ಮೋದಿ ಮತ್ತೂಮ್ಮೆ ಪ್ರಧಾನಿಯಾಗುವುದು ಖಚಿತ

Team Udayavani, Apr 9, 2019, 5:11 PM IST

has-1
ಆಲೂರು: ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾವುದು ಖಚಿತ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಕದಾಳು ಗ್ರಾಮದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎ.ಮಂಜು ಪರ ಚುನಾವಣಾ ಪ್ರಚಾರ ನಡೆಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಹಾಸನ ಸೇರಿದಂತೆ ದೇಶದಲ್ಲಿ ಬಿಜೆಪಿ ಬಹುಮತದಿಂದ ಜಯಭೇರಿ
ಬಾರಿಸುವುದು ಖಚಿತ ಎಂದರು.
ದೇಶಭಕ್ತಿಯ ಆಂದೋಲನ: ಎಲ್ಲಿ ರಾಷ್ಟ್ರಭಕ್ತಿ ಜಾಗೃತವಾಗುತ್ತದೋ ಅಲ್ಲಿ ಹಣ, ಜಾತಿ, ಧರ್ಮ, ಪ್ರಾದೇಶಿಕತೆ ಯಾವುದೂ ಲೆಕ್ಕಕ್ಕೆ ಬರುವುದಿಲ್ಲ. ಈ ನಿಟ್ಟಿಲ್ಲಿ ದೇಶಾದ್ಯಂತ ದೇಶಭಕ್ತಿಯ ಆಂದೋಲನ ನಡೆಯುತ್ತಿದೆ ಹಾಗಾಗಿ ಹಾಸನ ಕ್ಷೇತ್ರವು ಸೇರಿದಂತೆ ಇಡೀ ರಾಷ್ಟ್ರದಲ್ಲಿ ಬಿಜೆಪಿ ಬಹುಮತದಿಂದ ಜಯಭೇರಿ ಬಾರಿಸುವುದು ನಿಶ್ಚಿತ ಎಂದರು.
ಪ್ರಾಮಾಣಿಕತೆ, ಭಷ್ಟಾಚಾರದ ಸಮರ: ಈ ಬಾರಿಯ ಲೋಕಸಭಾ ಚುನಾವಣೆ ಪ್ರಾಮಾಣಿಕತೆ ಹಾಗೂ ಭ್ರಷ್ಟಾಚಾರದ ನಡುವಿನ ಚುನಾವಣೆ ಯಾಗಿದ್ದು, ಪ್ರಾಮಾಣಿಕತೆಯ ಕಡೆ ದೇಶದಲ್ಲಿ 5 ವರ್ಷ ಆಡಳಿಕೊಟ್ಟ ಪ್ರಧಾನಿ ನರೇಂದ್ರ ಮೋದಿಯವರು ಇದ್ದಾರೆ. ಭ್ರಷ್ಟಾಚಾರದ ಕಡೆ ಅಪವಿತ್ರ ಮೈತ್ರಿ ಸರ್ಕಾರದ ರಾಜಕಾರಣಿಗಳು ಇದ್ದಾರೆ. ಆದರೆ ಪ್ರಧಾನಿ ಮೋದಿ ಅವರ 5 ವರ್ಷಗಳ ಆಡಳಿದ ಅವಧಿಯಲ್ಲಿ ಮನುಷ್ಯನ ಕನಿಷ್ಠ ಅವಶ್ಯಕತೆಗಳಿಗೆ ಆದ್ಯತೆ ಕೊಟ್ಟಿದೆ. ಬ್ಯಾಂಕ್‌ ಖಾತೆಯನ್ನು ಹೊಂದಿಲ್ಲದವರಿಗೆ ಜನಧನ್‌ ಯೋಜನೆಯ ಮೂಲಕ ಖಾತೆಯನ್ನು ತೆರೆದು ಹಣವನ್ನು ನೀಡಲಾಗಿದೆ. ಪ್ರತಿಯೊಬ್ಬರಿಗೂ ಶೌಚಾಲಯ. ಎಲ್‌ಪಿಜಿ ಸೌಲಭ್ಯವಿಲ್ಲದವರಿಗೆ ಅನಿಲ ಭಾಗ್ಯಯೋಜನೆಯಡಿ ಗ್ಯಾಸ್‌ ವಿತರಣೆ ಮಾಡಲಾಗಿದೆ. ಬಡವರು 5 ಲಕ್ಷದ ವರೆಗೂ ಆರೋಗ್ಯ ಚಿಕಿತ್ಸೆಯನ್ನು ಪಡೆಯಲು ಆಯುಷ್ಮಾನ್‌ ಕಾರ್ಡ್‌ ನೀಡಿದೆ. ವಸತಿ ವಂಚಿತ ಫ‌ಲಾನುಭವಿಗಳಿಗೆ ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆಯಡಿ ಮನೆ ಕಟ್ಟಿಕೊಡುವ ಕೆಲಸವನ್ನು ಮಾಡುತ್ತ ಭ್ರಷ್ಟಾಚಾರವಿಲ್ಲದ ಕಳಂಕ ರಹಿತ ಆಡಳಿತವನ್ನು ನಡೆಸಿ ಜನಮನ್ನಣೆಗೆ ಪಾತ್ರವಾಗಿದೆ ಎಂದರು.
ದೇಶದ ಸೇವೆ, ಪಕ್ಷದ ಸಂಘಟನೆಗಾಗಿ ಹಗಲಿರುಳೂ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಮತ್ತೂಮ್ಮೆ ಈ ದೇಶದ ಪ್ರಧಾನಿಯಾನ್ನಾಗಿಸುವುದು ಪ್ರತಿಯೊಬ್ಬ ಮತದಾರರ ಹಾಗೂ ಪಕ್ಷದ ಕಾರ್ಯಕರ್ತರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ವಿಧಾನ ಪರಿಷತ್‌ ಸದಸ್ಯ ಪೂರ್ಣೇಶ್‌, ತಾಲೂಕು ಬಿಜೆಪಿ ಅಧ್ಯಕ್ಷ ಲೋಕೇಶ್‌ ಕದಾಳು, ಪ್ರಧಾನ ಕಾರ್ಯದರ್ಶಿ ಧರ್ಮರಾಜು, ಹೇಮಂತ್‌, ಹಿರಿಯ ಮುಖಂಡರಾದ ರೇಣುಕುಮಾರ್‌, ಪಕ್ಷದ ಕಾರ್ಯಕರ್ತರು ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.