ಆಯುರ್ವೇದ ಹೆಚ್ಚು ಜನರಿಗೆ ತಲುಪುವಂತಾಗಲಿ

ಯುವ ಆಯುರ್ವೇದ ವೈದ್ಯರು ನಿರಂತರ ಅಧ್ಯಯನ, ಸಂಶೋಧನೆ, ಸೇವಾ ಕಾರ್ಯದಲ್ಲಿ ತೊಡಗಲಿ: ಡಾ.ವೀರೇಂದ್ರ ಹೆಗ್ಗ ಡೆ

Team Udayavani, May 12, 2019, 9:32 AM IST

HASAN-TDY-1..

ಹಾಸನ: ಯುವ ಆಯುರ್ವೇದ ವೈದ್ಯರು ನಿರಂತರ ಅಧ್ಯಯನ, ಸಂಶೋಧನೆ, ಸೇವಾ ಕಾರ್ಯದಲ್ಲಿ ತೊಡಗಿ ಆಯುರ್ವೇದವು ಹೆಚ್ಚು ಜನರಿಗೆ ತಲಪುವಂತೆ ಮಾಡಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದರು.

ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಯುರ್ವೇದ ಕಾಲೇಜಿನ 22ನೇ ಪದವಿ ಪ್ರದಾನ ಸಮಾರಂಭವಾದ ಶಿಖಾನುಪ್ರವೇಶ ದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡಿದರು.

ಮನೋದೈಹಿಕ ಕಾಯಿಲೆ ನಿವಾರಣೆ: ಶರೀರ ಮನಸ್ಸುಗಳೆರಡರ ಅಸಮತೋಲನವನ್ನು ಸರಿದೂಗಿ ಸುವ ಆಯುರ್ವೇದ ವಿಜ್ಞಾನವು ಇಂದಿನ ದಿನಮಾನ ಗಳ ಮನೋದೈಹಿಕ ಕಾಯಿಲೆಗಳ ತಡೆಗಟ್ಟುವಿಕೆ ನಿವಾರಿಸುವಿಕೆಗೆ ಅತ್ಯವಶ್ಯಕ ಅನಿವಾರ್ಯವಾಗಿದೆ. ಆದ್ದರಿಂದ ಆಯುರ್ವೇದ ಹೆಚ್ಚು ಜನರಿಗೆ ತಲಪಬೇಕು ಎಂದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿ ಗಳು ವಿಶ್ವದೆಲ್ಲೆಡೆ ಆಯುರ್ವೇದ ವಲಯದಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವುದು ನನಗೆ ಸಂತಸ ಉಂಟುಮಾಡಿದೆ ಎಂದು ಹೇಳಿದರು.

ಆಯುರ್ವೇದದ ಬೇಡಿಕೆ ಹೆಚ್ಚಲಿದೆ: ಪದವಿ ಪ್ರದಾನ ಮಾಡಿದ ಕೇಂದ್ರ ಸರ್ಕಾರದ ಆಯುಷ್‌ ಸಚಿವಾಲಯದ ಕಾರ್ಯದರ್ಶಿ ವೈದ್ಯ ರಾಜೇಶ್‌ ಕೊಟೆಚಾ ಅವರು ಮಾತನಾಡಿ, 2013 ರಲ್ಲಿ ಆಯುಷ್‌ ಸಚಿವಾಲಯ ಅಸ್ತಿತ್ವಕ್ಕೆ ಬಂದ ನಂತರ ಆಯುಷ್‌ ವಲಯದಲ್ಲಿ ಪುನಶ್ಚೇತನ ಉಂಟಾಗುತ್ತಿದೆ. ಆದರೆ ವೀರೇಂದ್ರ ಹೆಗ್ಗಡೆಯವರು 30 ವರ್ಷಗಳ ಮುಂಚೆಯೇ ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸಾ ವಿಜ್ಞಾನಗಳ ಬೆಳವಣಿಗೆಗೆ ನಾಂದಿ ಹಾಡಿದ್ದರು. ಈ ತರಹದ ಆಲೋಚನೆಗಳು ಇಂತಹ ಯುಗಪುರುಷರಲ್ಲಿ ಮಾತ್ರ ಸಾಧ್ಯ. ಮುಂಬರುವ ದಿನಗಳಲ್ಲಿ ಅನೇಕ ದೇಶಗಳಲ್ಲಿ ಆಯುರ್ವೇದದ ಬೇಡಿಕೆ ಹೆಚ್ಚಲಿದೆ ಎಂದು ತಿಳಿಸಿದರು.

ಯುವ ವೈದ್ಯರಿಗೆ ವೃತ್ತಿ ಪರತೆ ಅಗತ್ಯ: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಎಸ್‌.ಸಚ್ಚಿದಾನಂದ ಅವರು ಮಾತ ನಾಡಿ, ಯುವ ವೈದ್ಯರು ಮಾದರಿ ಜೀವನ ನಡೆಸ ಬೇಕು. ತಮ್ಮ ಜ್ಞಾನವನ್ನು ಮೊನಚುಗೊಳಿಸುತ್ತಾ, ಇತರೆ ತಜ್ಞ ವೈದ್ಯರೊಡನೆ ಚರ್ಚಿಸುತ್ತಾ, ರೋಗಿ ಗಳೊಡನೆ ಉತ್ತಮ ಬಾಂಧವ್ಯ ಇರಿಸಿಕೊಂಡು ವೃತ್ತಿ ಪರತೆ ಹೊಂದಬೇಕು. ನೀವು ಹಣದ ಹಿಂದೆ ಹೋಗದೇ ಅದೇ ನಿಮ್ಮನ್ನು ಹಿಂಬಾಲಿಸುವಂತೆ ಸಾರ್ಥಕ ಕಾಯಕ ಮಾಡಿ. ನಿಮ್ಮ ಮಾತೃ ವಿದ್ಯಾ ಸಂಸ್ಥೆಯೊಡನೆ ನಿರಂತರ ಸಂಪರ್ಕದಲ್ಲಿರುವುದು ಒಳಿತು ಎಂದು ಕಿವಿಮಾತು ಹೇಳಿದರು.

ದೇಶ, ವಿದೇಶಗಳಲ್ಲಿ ಪ್ರಖ್ಯಾತಿ: ಕಾಲೇಜಿನ ಪ್ರಾಂಶು ಪಾಲ ಡಾ. ಪ್ರಸನ್ನ ನರಸಿಂಹರಾವ್‌ ಮಾತನಾಡಿ, ಹಾಸನದ ಎಸ್‌ಡಿಎಂ ಆಯುರ್ವೇದ ಕಾಲೇಜು ದೇಶದ ಹಲವು ರಾಜ್ಯಗಳ ಮತ್ತು ವಿದೇಶಗಳ ವಿದ್ಯಾರ್ಥಿಗಳನ್ನು ಹೊಂದಿದೆ. ಆ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆದು ಹೋದ ನಂತರ ತಮ್ಮ ತಮ್ಮ ರಾಜ್ಯಗಳಲ್ಲಿ ತಮ್ಮ ವೈಶಿಷ್ಟ್ಯತೆಯ ಮೂಲಕ ಪ್ರಸಿದ್ಧಿ ಪಡೆದು ನಮ್ಮ ಸಂಸ್ಥೆಯ ಹೆಸರನ್ನು ವಿಶ್ವದೆಲ್ಲೆಡೆ ಹರಡುವುದು ಸಂತಸದ ವಿಷಯ ಎಂದರು.

ಈ ಪದವಿ ಪ್ರದಾನ ಸಮಾರಂಭದಲ್ಲಿ 68 ಬಿಎಎಂಎಸ್‌ ಪದವೀಧರರು, 93 ವಿವಿಧ ಸ್ನಾತಕೋತ್ತರ ವಿಭಾಗಗಳ ಪದವೀಧರರು, ಒಬ್ಬ ಪಿಎಚ್‌ಡಿ ಪದವೀಧರ ಗಣ್ಯರಿಂದ ಪದಪ್ರಮಾಣ ಪತ್ರ ಸ್ವೀಕರಿಸಿದರು.

ಈ ಸಮಾರಂಭದಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಡಾ.ಗುರುದೀಪ್‌ಸಿಂಗ್‌, ಉಡುಪಿಯ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಬಿ.ರವಿಶಂಕರ್‌, ಬೆಂಗಳೂರಿನ ಎಸ್‌.ಡಿ.ಎಂ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ್‌ ಕುಂಜಾಲ್, ಉಜಿರೆಯ ಎಸ್‌.ಡಿ.ಎಂ. ಯೋಗ ಪ್ರಕೃತಿ ಚಿಕಿತ್ಸಾ ವಿಜ್ಞಾನಗಳ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್‌ ಶೆಟ್ಟಿ, ಉಡುಪಿಯ ಎಸ್‌.ಡಿ.ಎಂ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಶ್ರೀನಿವಾಸ್‌ ಆಚಾರ್ಯ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಡೀನ್‌ ಡಾ.ಯು. ಶೈಲಜಾ, ಶೈಕ್ಷಣಿಕ ವಿಭಾಗದ ಡೀನ್‌ ಡಾ.ಕೆ.ಜೆ.ಗಿರೀಶ್‌, ಹೆಚ್ಚುವರಿ ಡೀನ್‌ ಡಾ.ಪ್ರಕಾಶ್‌ ಹೆಗಡೆ ಹಾಗೂ ವೈದ್ಯಕೀಯ ಅಧೀಕ್ಷಕ‌ ಡಾ.ಮುರಳೀಧರ್‌ ಪಿ.ಪ್ರಜಾರ್‌ ಉಪಸ್ಥಿತರಿದ್ದರು. ಡಾ.ಹರಿಣಿ ಡಾ.ಗುರುಬಸವರಾಜ್‌ ಯಲಗಚ್ಚಿನ ನಿರೂಪಿಸಿದರು.

ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.