New Year: ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಹೊಸ ವರ್ಷ ಸಂಭ್ರಮ

Team Udayavani, Jan 1, 2024, 1:11 PM IST

New Year: ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಹೊಸ ವರ್ಷ ಸಂಭ್ರಮ

ಸಕಲೇಶಪುರ: ನೂತನ ವರ್ಷ ಸ್ವಾಗತಕ್ಕೆ ಪ್ರವಾಸಿಗರ ದಂಡು ತಾಲೂಕಿನತ್ತ ಮುಖ ಮಾಡಿದ್ದ ಹಿನ್ನೆಲೆ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಗರಿಗೆದರಿತ್ತು. ತಾಲೂಕಿಗೆ ಸಾವಿರಾರು ಪ್ರವಾಸಿಗರು ಆಗಮಿಸಿ ಮನರಂಜನೆಯೊಂದಿಗೆ ನೂತನ ವರ್ಷ ವನ್ನು ಸಂಭ್ರಮದಿಂದ ಸ್ವಾಗತಿಸಿದರು.

ತಾಲೂಕು ಆಡಳಿತದ ಬಿಗಿ ನಿಯಮದ ನಡುವೆಯೂ ರೆಸಾರ್ಟ್‌ ಹಾಗೂ ಹೋಂಸ್ಟೇಗಳಲ್ಲಿ ಹೊಸ ವರ್ಷಾಚರಣೆ ನಡೆಯಿತು. ಪಟ್ಟಣದ ಪ್ರಮುಖ 3 ಕ್ಲಬ್‌ಗಳಲ್ಲಿ ಹೊಸ ವರ್ಷ ಆಚರಣೆ ಮಾಡಲಾಯಿತು. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಬೇಕರಿ, ಹೋಟೆಲ್‌ಗ‌ಳು, ಮಾಂಸದ ಅಂಗಡಿಗಳು, ಕ್ಯಾಂಟೀನ್‌ಗಳಲ್ಲಿ ಭರ್ಜರಿ ವ್ಯಾಪಾರ ವ್ಯವಹಾರ ನಡೆಯಿತು. ಕೆಲವು ಪ್ರವಾಸಿಗರು ಹೋಂ ಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಕಾಲ ಕಳೆದರೆ, ಕೆಲವರು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿದ್ದು ಕಂಡು ಬಂದಿತು.

ಪಟ್ಟಣದಲ್ಲಿ ಎಲ್ಲಿ ನೋಡಿದರೂ ಕಾರುಗಳ ಸಾಲೆ ಕಾಣುತ್ತಿತ್ತು. ಜಲಪಾತ ವೀಕ್ಷಣೆ: ತಾಲೂಕಿನ ಪ್ರಮುಖ ಪ್ರವಾಸಿ ಸ್ಥಳಗಳಾದ ಮಂಜ್ರಾಬಾದ್‌ ಕೋಟೆ, ಬಿಸಿಲೆಘಾಟ್‌, ಮೂಕನಮನೆ ಜಲಪಾತ, ಮಗಜಹಳ್ಳಿ ಜಲಪಾತ, ಪಟ್ಲ ಬೆಟ್ಟ ಮುಂತಾದ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಕೆಲವು ಕುಟುಂಬಗಳು ಸಹ ಅಲ್ಲಲ್ಲಿ ಸರಳವಾಗಿ ಹೊಸ ವರ್ಷಾಚರಣೆ ಮಾಡಿದ್ದು ಕಂಡು ಬಂದಿತು.

ಒಟ್ಟಾರೆ ತಾಲೂಕಿನಲ್ಲಿ ಹೊಸ ವರ್ಷದ ಆಚರಣೆ ಭರ್ಜರಿಯಾಗಿ ನಡೆದಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ಪ್ರವಾಸೋದ್ಯಮಕ್ಕೆ ಮತ್ತಷ್ಟು ಚೈತನ್ಯ ತುಂಬುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರು ಸೇರಿದಂತೆ ಅಧಿಕಾರಿಗಳು ಯೋಜನೆಗಳನ್ನು ರೂಪಿಸಬೇಕಾಗಿದೆ.

ಯುವಕರ ತಂಡ ಬೆಟ್ಟ ಗುಡ್ಡಕ್ಕೆ : ಹೊರ ಊರುಗಳಿಂದ ಬಂದ ಪ್ರವಾಸಿಗರು ರೆಸಾರ್ಟ್‌ ಮತ್ತು ಹೋಂ ಸ್ಟೇಗಳಲ್ಲಿ ಸಂಭ್ರಮಿಸಿದರೆ, ತಾಲೂಕಿನ ಕೆಲವು ಯುವಕರ ತಂಡಗಳು ಬೆಟ್ಟ ಗುಡ್ಡಗಳಲ್ಲಿ ಬೆಂಕಿ ಹಚ್ಚಿ ಆಚರಣೆ ಮಾಡಿದ್ದು ಕಂಡು ಬಂದಿತು. ಹಲವು ರೆಸಾರ್ಟ್‌ ಮತ್ತು ಹೋಂ ಸ್ಟೇಗಳಲ್ಲಿ ಮಧ್ಯರಾತ್ರಿ 12 ಗಂಟೆಗೆ ಕೇಕ್‌ ಕತ್ತರಿಸಿ, ಪಟಾಕಿ ಸಿಡಿಸಿ ನರ್ತನ ಮಾಡುವ ಮುಖಾಂತರ ಪ್ರವಾಸಿಗರು ಸಂಭ್ರಮಿಸಿದರು.

-ಸುಧೀರ್‌ ಎಸ್‌.ಎಲ್‌.

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.