ಚಿಣ್ಣರ ಕಲರವದ ಮೋಡಿಗೆ ಪೋಷಕರ ಬೆರಗು 


Team Udayavani, Feb 27, 2019, 6:56 AM IST

chinnaara.jpg

ಹಾಸನ: ನಗರದ ಹಾಸನಾಂಬ ಕಲಾಭವನದಲ್ಲಿ ಮಂಗಳವಾರದಿಂದ ಆರಂಭವಾದ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಚಿಣ್ಣರ ಕಲರವದಲ್ಲಿ ಶಾಲಾ ಮಕ್ಕಳು ಪ್ರದರ್ಶಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೆಳೆದವು. 

ಮಕ್ಕಳು ವಿವಿಧ ವೇಷ ಧರಿಸಿ ನತ್ಯ ಪ್ರದರ್ಶಿಸಿ ಪ್ರೇಕ್ಷಕರನ್ನು ಬೆರಗುಗೊಳಿಸಿದರು. ಹಾಸನದ ಭಾರತಿ ವಿದ್ಯಾಮಂದಿರದ ಚಿಣ್ಣರು “ಸಿಕ್ಕರೆ ಸಿಕ್ಕರೆ ಅವಕಾಶ ಮುಟ್ಟಿಯೇ ಬಿಡುವೆನು ಆಕಾಶ’ ಎಂಬ ನೃತ್ಯ ರೂಪಕ ಪ್ರೇಕ್ಷಕರನ್ನು ಮೋಡಿ ಮಾಡಿತು. “ಗೊಮ್ಮಟ ವೈಭವ’ ನತ್ಯ ರೂಪಕ ಭರತ ಬಾಹುಬಲಿಯ ಯುದ್ಧದ ಪ್ರಸಂಗ, ಹೊಯ್ಸಳರ ಸಾಮ್ರಾಜ್ಯದ ಕಥನದ ಪ್ರಸಂಗ ಪ್ರೇಕ್ಷಕರನ್ನು ಬೆರಗುಗೊಳಿಸಿತು. 

ಹಾಸನ ತಾಲೂಕು ಬ್ಯಾಡರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸುವ ಹಾಗೂ ಕಾಶ್ಮೀರದಲ್ಲಿ ಉಗ್ರಗಾಮಿಗಳ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ನತ್ಯ ರೂಪಕಕ್ಕೆ ಪೇಕ್ಷಕರು ನಿಬ್ಬೆರಗಾಗಿ ಎದ್ದು ನಿಂತು ಗೌರವ ಸಲ್ಲಿಸಿದರು. 

ಹಾಸನ ಕಟ್ಟಾಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಜಾನಪದ ಗೀತೆಗೆ ಕೋಲಾಟ ನತ್ಯ ಪ್ರದರ್ಶನ ಗಮನ ಸೆಳೆಯಿತು. ಅಗಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥುಕ ಶಾಲೆಯ ಬಾಲಕಿಯರ ಕಂಸಾಳೆ ನತ್ಯ ಮತ್ತು ಪಿರಮಿಡ್‌ ಪ್ರದರ್ಶನ ಮೆಚ್ಚುಗೆಗೆ ಪಾತ್ರವಾಯಿತು. 

ಆನಂದ ಭಾರತಿ ಶಾಲೆಯ ಮಕ್ಕಳು ನಪತುಂಗ ವೈಭವ ನತ್ಯ ರೂಪಕ ಪ್ರದರ್ಶಿಸಿದರು. ದುದ್ದ ಮೂಲ ಶಾಲೆಯ ಮಕ್ಕಳು ಜಾನಪದ ನತ್ಯ ಹಾಗೂ ನಗರದ ಪೆನನ್‌ ಮೊಹಲ್ಲಾ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯ ಮಕ್ಕಳು “ಹಚ್ಚೇವು ಕನ್ನಡದ ದೀಪ’ ಗೀತೆಗೆ ನೃತ್ಯ ರೂಪಕ ಪ್ರದರ್ಶಿಸಿದರು. ಸಮೀಕ್ಷಾ ಮತ್ತು ತಂಡವರು ಕೊಳಲು ವಾದನ ಕಾರ್ಯಕ್ರಮ ನಡೆಸಿಕೊಟ್ಟರು. 

ಭರತ ನಾಟ್ಯದ ರೋಮಾಂಚನ: ಬೇಲೂರಿನ ಭರತನಾಟ್ಯ ಕಲಾವಿದೆ ಬಿ.ಕೆ.ಶಿಲ್ಪ ಅವರ ಭರತ ನಾಟ್ಯ ಅತ್ಯಂತ ರೋಮಾಂಚನಾಕಾರಿಯಾಗಿತ್ತು. ಸೊಂಟದಲ್ಲಿ ರಿಂಗ್‌ ತಿರುಗಿಸುತ್ತಾ ವಿವಿಧ ಭಂಗಿಗಳಲ್ಲಿ ಭರತ ನಾಟ್ಯ ಪ್ರದರ್ಶಿಸಿದರು. ತಟ್ಟೆ ಮೆಲೆ, ಮಡಿಕೆ ಮೇಲೆ ಒಂಟಿ ಕಾಲಲ್ಲಿ ನೃತ್ಯ, ಮೇಣಬತ್ತಿ ಕಳಸ ಇಟ್ಟುಕೊಂಡು ಗಾಜಿನ ಲೋಟಗಳ ಮೇಲೆ ಒಂಟಿ ಕಾಲಿನಲ್ಲಿ ನಿಂತು ಪ್ರದರ್ಶಿಸಿದ ನೃತ್ಯ ರೋಮಾಂಚನಕಾರಿಯಾಗಿತ್ತು.

ಜನಮನ ಸೆಳೆದ ಹೋಯ್ಸಳ ನತ್ಯ ರೂಪಕ: ಬೇಲೂರಿನ ಭರತನಾಟ್ಯ ಕಲಾದೆ ಹಾಗೂ ಜೀ ಕನ್ನಡ ವಾನಿಯ ಸರಿಗಮಪ ಲಿಟ್ಲ ಚಾಂಪ್ಸ್‌ನ ನೇಹ ಅವರು ಹೊಯ್ಸಳ ಸಾಮ್ರಾಜ್ಯ ಹುಟ್ಟಿನ ಕತೆಯನ್ನು ಏಕ ಪಾತ್ರಾಭಿನಯದಲ್ಲಿ ಪ್ರಸ್ತುತ ಪಡಿಸಿದರು. ಈ ನತ್ಯವನ್ನು ಮೆಚ್ಚಿ ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಒ. ಮಹಾಂತಪ್ಪ ಅವರು ಸ್ಥಳದಲ್ಲಿಯೇ 500 ನಗದು ಬಹುಮಾನ ಪ್ರಕಟಿಸಿದರು. 

ತರಕಾರಿ ಪಲಾವ್‌: ಮೊದಲ ದಿನದ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದವರಿಗೆ ಕನ್ನಡ ಸಾಹಿತ್ಯ ಪರಿಷತ್‌ ಆವರಣದಲ್ಲಿ ಮಧ್ಯಾಹ್ನದ ಭೋಜನಕ್ಕೆ ಪಲಾವ್‌ ವ್ಯವಸ್ಥೆ ಮಾಡಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲೊಗಂಡಿದ್ದ ಮಕ್ಕಳು ಹಾಗೂ ಶಾಲಾ ಶಿಕ್ಷಕರು ಮತ್ತು ಪೊಷಕರೂ ಪಲಾವ್‌ ಸವಿದರು. 

ಪುಸ್ತಕಗಳ ಮಾರಾಟ ಮಳಿಗೆ: ಸಾಹಿತ್ಯ ಸಮ್ಮೇಳನಗಳಲ್ಲಿ ಪುಸ್ತಕಗಳ ಪ್ರದರ್ಶನ ಮಾರಾಟ ಸಾಂಪ್ರದಾಯಿಕವಾಗಿದೆ. ಹಾಗೆಯೇ ಹಾಸನ ಜಿಲ್ಲಾ ಸಮ್ಮೇಳನದಲ್ಲಿಯೂ ಸಾಹಿತ್ಯಾಸಕ್ತರ ಮನ ತಣಿಸಲು ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಮಾಡಲಾಗಿದೆ. ಮಳಿಗೆಗಳ ನಿರ್ಮಾಣದ ಸಿದ್ದತೆ ಭರದಿಂದ ಸಾಗಿತ್ತು. 

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.