ಹೋಟೆಲ್‌, ಮದ್ಯದಂಗಡಿಯಲ್ಲಿ ಪ್ಲಾಸ್ಟಿಕ್‌ ಬಳಕೆ


Team Udayavani, Oct 12, 2019, 3:42 PM IST

hasan-tdy-1

ಹಾಸನ: ಪ್ಲಾಸ್ಟಿಕ್‌ ನಿಷೇಧ ಸಂಬಂಧ ಹಾಸನ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದ್ದರೂ ಹೋಟೆಲ್‌, ಮದ್ಯದ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಕವರ್‌ ಗಳ ಮೂಲಕ ಮಾರಾಟ ನಿರ್ಭೀತವಾಗಿ ನಡೆಯುತ್ತಿದೆ.

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಉಸ್ತುವಾರಿ ಸದಸ್ಯ ಹಾಗೂ ಉಪ ಲೋಕಾಯುಕ್ತ ಸುಭಾಷ್‌ ಬಿ.ಆಡಿ ಅವರು ಪ್ಲಾಸ್ಟಿಕ್‌ ನಿಷೇಧ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಕಟ್ಟು ನಿಟ್ಟಿನ ಸೂಚನೆ ನೀಡಿದ ನಂತರ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ನಿಷೇಧ ಅಭಿಯಾನ ಚುರುಕುಗೊಂಡಿದೆ.

ಅ.2 ರ ಗಾಂಧಿ ಜಯಂತಿ ದಿನದಿಂದ ಪ್ಲಾಸ್ಟಿಕ್‌ ನಿಷೇಧದ ಅಭಿಯಾನ ಚುರುಕುಗೊಂಡಿದ್ದು, ಇದರಿಂದ ಹಾಸನ ನಗರಸಭೆ ವ್ಯಾಪ್ತಿಯ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಬ್ಯಾಗುಗಳ ಬಳಕೆ ಶೇ.70 ಕಡಿಮೆಯಾಗಿದೆ. ಆದರೆ, ಹೋಟೆಲ್‌, ಮದ್ಯದಂಗಡಿ, ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳಲ್ಲಿ ಮಾತ್ರ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಬಿದ್ದಿಲ್ಲ.

ಪಂಚಾಯತ್‌ ಸಂಸ್ಥೆಗಳ ನಿರ್ಲಕ್ಷ್ಯ: ಪ್ಲಾಸ್ಟಿಕ್‌ ಬಳಕೆ ನಿಷೇಧ ಬಹುತೇಕ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳ ಆಸಕ್ತಿಯನ್ನು ಅವಲಂಬಿಸಿದೆ. ಅಂದರೆ ಗ್ರಾಮಾಂತರ ಪ್ರದೇಶದಲ್ಲಿ ಗ್ರಾಪಂ, ತಾಪಂ, ಜಿಪಂಗಳು ಪ್ಲಾಸ್ಟಿಕ್‌ ಬಳಕೆ ನಿಷೇಧದ ಜನ ಜಾಗೃತಿ ಮತ್ತು ನಿಷೇಧಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಆದರೆ, ನಗರ ಸ್ಥಳೀಯ ಸಂಸ್ಥೆಗಳಷ್ಟು ಪಂಚಾಯತ್‌ ಸಂಸ್ಥೆಗಳು ಪ್ಲಾಸ್ಟಿಕ್‌ ಬಳಕೆ ನಿಷೇಧದ ಬಗ್ಗೆ ಆಸಕ್ತಿ ವಹಿಸುತ್ತಿಲ್ಲ. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಮಾತ್ರ ಪ್ಲಾಸ್ಟಿಕ್‌ ನಿಷೇಧದ ಜಾಗೃತಿ ಮತ್ತು ಬಳಕೆ ಮೇಲೆ ಕ್ರಮಗಳು ಜಾರಿಯಾಗುತ್ತಿವೆ. ಜಿಲ್ಲಾಧಿಕಾರಿ ಪಂಚಾಯತ್‌ ಸಂಸ್ಥೆಗಳ ಅಧಿಕಾರಿಗಳಿಗೂ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಸಭೆಗಳನ್ನೂ ನಡೆಸಿದ್ದಾರೆ. ಆದರೆ, ಪಂಚಾಯತ್‌ ಸಂಸ್ಥೆಗಳು ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಸೂಚನೆ ನೀಡುವ ಅಗತ್ಯವಿದೆ.

 ನಗರಸಭೆ ಅಭಿಯಾನ ಚುರುಕು: ಪ್ಲಾಸ್ಟಿಕ್‌ ಬಳಕೆ ನಿಷೇಧದ ಅಭಿಯಾನ ಹಾಸನ ನಗರದಲ್ಲಿ 2 ವರ್ಷಗಳ ಹಿಂದೆಯೇ ಆರಂಭವಾಗಿತ್ತು. ಅಂದು ಹಾಸನ ನಗರಸಭೆ ಅಧ್ಯಕ್ಷರಾಗಿದ್ದ ಎಚ್‌.ಎಸ್‌.ಅನಿಲ್‌ ಕುಮಾರ್‌ ಪ್ಲಾಸ್ಟಿಕ್‌ ಬಳಕೆ ನಿಷೇಧದ ಅಭಿಯಾನ ಆರಂಭಿಸಿದ್ದರು. ಆ ನಂತರ ನಗರಸಭೆ ಚುನಾವಣೆ, ನಗರಸಭೆಗೆ ಆಡಳಿತಾಧಿಕಾರಿ ನೇಮಕದ ನಂತರ ಪ್ಲಾಸ್ಟಿಕ್‌ ಬಳಕೆ ನಿಷೇಧದ ಅಭಿಯಾನಕ್ಕೆ ಹಿನ್ನಡೆ ಯಾಗಿತ್ತು. ಆದರೆ ಈಗ ಮತ್ತೆ ಹಾಸನ ನಗರದಲ್ಲಿ ಪ್ಲಾಸ್ಟಿಕ್‌ಆ ಬಳಕೆ ನಿಷೇಧ ಅಭಿಯಾನ ಶುರುವಾಗಿದೆ. ಪರಿಣಾಮ ಪ್ಲಾಸ್ಟಿಕ್‌ ಬಳಕೆ ಶೇ.80 ಕಡಿಮೆಯಾಗಿದೆ.

ಪ್ಲಾಸ್ಟಿಕ್‌ ನಿಷೇಧ ಕ್ರಮಗಳ ಅನುಷ್ಠಾನಕ್ಕೆ ಹಾಸನ ನಗರಸಭೆ 4 ತಂಡಗಳನ್ನು ರಚನೆ ಮಾಡಿದೆ. ಆರೋಗ್ಯ ನಿರೀಕ್ಷರ ನೇತೃತ್ವದ ಈ ತಂಡ, ಅಂಗಡಿಗಳಿಗೆ ದಿಢೀರ್‌ ಭೇಟಿ ನೀಡಿ ನಿಷೇಧಿತ ಪ್ಲಾಸ್ಟಿಕ್‌ ಮಾರಾಟದ ತಪಾಸಣೆ ಮಾಡುತ್ತಿವೆ. ಹಾಗಾಗಿ ಪ್ಲಾಸ್ಟಿಕ್‌ ಬ್ಯಾಗ್‌ಗಳ ಬಳಕೆ ಶೇ.80 ಕಡಿಮೆಯಾಗಿದೆ. ಅ.8 ರಂದು ಈರುಳ್ಳಿ ವ್ಯಾಪಾರಿಯೊಬ್ಬರು ಪ್ಲಾಸ್ಟಿಕ್‌ ಬ್ಯಾಗ್‌ಗಳ ಬಳಕೆ ಮಾಡುತ್ತಿದ್ದಾಗ ದಾಳಿ ನಡೆಸಿ ಈರುಳ್ಳಿಯನ್ನೂ ವಶ ಪಡಿಸಿಕೊಂಡು ಕ್ರಮ ಕೈಗೊಂಡಿದ್ದೇವೆ ಎಂದು ಹಾಸನ ನಗರಸಭೆ ಆಯುಕ್ತ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಪ್ಲಾಸ್ಟಿಕ್‌ ಮುಕ್ತ ಹಾಸನಾಂಬ ಜಾತ್ರೆ: ಹಾಸನದ ಅ.17 ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭವಾಗಲಿದೆ. ಜಾತ್ರೆ ಹಿನ್ನೆಲೆಯಲ್ಲಿ ಹಾಸನಾಂಬ ದೇವಾಲಯದ ಆವರಣವನ್ನು ಪ್ಲಾಸ್ಟಿಕ್‌ ಮುಕ್ತ ವಲಯವೆಂದು ಘೋಷಣೆ ಮಾಡಲಾಗುವುದು. ದೇಗುಲ ಪರಿಸರದ ಅಂಗಡಿಗಳ ಮಾಲಿಕರು ಪ್ಲಾಸ್ಟಿಕ್‌ ಬಳಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ರಸ್ತೆ ಬದಿ ತಾತ್ಕಾಲಿಕವಾಗಿ ಅಂಗಡಿ ಹಾಕುವವರೂ ಪ್ಲಾಸ್ಟಿಕ್‌ ಕವರ್‌ ಬಳಸದಂತೆ ಎಚ್ಚರ ವಹಿಸಲಾಗುವುದು ಎಂದರು.

 

ಲೋಟ,ಬಾಟಲ್‌, ಪೊಟ್ಟಣ ನಿಂತಿಲ್ಲ  :  ಹೋಟೆಲ್‌ಗ‌ಲ್ಲಿ ತಿನಿಸುಗಳ ಪಾರ್ಸಲ್‌ಗೆ ಪಾಸ್ಟಿಕ್‌ ಡಬ್ಬಿಗಳು (ಕಂಟೈನರ್‌ಗಳು) ಬಳಕೆ ಯಾಗುತ್ತಿವೆ. ಪ್ಲಾಸ್ಟಿಕ್‌ ನಿಷೇಧವೆಂದರೆ ಕೇವಲ ಪ್ಲಾಸ್ಟಿಕ್‌ ಬ್ಯಾಗ್‌ ನಿಷೇಧವಷ್ಟೇ ಎನ್ನುವಂತಾಗಿದೆ. ಪ್ಲಾಸ್ಟಿಕ್‌ ಲೋಟ, ನೀರಿನ ಬಾಟೆಲ್‌, ವಿವಿಧ ಬ್ರ್ಯಾಂಡ್‌ನ‌ ಸಿದ್ಧ ತಿನಿಸುಗಳ ಪೊಟ್ಟಣಗಳು ಇನ್ನೂ ಪ್ಲಾಸ್ಟಿಕ್‌ ಕವರ್‌ಗಳಲ್ಲಿ ಪೂರೈಕೆಯಾಗುತ್ತಿವೆ. ಆದರೂ ಅಧಿಕಾರಿಗಳು ಗಮನ ಹರಿಸುವುದಿರಲಿ, ಅವುಗಳ ಪೂರೈಕೆ ಮತ್ತು ಮಾರಾಟ ಮಾಡದಂತೆ ಜಾಗೃತಿ ಮೂಡಿಸುವ ಪ್ರಯತ್ನವನ್ನೂ ನಡೆಸಿಲ್ಲದಿರುವುದು ವಿಷಾದನೀಯ ಬೆಳವಣಿಗೆ.

ಪ್ಲಾಸ್ಟಿಕ್‌ ನಿಷೇಧ ಕುರಿತು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಜಾಗೃತಿ ಅಗತ್ಯ. ನಗರ ಪ್ರದೇಶಗಳಲ್ಲಿ 10 ಸೇರಿ ಇದುವರೆಗೆ 80 ಬೀದಿ ನಾಟಕ ಪ್ರದರ್ಶನ ನೀಡಿ ಜಾಗೃತಿ ಮೂಡಿಸುತ್ತಿದ್ದೇವೆ. ಈಗ ಹೋಟೆಲ್‌ಗ‌ಳಿಂದ ತಿಂಡಿ ತರಲು, ಮಾಂಸ ದಂಡಿಗಳಿಗೂ ಪಾತ್ರೆ ಕೊಂಡೊಯ್ದು ಖರೀದಿ ಮಾಡುತ್ತಿದ್ದಾರೆ. ಬಿ.ಟಿ.ಮಾನವ,ಬೀದಿ ನಾಟಕಗಳ ಹಿರಿಯ ಕಲಾವಿದ

 

-ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.