ಜನರಿಗೆ ಆರೋಗ್ಯ ರಕ್ಷಣೆ, ಚಿಕಿತ್ಸೆಗಳ ಅರಿವು ಅಗತ್ಯ

Team Udayavani, Aug 30, 2019, 3:00 AM IST

jana-arogya

ಹಾಸನ: ಆರೋಗ್ಯ ಸಂರಕ್ಷಣೆ ಹಾಗೂ ವೈದ್ಯಕೀಯ ಚಿಕಿತ್ಸಾ ವಿಧಾನಗಳ ಕುರಿತು ಸಾರ್ವಜನಿಕರಿಗೆ ಅರಿವು ಅಗತ್ಯ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಅಭಿಪ್ರಾಯಪಟ್ಟರು. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್‌) ಸಭಾಂಗಣದಲ್ಲಿ ಗುರುವಾರದಿಂದ ಆರಂಭವಾದ ಮೂರು ದಿನಗಳ ವೈದ್ಯಕೀಯ ವಸ್ತು ಪ್ರದರ್ಶನ ಕ್ಲಿನಿಲಾಜಿಕ್‌ 2.0 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಸ್ತು ಪ್ರದರ್ಶನವು ಬಹಳ ಚೆನ್ನಾಗಿ ರೂಪುಗೊಂಡಿದ್ದು, ಸಾರ್ವಜನಿಕರಿಗೆ ಮಾಹಿತಿ ತಲುಪಲು ಸಹಕಾರಿಯಾಗಿದೆ ಎಂದರು.

ಅಪಘಾತ ಮತ್ತಿತರ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ವೈದ್ಯರ ಬಳಿ ಕರೆದೊಯ್ದು ಚಿಕಿತ್ಸೆ ಕೊಡಿಸಲು ವಿಳಂಬ ಮಾಡಬಾರದು. ಮಾಹಿತಿ ಕೊರತೆಯಿಂದ ಬಹಳಷ್ಟು ಸಮಯ ವೈದ್ಯರ ಬಳಿ ಹೋಗಲು ತಡ ಮಾಡುವುದರಿಂದ ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಲು ತೊಂದರೆಯಾಗುವ ಸಾಧ್ಯತೆ ಹೆಚ್ಚು ಇರುತ್ತದೆ. ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ಮಾಡುವ ಬಗ್ಗೆ ಮಾಹಿತಿ ಇರಬೇಕು. ಆದರೆ ಮಾಹಿತಿ ಕೊರತೆಯಿಂದ ಸಾವುಗಳು ಸಂಭವಿಸುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರದ ಸೌಲಭ್ಯ ಸದ್ಬಳಕೆಯಾಗಲಿ: ಸರ್ಕಾರದ ವಿವಿಧ ಯೋಜನೆಗಳಡಿ ದೊರಕುವ ಆರೋಗ್ಯ ಸೇವಾ ಸೌಲಭ್ಯಗಳನ್ನು ಸಾರ್ವಜನಿಕರು ಬಳಸಿಕೊಳ್ಳಲು ಅರಿವು ಮೂಡಿಸಬೇಕು. ಮಾಹಿತಿ ಕೊರತೆಯಿಂದ ಬಳಲುವ ಅನೇಕ ರೋಗಿಗಳು ಹಾಗೂ ಸಾರ್ವಜನಿಕರಿಗೆ ಇದರಿಂದ ಅನುಕೂವಾಗಲಿದ್ದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಆರೋಗ್ಯದ ಅರಿವು ಮೂಡಿಸಿ: ಸಾರ್ವಜನಿಕರಿಗೆ ಪ್ರಥಮ ಚಿಕಿತ್ಸೆ, ಆರೋಗ್ಯ ಸಂರಕ್ಷಣಾ ವಿಧಾನಗಳ ಮಾಹಿತಿ ಪ್ರತಿಯೊಬ್ಬರಿಗೂ ತಲುಪಬೇಕು ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿಯೂ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಆರೋಗ್ಯ ಕಾಳಜಿ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ಕುಮಾರ್‌ ಮಾತನಾಡಿ, ಆರೋಗ್ಯದ ಜೊತೆಗೆ ಶಿಕ್ಷಣವನ್ನೂ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಪ್ರಥಮ ಚಿಕಿತ್ಸೆಗಳ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಈಗಾಗಲೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿಯಿದೆ ಎಂದರು. ಎಸ್‌ಡಿಎಂ ಆರ್ಯುವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸನ್ನ ಎನ್‌.ರಾವ್‌ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಪೌಷ್ಟಿಕ ಆಹಾರ ಸೇವನೆ ಉತ್ತಮವಾಗಿದೆ ಎಂದು ಹೇಳಿದರು.

ಶಾಲಾ ಮಕ್ಕಳು ವೀಕ್ಷಿಸಲಿ:
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಮಾಜ ಸೇವಕ ಡಾ.ಗುರುರಾಜ್‌ ಹೆಬ್ಟಾರ್‌ ಮಾತನಾಡಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ಜಿಲ್ಲೆಯ ಎಲ್ಲ ತಾಲೂಕುಗಳ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಈ ವಸ್ತು ಪ್ರದರ್ಶನವನ್ನು ವೀಕ್ಷಿಸುವಂತಾಗಬೇಕು ಎಂದರು.

ವೈದ್ಯಕೀಯ ಅಧೀಕ್ಷಕ‌ ಡಾ.ಕೃಷ್ಣಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ಹಿಮ್ಸ್‌ ಆಡಳಿತಾಧಿಕಾರಿ ಕಲ್ಪಶ್ರೀ, ಹಿಮ್ಸ್‌ ನ ನಿವಾಸಿ ವೈದ್ಯಾಧಿಕಾರಿ ಡಾ. ಪ್ರಸನ್ನ ಕುಮಾರ್‌, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಬಿ.ಎನ್‌, ಶಿವಪ್ರಸಾದ್‌ ಜಿಲ್ಲಾ ಭಾರತೀಯ ರೆಡ್‌ಕ್ರಾಸ್‌ ಸೊಸೈಟಿಯ ಅಧ್ಯಕ್ಷ ಎಚ್‌.ಪಿ. ಮೋಹನ್‌, ಅನನ್ಯ ಟ್ರಸ್ಟ್‌ ನ ಸಂಸ್ಥಾಪಕಿ ಕೆ.ಟಿ. ಜಯಶ್ರೀ ಸಮಾಜ ಸೇವಕರಾದ ಅಮ್ಜದ್‌ ಖಾನ್‌ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನುರಿತ ವೈದ್ಯರಿಂದ ತರಬೇತಿ: ರೋಗಿಗಳ ಹಾಗೂ ವೈದ್ಯರ ಬಾಂಧವ್ಯ ಉತ್ತಮವಾಗಿದ್ದಾಗ ಮಾತ್ರ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಹಿಮ್ಸ್‌ ನಿರ್ದೇಶಕ ಡಾ. ಬಿ.ಸಿ.ರವಿಕುಮಾರ್‌ ಹೇಳಿದರು. ಸಂಸ್ಥೆಯು ಅನೇಕ ಆರೋಗ್ಯ ಸಂರಕ್ಷಣಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ನುರಿತ ವೈದ್ಯರಿಂದ ತರಬೇತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಾರ್ವಜನಿಕರಲ್ಲಿ ತಿಳಿವಳಿಕೆ ಕೊರತೆ, ಮೂಢನಂಬಿಕೆಯಿಂದ ಆರೋಗ್ಯ ನಿರ್ಲಕ್ಷಿಸುತ್ತಾರೆ ಈ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಈ ವಸ್ತು ಪ್ರದರ್ಶನ ಸಹಕಾರಿಯಾಗಿದೆ.
-ಸಾವಿತ್ರಿ, ಐಎಂಎ ಹಾಸನ ಶಾಖೆ ಉಪಾಧ್ಯಕ್ಷೆ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.