂದು ತಿಂಗಳಲ್ಲಿ ಯುಜಿಡಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸದಿದ್ದರೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದೂ ಎಚ್ಚರಿಕೆ ನೀಡಿದರು.

ನಗರಸಭಾ ಸದಸ್ಯ ಅಕ್ಮಲ್‌, ಪೌರಾಯುಕ್ತ ಕೃಷ್ಣಮೂರ್ತಿ, ಎಂಜಿನಿಯರ್‌ ವೆಂಕಟೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.