ಪುರಸಭೆ ನಿರ್ಲಕ್ಷ್ಯ: ಹೆಚ್ಚಿದ ವಾಯು ಮಾಲಿನ್ಯ


Team Udayavani, Oct 25, 2022, 4:53 PM IST

ಪುರಸಭೆ ನಿರ್ಲಕ್ಷ್ಯ: ಹೆಚ್ಚಿದ ವಾಯು ಮಾಲಿನ್ಯ

ಚನ್ನರಾಯಪಟ್ಟಣ: ಪಟ್ಟಣದಲ್ಲಿ ಹಾದು ಹೋಗಿ ರುವ ಹೇಮಾವತಿ ಎಡದಂಡೆ ನಾಲೆ ಮೇಲೆ ಪದೇ ಪದೇ ಭುಗಿಲೇಳುವ ತ್ಯಾಜ್ಯ ಸಮಸ್ಯೆಯನ್ನು ಬೆಂಕಿಯ ಮೂಲಕ ಶಮನಗೊಳಿ ಸುವ ಪ್ರಯತ್ನ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾಗಿರುವ ನೀರಾವರಿ ಇಲಾ ಖೆ ಹಾಗೂ ಪುರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದರಿಂದ ಪರಿಸರ ಮಾಲಿನ್ಯ ದಿನೇ ದಿನೇ ಹೆಚ್ಚುತ್ತಿದೆ.

ನಿಯಮವೇನು..?: ವಾಯುಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ ಕಾಯಿದೆ 1981ರ ಸೆಕ್ಷನ್‌ 19(5) ರ ಅಡಿಯಲ್ಲಿ ರಾಜ್ಯ ಮಾ ಲಿನ್ಯ ನಿಯಂತ್ರಣ ಮಂಡಳಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆಧ ರಿಸಿ, ಕಸಕ್ಕೆ ಬೆಂಕಿ ಹಚ್ಚುವುದನ್ನು ರಾಜ್ಯ ಸರ್ಕಾರ ನಿರ್ಬಂಧಿ ಸಿ ಅಧಿಸೂಚನೆ ಹೊರಡಿಸಿದೆ. ಅದರಂತೆ, ಜನವಸತಿ ಪ್ರದೇಶ ಅಥವಾ ಬಯಲು ಜಾಗಗಳಲ್ಲಿ ಕಸಕ್ಕೆ ಬೆಂಕಿ ಇಡುವಂತ್ತಿಲ್ಲ. ಸರ್ಕಾರದ ಅದೇಶ ಉಲ್ಲಂ ಸಿ ಕಸಕ್ಕೆ ಬೆಂಕಿ ಹಚ್ಚಿದರೆ 5 ಲಕ್ಷ ರೂ.ವರೆಗೆ ದಂಡ ತೆರಬೇಕು. ಇಲ್ಲವೆ 5 ವರ್ಷ ಜೈಲು ಮತ್ತು ದಂಡ ಪಾವತಿ ಶಿಕ್ಷೆ ವಿಧಿಸಬದಹುದಾಗಿದೆ. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಅರಿವಿಲ್ಲದೆ ಇರುವುದರಿಂದ ಅವರು ಇದನ್ನು ಜಾರಿಗೆ ತರುವ ಗೋಜಿಗೆ ಹೋಗುತ್ತಿಲ್ಲ.

ನಿತ್ಯವೂ ಪಟ್ಟಣದಲ್ಲಿ ವಾಯು ಮಾಲಿನ್ಯ: ಕಠಿಣ ಕಾನೂನು ಇದ್ದರೂ ಇದುವರೆಗೂ ಯಾರ ಮೇಲೂ ಪ್ರಯೋಗ ಮಾಡಿಲ್ಲ. ಹೀಗಾಗಿ ಕೆಲವರು ಕಸದ ರಾಶಿ ಕರಗಿಸಲು ಬೆಂಕಿಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ಇದು ಜನರ ಆರೋಗ್ಯದ ಮೇಲೂ ದುಷ್ಟಪರಿಣಾಮ ಬೀರುತ್ತಿದೆ. ಕಸಕ್ಕೆ ಬೆಂಕಿ ಹಾಕುವವರ ವಿರುದ್ಧ ಕಠಿಣ ಕ್ರಮ ಜರುಗಿಸದೆ ಇರುವುದರಿಂದ ನಿತ್ಯವೂ ಪಟ್ಟಣದಲ್ಲಿ ವಾಯು ಮಾಲಿನ್ಯದಂತ ಘಟನೆ ಗಳು ಹೆಚ್ಚುತ್ತಿವೆ.

ಆರೋಗ್ಯಕ್ಕೆ ಮಾರಕ ಬೆಂಕಿ: ಅಸಮರ್ಪಕ ತ್ಯಾಜ್ಯ ವಿಲೇವಾರಿಯಿಂದ ವಾರ್ಡ್‌ನ ಜನತೆ ದುರ್ವಾಸನೆ ತಾಳಲಾರದೆ ಬೆಂಕಿ ಇಟ್ಟು ಸುಟ್ಟು ಹಾಕುವುದು ಸರ್ವೆ ಸಾಮಾನ್ಯವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕಾದ ಪುರಸಭೆ ಅಧಿಕಾರಿಗಳು ಎಲ್ಲೆಂದರಲ್ಲಿ ಕಸ ಬಿಸಾಡುವ ವ್ಯಕ್ತಿಗಳನ್ನು ಪತ್ತೆ ಹಚ್ಚುತ್ತಿಲ್ಲ. ಹೀಗಾಗಿ ಕಸಕ್ಕೆ ಬೆಂಕಿ ಹಾಕುವ ಪ್ರವೃತ್ತಿ ಪಟ್ಟಣದಲ್ಲಿ ಎಗ್ಗಿಲ್ಲದೆ ಸಾಗಿದೆ. ಕಸಕ್ಕೆ ಬೆಂಕಿ ಹಾಕುವುದರಿಂದ ಹೊ ರ ಬರುವ ವಿಷಕಾರಿ ಅನಿಲ ಜನ ಹಾಗೂ ಜಾನುವಾರುಗಳ ಆರೋಗ್ಯಕ್ಕೆ ಮಾರಕವಾಗುತ್ತಿವೆ.

ನಾಲೆ ಏರಿ ಮೇಲೆ ಹೆಚ್ಚು ಬೆಂಕಿ: ಹೇಮಾವತಿ ನಾಲೆ ಮೇಲೆ ಆಟೋಗಳಲ್ಲಿ ಆಗಮಿಸುವವರು ಕಸವನ್ನು ತಂದು ಸುರಿಯುತ್ತಾರೆ. ನಿರುಪಯುಕ್ತ ವಸ್ತುಗಳಿಗೆ ಬೆಂಕಿ ಹಾಕಲಾಗುತ್ತಿದೆ. ಇದರಿಂದ ಹೇಮಾವತಿ ಉದ್ಯಾನವ ನದಲ್ಲಿ ವಾಯು ವಿಹಾರ ಮಾಡುವವರಿಗೆ ತುಂಬಾ ಕಿರಿಕಿರಿ ಉಂಟಾಗುತ್ತಿದೆ. ಇನ್ನು ಪಟ್ಟಣಕ್ಕೆ ಆಗಮಿಸುವ ನಾಗಸಮುದ್ರ ಹಾಗೂ ಬೆಲಸಿಂದ ಗ್ರಾಮಸ್ಥರು ಮೂಗು ಮುಚ್ಚಿಕೊಂಡು ಸಂಚರಿಸುವಂತಾಗಿದೆ.

ಮುಂಜಾನೆ ವೇಳೆ ಧಗಧಗಿಸುವ ಬೆಂಕಿ: ಪಟ್ಟಣದಲ್ಲಿ ಅನೇಕ ಬಾರ್‌ ಅಂಡ್‌ ರೆಸ್ಟೋರೆಂಟ್‌, ವೈನ್‌ಶಾಪ್‌ ನಲ್ಲಿ ಬೀಳುವ ಟೆಟ್ರಾ ಪ್ಯಾಕ್‌, ಪ್ಲಾಸ್ಟಿಕ್‌ ಲೋಟ ಸೇರಿದಂತೆ ಮಣ್ಣಿನಲ್ಲಿ ಕರಗದ ಕಸವನ್ನು ಆಯಾ ಅಂಗಡಿ ಮಾಲಿಕರೇ ಮುಂದೆ ನಿಂತು ತಮ್ಮ ಕೂಲಿ ಕಾರ್ಮಿಕರ ಮೂಲಕ ರಸ್ತೆ ಬದಿಗೆ ಸುರಿಸಿ ಬೆಂಕಿ ಹಾಕಿಸುತ್ತಾರೆ. ಇನ್ನು ಗ್ಯಾರೇಜ್‌ ಮಾಲಿಕರು, ಪ್ಲಾಸ್ಟಿಕ್‌ ವಸ್ತುಗಳಿಗೆ ಬೆಂಕಿ ಹಾಕುವುದು ಮಾಮೂಲಾಗಿದೆ. ಅಂಗಡಿ ಮುಂಗಟ್ಟು, ಹೋಟೆಲ್‌ನಲ್ಲಿ ತಮ್ಮಲ್ಲಿ ಉತ್ಪತ್ತಿಯಾಗುವ ಕಸವನ್ನು ಪುರಸಭೆ ವಾಹನಕ್ಕೆ ನೀಡಲು ಮುಂದಾಗುತ್ತಾರೆ. ಆದರೆ, ಪುರಸಭೆ ಆಟೋ ಟಿಪ್ಪರ್‌ಗಳು ನಿತ್ಯವೂ ಕಸ ಸಂಗ್ರಹಣೆಗೆ ತೆರಳದೆ ಇರುವುದರಿಂದ ಅನ್ಯ ಮಾರ್ಗವಿಲ್ಲದೆ ರಾತ್ರಿ ವೇಳೆ ಅಂಗಡಿ ಬಾಗಿಲು ಹಾಕುವ ಸಮಯದಲ್ಲಿ ಕಸವನ್ನು ತಮ್ಮ ಅಂಗಡಿ ಮುಂದೆ ಸುರಿದು ಬೆಂಕಿ ಹಾಕುತ್ತಾರೆ. ಕೆಲವರು ನಾಲೆ ಏರಿ ಮೇ ಲೆ ಸುರಿದು ಬೆಂಕಿ ಹಾಕುವುದರಿಂದ ವಾಯು ಮಾಲಿನ್ಯದಲ್ಲಿಯೇ ವಾಯು ವಿಹಾರ ಮಾಡುವ ಪರಿಸ್ಥಿತಿ ಉದ್ಬವಾಗಿದೆ.

ನೀರಾವರಿ ಅಧಿಕಾರಿ ಬೇಜವಾಬ್ದಾರಿ: ನೀರಾವರಿ ಇಲಾಖೆಯಲ್ಲಿ ಉದ್ಯಾನವನ ನೋಡಿಕೊಳ್ಳಲ್ಲು ಕಾವಲುಗಾರರನ್ನು ನೇಮಿಸಿ ಕೈ ತೊಳೆದುಕೊಂಡಿದ್ದಾರೆ, ಅವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನುವುದನ್ನು ವಿಚಾ ರಣೆ ಮಡುತ್ತಿಲ್ಲ. ಅಧಿಕಾರಿಗಳಿಗೆ ಸರ್ಕಾರ ವೇತನದ ಅನೇಕ ಬತ್ಯೆಗಳನ್ನು ನೀಡಿ ಜೊತೆ ವಾಹನ ವ್ಯವಸ್ಥೆ ಕಲ್ಪಿಸಿದೆ. ಆದರೂ, ಹೇಮಾವತಿ ನಾಲೆ ಮೇಲೆ ಆಗುತ್ತಿರುವ ವಾಯು ಮಾಲಿನ್ಯ ತಪ್ಪಿ ಸಲು ಅಧಿಕಾರಿಗಳು ಬೇಜವಾಬ್ದಾರಿ ತೋರುತ್ತಿದ್ದಾರೆ.

ನೇಪತ್ಯಕ್ಕೆ ಸರಿದ ಪ್ಲಾಸ್ಟಿಕ್‌ ರೈಡ್‌: ಪಟ್ಟಣದಲ್ಲಿ ರಾಜಾ ರೋಷವಾಗಿ ಪ್ಲಾಸ್ಟಿಕ್‌ ಮಾರಾಟ ಮಾಡಲಾಗುತ್ತಿದೆ, ಮೇಲಧಿಕಾರಿ ಒತ್ತಡ ಹಾಕಿದಾಗ ಪೋಟೋ ಶೂಟ್‌ ಗಾಗಿ ಪುರಸಭೆ ಅಧಿಕಾರಿಗಳು ಪ್ಲಾಸ್ಟಿಕ್‌ ರೈಡ್‌ ಮಾಡಿ ಫೋಟೋ ತೆಗೆದು ಜಿಲ್ಲಾಡಳಿತಕ್ಕೆ ರವಾನೆ ಮಾಡಿದ್ದು ಬಿಟ್ಟಿರೆ ಪಟ್ಟಣವನ್ನು ಸಂಪೂರ್ಣ ಪ್ಲಾಸ್ಟಿಕ್‌ ಮುಕ್ತವನ್ನಾಗಿಸುವ ಗೋಜಿಗೆ ಪುರಸಭೆ ಅಧಿಕಾರಿಗಳು ಮುಂದಾಗುತ್ತಿಲ್ಲ.

ಹೇಮಾವತಿ ನಾಲೆ ಏರಿ ಮೇಲೆ ಸಂಗ್ರಹವಾಗಿದ್ದ ಕಸವನ್ನು ತೆರವು ಮಾಡಿ ಹಲವು ಭಾರಿ ಸ್ವಚ್ಛತೆ ಮಾಡಲಾಗಿದೆ. ನೀರಾವರಿ ಇಲಾಖೆ ಸಿಬ್ಬಂದಿ ಬೇಜವಾಬ್ದಾರಿಯಿಂದ ನಾಲೆ ಏರಿ ಮೇಲೆ ಪದೇ ಪದೇ ಕಸ ಸುರಿದು ಬೆಂಕಿ ಹಚ್ಚಲಾಗುತ್ತಿದೆ. -ಕೃಷ್ಣಮೂರ್ತಿ, ಪುರಸಭೆ ಅಧಿಕಾರಿ.

ಶಾಮಸುಂದರ್‌ ಕೆ ಅಣ್ಣೇನಹಳ್ಳಿ

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.