ಮದುವೆಗೆ ಜನರ ಮಿತಿ ಮೀರಿದರೆ ದಂಡ
Team Udayavani, Nov 26, 2020, 3:37 PM IST
ಹಾಸನ: ಕೋವಿಡ್ ನಿಯಂತ್ರಣಕ್ಕೆ ಜನಸಂದಣಿ ನಿಯಂತ್ರಣ ಅನಿವಾರ್ಯ. ಈ ಹಿನ್ನೆಲೆಯಲ್ಲಿ ವಿವಾಹ ಮತ್ತಿತರ ಸಮಾರಂಭಗಳ ಮೇಲೆ ನಿಗಾ ವಹಿಸಬೇಕಾಗಿದ್ದು, ಸರ್ಕಾರದ ಮಾರ್ಗದರ್ಶಿ ಸೂತ್ರಗಳನ್ನು ಉಲ್ಲಂಘಿಸುವ ಕಲ್ಯಾಣ ಮಂಟಪಗಳಿಗೆ ದಂಡ ವಿಧಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು,ಕೋವಿಡ್ ವ್ಯಾಪಕವಾಗಿ ಹರಡುವ ಭೀತಿ ಇದೆ. ಹಾಗಾಗಿ ಕಲ್ಯಾಣ ಮಂಟಪ, ಸಮುದಾಯ ಭವನಗಳಲ್ಲಿ ನಡೆಯುವ ಮದುವೆಗಳಲ್ಲಿ ಮತ್ತಿತರ ಸಮಾಂಭಗಳಲ್ಲಿ 200ಕ್ಕೂ ಅಧಿಕ ಜನ ಸೇರದಂತೆ ಎಚ್ಚರಿಕೆ ವಹಿಸಬೇಕು. ಈ ಸಂಬಂಧ ಕಲ್ಯಾಣ ಮಂಟಪಗಳು, ಸಮುದಾಯ ಭವನಗಳ ಮಾಲಿಕರಿಗೆ ನೋಟಿಸ್ ಜಾರಿಗೊಳಿಸಿ, ಆದೇಶ ಪಾಲಿಸದಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲಿಕರು ಮತ್ತು ವಧು – ವರರ ಕುಟುಂಬಕ್ಕೆ ದಂಡ ವಿಧಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಂಟಿ ಕಾರ್ಯಾಚರಣೆ ಮಾಡಿ: ನಗರದಲ್ಲಿ ಹೆಚ್ಚು ಜನಸಂದಣಿ ಸೇರದಂತೆ ನಿಯಂತ್ರಿಸಿ ಹಾಗೂ ಮಾಸ್ಕ್ ಬಳಸುವುದೇ ರಸ್ತೆಯಲ್ಲಿ ಓಡಾಡುವವರಿಗೂ ದಂಡ ಹಾಕುವ ಮೂಲಕ ಕೋವಿಡ್ ಹರಡುವುದನ್ನು ತಡೆಗಟ್ಟಲು ಎಲ್ಲಾ ಮುಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಕಂದಾಯ ಹಾಗೂ ಪೊಲೀಸ್ ಇಲಾಖೆಜಂಟಿಯಾಗಿಕಾರ್ಯನಿರ್ವಹಿಸಬೇಕು ಎಂದು ನವೀನ್‌ರಾಜ್ ಸಿಂಗ್ ತಾಕೀತು ಮಾಡಿದರು.
ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಕುಡಿಯುವ ನೀರಿಗೆ ಯಾವುದೇ ತೊಂದರೆಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಎಲ್ಲಾ ಗ್ರಾಮಗಳಿಗೂ ಪೈಪ್‌ಲೈನ್ ಮೂಲಕವೇ ಕುಡಿಯುವ ನೀರು ಪೂರೈಕೆಯಾಗುವಂತೆ ಗಮನ ಹರಿಸಬೇಕು. ಅನಿವಾರ್ಯವಿದ್ದಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಿ. ಪ್ರಗತಿಯಲ್ಲಿರುವಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ವಿದ್ಯುತ್ ಸಂಪರ್ಕ ಒದಗಿಸಿ ಎಂದು ಅವರು ನಿರ್ದೇಶನ ನೀಡಿದರು.
ಕೃಷಿಗೆ ಅಗತ್ಯರುವ ಬಿತ್ತನೆ ಬೀಜ ರಸ ಗೊಬ್ಬರಗಳ ಪೂರೈಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರೆಅರ್ಹರೈತರಿಗೆಪರಿಹಾರವನ್ನು ಶೀಘ್ರವಾಗಿ ವಿತರಣೆ ಮಾಡಿ ಎಂದೂ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶೀಘ್ರ ಕೋವಿಡ್ ಲಸಿಕೆ: ಕೋವಿಡ್ ಸೋಂಕು ನಿಯಂತ್ರಣ ಲಸಿಕೆ ಶೀಘ್ರದಲ್ಲೇ ಜಿಲ್ಲೆಗೆ ತಲುಪಬಹುದು. ಅದರ ಶೇಖರಣೆಗೆ ಮತ್ತು ವಿತರಣೆಗಾಗಿ ವ್ಯವಸ್ಥಿತ ಯೋಜನೆ ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್‌ಸಿಂಗ್ ಜಿಲ್ಲಾಧಿಕಾರಿ ಗಿರೀಶ್ ಸೇರಿದಂತೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಕೋವಿಡ್ ನಿಯಂತ್ರಿಸಲು ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಈಗಿನ ಮದುವೆ ಮತ್ತಿತರ ಸಮಾರಂಭದಲ್ಲಿ 200 ಜನರು ಮಾತ್ರ ಸೇರುವ ಅವಕಾಶವಿದ್ದು, ನಿಯಮ ಉಲ್ಲಂಘಿಸಿ ಸಮಾರಂಭ ನಡೆಸುವ ಕಟ್ಟಡದ ಮಾಲಿಕರು ವಧು-ವರರಕುಟುಂಬದ ಮೇಲೆ ದಂಡ ವಿಧಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.