ನ.30 ಬೇಲೂರಿನಲ್ಲಿ ಜಿಲ್ಲಾ ಮಟ್ಟದ ಮಹಿಳಾ ವಿಚಾರ ಸಂಕಿರಣ
Team Udayavani, Sep 30, 2019, 3:00 AM IST
ಬೇಲೂರು: ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾ ಕದಳಿ ಮಹಿಳಾ ವೇದಿಕೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಮಹಿಳಾ ವಿಚಾರ ಸಂಕೀರ್ಣ ಸಮಾರಂಭವನ್ನು ನ.30ರಂದು ಬೆಳಗ್ಗೆ 10.30ಕ್ಕೆ ಕೋಟೆ ಚನ್ನಕೇಶವಸ್ವಾಮಿ ಸಭಾಂಗಣದಲ್ಲಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಸುಶೀಲ ತಿಳಿಸಿದರು.
ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶರಣ ಸಾಹಿತ್ಯ ಪರಿಷತ್ತು ಜಾತಿ ಧರ್ಮ ಮತ್ತು ವರ್ಗ ರಹಿತವಾಗಿ 12 ನೇ ಶತಮಾನದ ವಚನ ಸಾಹಿತ್ಯವನ್ನು ಇಡೀ ಮನುಕುಲಕ್ಕೆ ತಿಳಿಸುವ ಹಿನ್ನೆಲೆಯಲ್ಲಿ ಸ್ಥಾಪನೆಯಾಗಿದ್ದು, ಜಿಲ್ಲೆಯಲ್ಲಿ ಅನೇಕ ವಚನ ಸಾಹಿತ್ಯಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ.
ಅಂತೆಯೇ 12 ನೇ ಶತಮಾನದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನ-ಮಾನ ನೀಡಿದ ನಿಟ್ಟಿನಲ್ಲಿ ಹಾಸನ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಮಹಿಳಾ ವಿಚಾರ ಸಂಕಿರಣವನ್ನು ಬೇಲೂರಿನಲ್ಲಿ ನಡೆಸಲು ಇಂದಿನ ಪೂರ್ವಭಾವಿ ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದರು. ಚನ್ನಕೇಶವ ದೇಗುಲದ ಮುಂಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ, ಮಹಿಳಾ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಆಯೋಜಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕು ಎಂದರು.
ಮಹಿಳಾ ಸಬಲಿಕರಣ: ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ತೀರ್ಥಕುಮಾರಿ ಮಾತನಾಡಿ ಮಹಿಳಾ ಸಬಲೀಕರಣದ ಬಗ್ಗೆ ಇತ್ತೀಚಿನ ದಿನದಲ್ಲಿ ವೇದಿಕೆ ಮೇಲೆ ಭಾಷಣಗಳು ಮಾತ್ರ ನಡೆಯುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಆದರೆ ಬಸವಾದಿ ಶರಣರು ಮಹಿಳೆಯರಿಗೆ ಮೊದಲ ಸ್ಥಾನ ನೀಡುವ ಮೂಲಕ ಅನುಭವ ಮಂಟಪದಲ್ಲಿದಲ್ಲದೇ ಸಮಾಜದ ಮುಖ್ಯವಾನಿಯಲ್ಲಿ ಅವರನ್ನು ಗುರುತಿಸಿದ್ದು ಪ್ರಸ್ತುತ ಸಮಾಜಕ್ಕೆ ಮಾದರಿಯಾಗಿದೆ ಎಂದರು.
ಸಂವಾದ ಕಾರ್ಯಕ್ರಮ: ಇತ್ತೀಚಿನ ಮಹಿಳೆಯರಿಗೆ ವಚನ ಸಾಹಿತ್ಯದಲ್ಲಿ ಅವರ ಬದುಕು-ಬರಹ ಮತ್ತು ಅನುಭವಗಳನ್ನು ಜಿಲ್ಲಾ ಮಟ್ಟದ ಮಹಿಳಾ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮುಕ್ತ ಚರ್ಚೆ ಹಾಗೂ ಸಂವಾದ ನಡೆಸುವ ವಿಶೇಷ ಸಮಾರಂಭವನ್ನು ಹಮ್ಮಿಕೊಂಡಿದ್ದು ರಾಜ್ಯದ ಮತ್ತು ಜಿಲ್ಲಾ ಮಹಿಳಾ ಅನುಭವಿಗಳು ಕಾರ್ಯಕ್ರಮಕ್ಕೆ ಆಗಮಿಸುವ ನಿಟ್ಟಿನಲ್ಲಿ ಸರ್ವರು ಈ ಕಾರ್ಯಕ್ರಮದ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿ.ಎಂ.ನಿಂಗರಾಜು ಮಾತನಾಡಿ, ಸುತ್ತೂರು ಶ್ರೀಮಠದ ಪರಮಪೂಜ್ಯರಿಂದಲೇ ಆರಂಭವಾದ ಶರಣ ಸಾಹಿತ್ಯ ಪರಿಷತ್ತು ರಾಜ್ಯದಲ್ಲದೇ ಅಂತಾರಾಜ್ಯ ಮತ್ತು ದೇಶಗಳಲ್ಲಿ ವಚನ ಸಾಹಿತ್ಯದ ಕಂಪನ್ನು ತಿಳಿಸುತ್ತಾ ಬಂದಿದೆ, ವಿಶೇಷವಾಗಿ ದತ್ತಿ ಉಪನ್ಯಾಸಗಳು ಶಾಲಾ-ಕಾಲೇಜಿನಲ್ಲಿ ನಡೆಸಿ, ಯುವಕರಿಗೆ ವಚನ ಸಾಹಿತ್ಯದ ಮಹತ್ವವನ್ನು ತಿಳಿಸುವ ಬಹು ದೊಡ್ಡ ಕಾರ್ಯ ನಡೆಸುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಹಾಲಪ್ಪ, ಸಹ ಕಾರ್ಯದರ್ಶಿ ಚಂದ್ರಶೇಖರ್, ಸೌಭಾಗ್ಯ, ನೀಲಾ, ಸೋಮಶೇಖರಮ್ಮ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.