ವಾಹನ, ಆಸ್ತಿ ನೋಂದಣಿ ಸಿದ್ಧತೆಗೆ ಸೂಚನೆ
Team Udayavani, Apr 15, 2020, 3:43 PM IST
ಹಾಸನ: ಜಿಲ್ಲೆಯಲ್ಲಿ ವಾಹನಗಳ ನೋಂದಣಿ ಹಾಗೂ ಆಸ್ತಿ ನೋಂದಣಿ ಪ್ರಕ್ರಿಯೆಗೆ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮೈಸೂರು ಮಿನರಲ್ಸ್ ವ್ಯವಸ್ಥಾಪಕ ನಿರ್ದೇಶಕ ನವೀನ್ ರಾಜ್‌ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ 19 ನಿಯಂತ್ರಣ ಕ್ರಮಗಳ ಕುರಿತು ಮಂಗಳವಾರ ಪರಿಶೀಲನೆ ನಡೆಸಿದ ಅವರು, ಸಾರಿಗೆ ಇಲಾಖೆಯಲ್ಲಿ ಹೊಸ ವಾಹನಗಳ ನೋಂದಣಿ ಹಾಗೂ ಇತರ ತೆರಿಗೆ ವಸೂಲಿ ಮತ್ತು ನವೀಕರಣ ಪ್ರಕ್ರಿಯೆಗಳು ನಡೆಯಬೇಕು ಎಂದರು.
ಭೂ ದಾಖಲೆಗಳ ನೋಂದಣಿ: ಎಲ್ಲಾ ತಾಲೂಕುಗಳಲ್ಲಿ ಭೂದಾಖಲೆಗಳ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಬೇಕು. ಮೊದಲ ಹಂತದಲ್ಲಿ ದಿನಕ್ಕೆ 20-25 ದಾಖಲೆಗಳ ನೋಂದಣಿ ಗಣಕೀಕರಣಕ್ಕೆ ವ್ಯವಸ್ಥೆ ಮಾಡಿ ಮುಂಗಡ ಟೋಕನ್ ನೀಡಿ ಸಾಮಾಜಿಕ ಅಂತರ ಕಾಯ್ದುಕೊಂಡು ನಿಯಮನುಸಾರ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಪ್ರಕ್ರಿಯೆಗಳನ್ನು ಇನ್ನಷ್ಟು ಕಠಿಣವಾಗಿ ಮುಂದುವರಿಸಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದವರ ಆರೋಗ್ಯದ ಮೇಲೆ ನಿಗಾವಹಿಸಬೇಕು ಎಂದು ಅವರು, ಸೋಂಕಿತರ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಿದ್ದರೂ 28 ದಿನಗಳವರೆಗೂ ವಿಶೇಷ ನಿಗಾವಹಿಸಿ ಅಗತ್ಯದ್ದಲ್ಲಿ ಮತ್ತೂಮ್ಮೆ ಪರೀಕ್ಷೆ ಮಾಡಿಸಬೇಕು ಎಂದು ಸೂಚಿಸಿದರು.
ಹೊರಗಿನಿಂದ ಬಂದವರ ಬಗ್ಗೆ ನಿಗಾ ವಹಿಸಿ: ಬೆಂಗಳೂರು, ಮಂಗಳೂರು ಹಾಗೂ ಮೈಸೂರಿಗೆ ತುರ್ತು ಚಿಕಿತ್ಸೆ ಅಥವಾ ಇನ್ನಾವುದಾದರೂ ಕಾರಣಗಳಿಂದ ತೆರಳಿ ವಾಪಸ್ ಬಂದವರನ್ನು ಸುರಕ್ಷತೆ ದೃಷ್ಟಿಯಿಂದ ಹೋಂ ಕ್ವಾರಂಟೈನ್‌ನಲ್ಲಿ ಇರಿಸುವುದು ಅಗತ್ಯ ಎಂದು ಹೇಳಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ರಾಜ್ಯದೊಳಗಿದ್ದ ಕಾರ್ಮಿಕರು ತಮ್ಮ ಜಿಲ್ಲೆಗಳಿಗೆ ತೆರಳಲು ಬಯಸಿದರೆ ಸೂಕ್ತ ಆರೋಗ್ಯ ತಪಾಸಣೆ ನಡೆಸಿ ಕಳಿಸಬೇಕಾಗಬಹುದು. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.
ಜಿಲ್ಲೆಯಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಧಾನಮಂತ್ರಿ ಆರೋಗ್ಯ ಸುರಕ್ಷಾ ಯೋಜನೆ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯಡಿ ನೊಂದಣಿ ಮಾಡಿಕೊಳ್ಳಲು ಸೂಚಿಸಲಾಗಿದ್ದು ಎಲ್ಲ ಅರ್ಹ ಬಡ ಜನರ ಆರೋಗ್ಯ ತಪಾಸಣೆಗೆ ಹಾಗೂ ಚಿಕಿತ್ಸೆಯನ್ನು ಒದಗಿಸಲು ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಜಿಪಂ ಸಿಇಒ ಬಿ.ಎ. ಪರಮೇಶ್ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ. ಉಪವಿಭಾಗಾಧಿಕಾರಿ ಡಾ.ನವೀನ್‌ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮೂರ್ತಿ, ಹಿಮ್ಸ್ ನಿರ್ದೇಶಕ ಡಾ. ರವಿಕುಮಾರ್ ಸಭೆಯಲ್ಲಿ ಹಾಜರಿದ್ದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.