ಕೋವಿಡ್ 19 ಆಸ್ಪತ್ರೆಗೆ ಎಂಎಲ್ಸಿ ಭೇಟಿ
Team Udayavani, Apr 8, 2020, 1:15 PM IST
ಹಾಸನ: ಜಿಲ್ಲಾ ಕೋವಿಡ್ 19 ಆಸ್ಪತ್ರೆಯೆಂದು ಘೋಷಣೆಯಾಗಿರುವ ಹಾಸನ ವೈದ್ಯಕೀಯ ಕಾಲೇಜು (ಹಿಮ್ಸ್) ಬೋಧಕ ಆಸ್ಪತ್ರೆಗೆಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಅವರು ಮಂಗಳವಾರ ಭೇಟಿ ನೀಡಿ ವೈದ್ಯಕೀಯ ಸಿದ್ಧತೆಯನ್ನು ಪರಿಶೀಲಿಸಿದರು.
ಹಾಸನ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಆರ್.ಕೃಷ್ಣ ಮೂರ್ತಿ ಅವರು ಕೊರೊನಾ ಪ್ರಕರಣಗಳು ವರದಿಯಾದರೆ ಚಿಕಿತ್ಸೆ ನೀಡಲು ಸಜ್ಜುಗೊಳಿಸಿರುವ ಐಸೋಲೇಷನ್ ವಾರ್ಡ್, ಅಲ್ಲಿನಸಿದ್ಧತೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಸ್ವಾಮಿ ಅವರು, ಅದೃಷ್ಟಾವಶಾತ್, ಜಿಲ್ಲೆಯಲ್ಲಿ ಈವರೆಗೂ ಕೊರೊನಾ ಪ್ರಕರಣಗಳೂ ವರದಿಯಾಗಿಲ್ಲ. ಇನ್ನು ಮುಂದೆಯೂ ಜಿಲ್ಲೆಯಲ್ಲಿ ಕೋವಿಡ್ 19 ಕಾಣಿಸಿಕೊಳ್ಳಬಾರದು ಎಂದು ದೇವರಲ್ಲಿ ಪ್ರಾರ್ಥಿಸುವೆ. ಹಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಸುಸಜ್ಜಿತ ವ್ಯವಸ್ಥೆ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವೈದ್ಯರು ಹಾಗೂ ಸಹಾಯಕ ಸಿಬ್ಬಂದಿಗಳ ಸೇವೆ ಅಮೂಲ್ಯ. ಅವರಿಗೆ ಅಗತ್ಯ ಸಾಧನ, ಸಲಕರಣಗಳನ್ನು ನೀಡಿ. ಪಿಪಿಇ ಕಿಟ್ ಹಾಗೂ ವೆಂಟಿಲೇಟರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಲು ಪ್ರಯತ್ನಿಸ ಬೇಕು ಎಂದು ವೈದ್ಯರಿಗೆ ಸಲಹೆ ನೀಡಿದ ಅವರು, ಜಿಲ್ಲೆಯಲ್ಲಿ ಜನರು ಆರೋಗ್ಯ ಇಲಾಖೆಯ ಮಾರ್ಗದರ್ಶನವನ್ನು ಪಾಲಿಸಬೇಕು. ಕೋವಿಡ್ 19 ಶಂಕೆಯ ಪ್ರಕರಣಗಳ ಪರಿಶೀಲನೆ ವೇಲೆ ವೈದ್ಯ ಸಿಬ್ಬಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.