ಆತ್ಮವಿಶ್ವಾಸ ರೂಢಿಸಿಕೊಂಡರೇ ಸಾಧನೆ ಸಾಧ್ಯ: ಪ್ರೀತಂಗೌಡ


Team Udayavani, Jun 19, 2022, 5:00 PM IST

tdy-21

ಹಾಸನ: ವಿದ್ಯಾರ್ಥಿಗಳು ಆತ್ಮ ವಿಶ್ವಾಸ ಮೈಗೂಡಿಸಿಕೊಂಡರೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಪ್ರೀತಂ ಜೆ.ಗೌಡ ಅವರು ಹೇಳಿದರು.

ನಗರದ ಎಂ.ಜಿ. ರಸ್ತೆಯಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವತಿಯರು ತಮ್ಮ ಪದವಿ ಮುಗಿಯುವ ಹಂತಕ್ಕೆ ಬರುತ್ತಿದ್ದಂತೆ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆರ್ಥಿಕವಾಗಿ ಸದೃಢರಾದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಮ್ಮೊಳಗಿನ ಕ್ರೀಯಾಶೀಲತೆಯನ್ನು ಒಂದಿಷ್ಟು ಬಳಸಿಕೊಂಡರೆ ನಾವು ಮಾಡುವ ಕೆಲಸದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.

ವಿದ್ಯಾಭ್ಯಾಸದ ಸಂದರ್ಭದಲ್ಲಿ ಮೊಬೈಲ್‌ ಫೋನ್‌ ಗಳಿಗೆ ಹೆಚ್ಚು ಅಂಟಿಕೊಳ್ಳಬಾರದು. ಸಾಮಾಜಿಕ ಜಾಲ ತಾಣಗಳು ಜೀವನದಲ್ಲಿ ಒಂದು ಭಾಗವಾಗಬೇಕು. ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ಪಠ್ಯೇತರ ಚಟುವ ಟಿಕೆ ಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಶ್ರದ್ಧೆ, ಸಮಯ ಪಾಲನೆ, ಆತ್ಮವಿಶ್ವಾಸ ಬೆಳೆಸಿಕೊಂಡು ಕಲಿ ಯುವ ಮೂಲಕ ಪೋಷಕರಿಗೆ ಕೀರ್ತಿ ತರುವ ಕೆಲಸ ವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿದರು.

ಆಸಕ್ತಿಯಿರುವ ಕ್ಷೇತ್ರದಲ್ಲಿ ಸಾಧಿಸಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಎಚ್‌.ಎಲ್‌ ಮಲ್ಲೇಶ್‌ಗೌಡ ಅವರು ಮಾತನಾಡಿ, ಯುವತಿಯರು ತಮ್ಮ 18 ರಿಂದ 24 ನೇ ವಯಸ್ಸಿನ ಅವಧಿಯಲ್ಲಿ ಅತ್ಯಂತ ಜಾಗರುಕತೆಯಿಂದ ಇದ್ದು, ಏನನ್ನು ಬೇಕಾದರೂ ಸಾಧನೆ ಮಾಡಬಲ್ಲೆ ಎಂಬ ಸಕಾರಾತ್ಮಕ ಧೋರಣೆ ರೂಢಿಸಿಕೊಳ್ಳಬೇಕು. ಇಂದಿನ ಯುವತಿಯರು ತಾವು ಓದುವ ಪದವಿಯೇ ಬೇರೆ, ವೃತ್ತಿ ಮಾಡುವುದು ಬೇರೆ ಕ್ಷೇತ್ರ ಎಂಬಂತಾಗಿದೆ. ಅದರ ಬದಲು ತಮ್ಮಗಿಷ್ಟವಾದ ಹಾಗೂ ತಮಗೆ ಆಸಕ್ತಿ ಇರುವ ಕ್ಷೇತ್ರಗಳ ಬಗ್ಗೆ ಆಸಕ್ತಿ ಹೊಂದಿ ಸಾಧನೆ ಮಾಡಬೇಕು. ಮಕ್ಕಳಿಗೆ ಏನನ್ನು ಓದಿಸಬೇಕು ಎಂಬು ವುದರ ಬಗ್ಗೆ ಈಗ ರಾಜ್ಯದಲ್ಲಿ ಚರ್ಚೆ ನಡೆಯುತ್ತಿದೆ. ಎಡಪಂಥ, ಬಲಪಂಥೀಯ ವಾದದ ಚರ್ಚೆಗಳು ನಡೆಯುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ತಜ್ಞರನ್ನು ಪಠ್ಯ ಪರಿಷ್ಕರಣೆಯ ಹೊಣೆ ನೀಡುವ ಮೂಲಕ ಮಕ್ಕಳಿಗೆ ಏನು ಬೇಕು ಎಂಬುವುದನ್ನು ಕಲಿಸಬೇಕು ಎಂದರು.

ಸತ್ಪ್ರಂಜೆಯನ್ನಾಗಿ ರೂಪಿಸಿ: ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ. ಹಂಪನಹಳ್ಳಿ ತಿಮ್ಮೇಗೌಡ ಮಾತನಾಡಿ, ಪ್ರತಿ ಕುಟುಂಬದಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಬೇಕಾದ ಹೊಣೆ ಗಾರಿಕೆ ಪೋಷಕರ ಮೇಲಿದೆ ಎಂದರು.

ಸಾಂಸ್ಕೃತಿಕ ವೇದಿಕೆ ಬಳಸಿಕೊಳ್ಳಿ: ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲ ಡಾ.ಕೆ.ಟಿ. ಕೃಷ್ಣೇಗೌಡ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ಪಠ್ಯದ ಜೊತೆಗೆ ಪಠ್ಯೇ ತರ ಚಟುವಟಿಕೆಗಳು ಮುಖ್ಯ. ವಿದ್ಯಾರ್ಥಿಗಳು ಮಕ್ಕಳು ಕೇವಲ ಪಠ್ಯಕ್ಕೆ ಮಾತ್ರ ಸೀಮತವಾಗದೆ, ತಮ್ಮಲ್ಲಿನ ಪ್ರತಿಭೆ ಅನಾವರಣ ಮಾಡಿ ಕೊಳ್ಳಲು ಸಾಂಸ್ಕೃತಿಕ ವೇದಿಕೆ ಬಳಕೆ ಮಾಡಿಕೊಳ್ಳಬೇಕು ಎಂದರು.

ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಸಾಂಸ್ಕೃತಿಕ ವೇದಿಕೆ ಸಂಚಾ ಲಕ ಹರೀಶ್‌ ಹಾಗೂ ಕಾಲೇಜಿನ ವಿವಿಧ ವಿಭಾಗದ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.