Pen drive ಹಂಚಿಕೆ ಆರೋಪ: ನವೀನ್ ಗೌಡ,ಚೇತನ್ ಗೌಡಗೆ 14 ದಿನ ನ್ಯಾಯಾಂಗ ಬಂಧನ
Team Udayavani, Jun 1, 2024, 9:15 PM IST
ಹಾಸನ: ಅಶ್ಲೀಲ ವೀಡಿಯೋಗಳಿದ್ದ ಪೆನ್‌ಡ್ರೈವ್ ಹಂಚಿಕೆ ಆರೋಪದಲ್ಲಿ ಎಸ್‌ಐಟಿ ವಶದಲ್ಲಿದ್ದ ಆರೋಪಿಗಳಾದ ನವೀನ್ ಗೌಡ ಮತ್ತು ಚೇತನ್ ಗೌಡ ಅವರನ್ನು ಹಾಸನದ ನ್ಯಾಯಾಲಯವು ಶನಿವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.
ಬೆಂಗಳೂರಿನಲ್ಲಿ ಮೇ 29ರಂದು ನವೀನ್ ಗೌಡ ಮತ್ತು ಚೇತನ್ ಗೌಡರನ್ನು ಎಸ್‌ಐಟಿ ಬಂಧಿಸಿತ್ತು. ಬಳಿಕ ಹಾಸನಕ್ಕೆ ಕರೆತಂದು ವಿಚಾರಣೆ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಎರಡು ದಿನ ಎಸ್‌ಐಟಿ ಕಸ್ಟಡಿಗೆ ಪಡೆದುಕೊಂಡಿತ್ತು. ಕಸ್ಟಡಿ ಅವಧಿ ಮುಗಿದಿದ್ದರಿಂದ ಶನಿವಾರ ಮಧ್ಯಾಹ್ನ ಹಾಸನದ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಂಗ ವಿಧಿಸಲಾಯಿತು.
ಪೆನ್‌ಡ್ರೈವ್‌ಗಳ ಹಂಚಿಕೆಯಲ್ಲಿ ಚೇತನ್ ಗೌಡ, ಶರತ್, ಪುಟ್ಟರಾಜು, ಕಾರ್ತಿಕ್ ಭಾಗಿಯಾಗಿದ್ದಾರೆ ಎಂದು ಜೆಡಿಎಸ್ ಮುಖಂಡ, ನ್ಯಾಯವಾದಿ ಪೂರ್ಣಚಂದ್ರ ತೇಜಸ್ವಿ ಎ.23ರಂದು ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ
H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.