ಐತಿಹಾಸಿಕ ಸ್ಮಾರಕ ರಕ್ಷಣೆಯಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ಆರೋಪ
Team Udayavani, Apr 15, 2022, 4:24 PM IST
ಹಾರನಹಳ್ಳಿ: ಅರಸೀಕೆರೆ ತಾಲೂಕಿನ ಹಾರನಹಳ್ಳಿಯಲ್ಲಿರುವ ಹೊಯ್ಸಳರ ಕಾಲದ ಶ್ರೀ ಸೋಮೇಶ್ವರ ದೇವಸ್ಥಾನದ ಶಿಥಿಲಾವಸ್ಥೆಯಲ್ಲಿದೆ. ದೇವಸ್ಥಾನವು ಮಳೆಗಾಲದಲ್ಲಿ ಸೋರುತ್ತಿದೆ.
ದೇವಸ್ಥಾನದ ಆವರಣದಲ್ಲಿ ಗಿಡಗಂಟಿಗಳು ಬೆಳೆದಿವೆ. ಒಣಗಿರುವ ಗಿಡಗಂಟಿಗಳಿಗೆ ಕಿಡಿಗೇ ಡಿಗಳು ಬೆಂಕಿ ಹಚ್ಚಿರುವುದರಿಂದ ಸೋಮೇಶ್ವರ ದೇಗುಲದ ಆವರಣ ಸ್ಮಶಾನದ ರೂಪ ಪಡೆದಿ ರುವುದು ಭಕ್ತರಿಗೆ ಬೇಸರ ಉಂಟು ಮಾಡಿದೆ. ಗಿಡಗಂಟಿಗಳು ಹೊತ್ತಿ ಉರಿಯುತ್ತಿದ್ದಾಗ ಗ್ರಾಮಸ್ಥರು ಬೆಂಕಿ ಆರಿಸಿದ್ದರಿಂದ ದೇಗುಲ ದೇವ ಕೋಷ್ಠದ ವಿಗ್ರಹಗಳಿಗೆ ಅದೃಷ್ಟಾವಶಾತ್ ಹಾನಿಯಾಗಿಲ್ಲ.
ದೇಗುಲದ ಗೋಪುರದಲ್ಲಿ ದೇವಸ್ಥಾನದ ಗೋಪುರದ ಮೇಲೆ ಅರಳಿ ವೃಕ್ಷ, ಕುರುಚಲು ಗಿಡ ಬೆಳೆದು ನಿಂತಿವೆ. ಅದಕ್ಕೆ ಬೆಂಕಿ ಬಿದ್ದಿದ್ದರೆ ದೇವಸ್ಥಾನದ ಗೋಪುರದ ವಿಗ್ರಹಗಳು ಕರಕಲಾ ಗುತ್ತಿದವು. ಸದ್ಯಕ್ಕೆ ಅನಾಹುತ ತಪ್ಪಿರುವುದು ಸಮಾಧಾನಕರ ಸಂಗತಿ ಎಂದರು.
ಕಳೆದ ಎರಡು ವರ್ಷಗಳ ಹಿಂದೆ ಸೋಮೇಶ್ವರ ಶಿವಲಿಂಗ ಕಳ್ಳತನವಾಗಿತ್ತು. ಹೊಸ ಶಿವಲಿಂಗ ಪ್ರತಿಷ್ಠಾಪನೆ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಧಾರ್ಮಿಕ ದತ್ತಿ ಇಲಾಖೆ ಆಗಮ ಪಂಡಿತರು ದೇವಾಲಯಕ್ಕೆ ಭೇಟಿ ನೀಡಿ ಹೊಸ ಶಿವಲಿಂಗ ಪ್ರತಿಷ್ಠಾಪನೆ ವರದಿ ನೀಡಿದ್ದರು. ಇಲಾಖೆ ಅಧಿಕಾರಿಗಳು ಹಣ ನೀಡಲು ಕಷ್ಟವಾಗುತ್ತದೆ ಎಂದು ಹಿಂಬರಹ ನೀಡಿದ್ದಾರೆ. ರಾಜ್ಯ ಪುರಾತತ್ವ ಇಲಾಖೆ ಮತ್ತು ಧಾರ್ಮಿಕ ದತ್ತಿ ಇಲಾಖೆಗಳಿಗೆ ಅನೇಕ ಬಾರಿ ಶ್ರೀ ಸೋಮೇಶ್ವರ ದೇವಸ್ಥಾನದ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರೂ ಗಮನ ನೀಡಿಲ್ಲ. ಈಗಲಾದರೂ ಜಿಲ್ಲಾಡಳಿತ ಗಮನ ಹರಿಸಬೇಕೆಂದು ಹಾರನಹಳ್ಳಿ ಗ್ರಾಮಸ್ಥರು ಒತ್ತಾಯಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.