ಮುಂಗಾರು ಮಳೆ ಅನಾಹುತ ನಿಯಂತ್ರಣಕ್ಕೆ ಸಜ್ಜು

Team Udayavani, Jun 8, 2021, 1:45 PM IST

ಮುಂಗಾರು ಮಳೆ ಅನಾಹುತ ನಿಯಂತ್ರಣಕ್ಕೆ ಸಜ್ಜು

ಹಾಸನ: ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸುವ ಅನಾಹುತ ಮತ್ತು ಅಪಾಯಗಳ ನಿಯಂತ್ರಣ ಹಾಗೂ ನಿರ್ವಹಣೆಗೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಳೆಗಾಲದ ವಿಪತ್ತುಗಳ ನಿರ್ವಹಣೆ ಸಂಬಂಧ ಸೋಮವಾರ ವಿಡಿಯೋ ಸಂವಾದ ನಡೆಸಿದ ಅವರು, ಈ ಹಿಂದಿನ ಅನುಭವಗಳ ಆಧಾರದ ಮೇಲೆ ವ್ಯವಸ್ಥಿತ ತಯಾರಿ ಕೈಗೊಳ್ಳಲು ನಿರ್ದೇಶನ ನೀಡಿದರು.

ಭೂಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ ಮೊದಲೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸಮಸ್ಯಾತ್ಮಕ ಎಂದು ಗುರುತಿಸಿರುವ ಗ್ರಾಮಗಳಲ್ಲಿ ಪ್ರವಾಹ ಅಥವಾ ಇತರ ಅನಾಹುತ ಸಂಭವಿಸಿದಾಗ ಪರಿಸ್ಥಿತಿಗೆ ಅನುಗುಣವಾಗಿ ತಾತ್ಕಾಲಿಕ ನಿರಾಶ್ರಿತರ ಕೇಂದ್ರಗಳನ್ನು ತೆರೆದು ಜನರಿಗೆ ಸರಿಯಾದ ಊಟೋಪಚಾರ ಒದಗಿಸಬೇಕು ಎಂದರು.

ರಾಜ್ಯದ ಯೋಜನಾ ಆಯುಕ್ತೆ ವಂದಿತಾ ಶರ್ಮಾ ಮಾತನಾಡಿ, ಕಳೆದ ಬಾರಿ ಸಂಭಸಿದಂತಹ ಸಮಸ್ಯೆಗಳು ಮತ್ತೆ ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ಕುಮಾರ್‌, ಜಂಟಿ ಕೃಷಿ ನಿರ್ದೇಶಕ ರವಿ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಯೋಗೇಶ್‌ ಹಾಗೂ ವಿವಿಧ ಇಲಾಖಾ ಅಧಿ ಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

ದುಸ್ಥಿತಿಯ ಶಾಲೆ, ಆಸ್ಪತ್ರೆ, ಕಟ್ಟಡ ಗುರುತಿಸಿ :

ಜಿಲ್ಲಾಧಿಕಾರಿ, ಪೊಲೀಸ್‌ ಇಲಾಖೆ, ಜಿಪಂ ಅಧಿಕಾರಿ ಗಳು ಒಟ್ಟಾಗಿ ಕೆಲಸ ಮಾಡುವುದರಿಂದ ಮುಂಗಾರಿನಲ್ಲಾಗುವ ಅನಾವೃಷ್ಟಿ, ಹಾನಿಗಳನ್ನು ವ್ಯವಸ್ಥಿತವಾಗಿ ಕಡಿಮೆ ಮಾಡಬಹುದಾಗಿದೆ. ನದಿಗಳ ಪಾತ್ರದ ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ಹೆಚ್ಚಿನ ಗಮನಹರಿಸಬೇಕು. ಮಳೆ ಪ್ರಾರಂಭಕ್ಕೆ ಮುನ್ನವೇ ಅಪಾಯದ ಸ್ಥಿತಿಯಲ್ಲಿರುವ ಶಾಲೆ, ಆಸ್ಪತ್ರೆ ಹಾಗೂ ಇತರ ಕಟ್ಟಡ ಗಳನ್ನು ಗ್ರಾಮವಾರು ಗುರುತಿಸಿ ಹಾನಿ ನಿಯಂತ್ರಿಸ ಬೇಕು. ಅಪಾಯಕ್ಕೆ ಸಿಲುಕುವವರನ್ನು ಸ್ಥಳಾಂತರ ಮಾಡಬೇಕು. ಮಳೆಯಿಂದ ಉಂಟಾಗುವ ಮನೆಹಾನಿ, ಸಾಮಗ್ರಿ ಹಾನಿಗೆ ತಕ್ಷಣವೇ ತುರ್ತು ಪರಿಹಾರ ಒದಗಿಸ ಬೇಕು ಎಂದು ಕಂದಾಯ ಸಚಿವರು ಸೂಚಿಸಿದರು

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.