ರಸ್ತೆ ಕಾಮಗಾರಿಗೆ ಶಾಸಕ ಚಾಲನೆ
Team Udayavani, Dec 4, 2019, 12:34 PM IST
ಅರಸೀಕೆರೆ: ತಾಲೂಕಿನ ಅಗ್ಗುಂದ ಗ್ರಾಮದ ಸಮೀಪದಲ್ಲಿರುವ ಅಮ್ಮನ ಹಟ್ಟಿ ಗಂಗಮಾಳಮ್ಮ ದೇವಿಯ ದೇವಸ್ಥಾನದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಹೇಳಿದರು.
ದೇವಾಲಯದ ಸುತ್ತ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಲಕ್ಷಾಂತರ ಭಕ್ತರ ಆರಾಧ್ಯ ದೇವಿ ವಾಗಿರುವ ಗಂಗಮಾಳಿಕಾ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ದೃಷ್ಟಿಯಿಂದ ಗ್ರಾಮದ ರಸ್ತೆಗಳು ಹಾಗೂ ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು.
ದುಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಜೇಯ ಮಾತನಾಡಿ, ಭಕ್ತ ಸಮೂಹದ ಸಹಕಾರದಿಂದ ಶ್ರೀ ಕ್ಷೇತ್ರವೂ ಅಭಿವೃದ್ಧಿ ಹೊಂದುತ್ತಿದೆ. ದೇವಾಲಯ ಅಭಿವೃದ್ಧಿ ಸಮಿತಿಯಿಂದ ದಾಸೋಹ ನಡೆಸಲಾಗುತ್ತಿದೆ ಎಂದರು.
ಭಕ್ತಾದಿಗಳು ತಂಗಲು ಯಾತ್ರಿ ನಿವಾಸ, ಸಭೆ ಸಮಾರಂಭಗಳನ್ನು ನಡೆಸಲು ಸಮುದಾಯ ಭವನ ಮೊದಲಾ ಮೂಲ ಸೌಕರ್ಯಗಳನ್ನು ಕ್ಷೇತ್ರದಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು. ಮುಖಂಡರಾದ ಮಹಾಲಿಂಗಪ್ಪ, ಪೂಜಾರಪ್ಪ, ಶಿವಲಿಂಗಪ್ಪ, ಶೇಖರಪ್ಪ, ಪೀಯಣ್ಣ, ಶಂಕರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.