ಧಾರ್ಮಿಕ ಕೇಂದ್ರಗಳ ಕಾರ್ಯ ಸ್ತುತ್ಯರ್ಹ
Team Udayavani, Feb 20, 2018, 6:10 AM IST
ಶ್ರವಣಬೆಳಗೊಳ: ದೇಶದಲ್ಲಿ ಧಾರ್ಮಿಕ ಕೇಂದ್ರಗಳು ಧಾರ್ಮಿಕ ಸೇವೆಯ ಜತೆಗೆ ಸಾಮಾಜಿಕ ಕಾರ್ಯದಲ್ಲಿ
ತೊಡಗಿಕೊಂಡಿರುವುದು ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ ಮಹೋತ್ಸದ ಸಂದರ್ಭದಲ್ಲಿ ನಿರ್ಮಾಣವಾಗಿರುವ ಸಾರ್ವಜನಿಕ ಆಸ್ಪತ್ರೆ
ಮತ್ತು ಗೊಮ್ಮಟನ ದರ್ಶನಕ್ಕಾಗಿ ವಿಂಧ್ಯಗಿರಿ ಬೆಟ್ಟಕ್ಕೆ ತೆರಳಲು ನಿರ್ಮಿಸಿರುವ ನೂತನ ಮೆಟ್ಟಿಲು ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ಮಠ ಮಾನ್ಯಗಳು ಶಿಕ್ಷಣ, ಆರೋಗ್ಯ ಸೇವೆ, ಮದ್ಯವ್ಯಸನ ಮುಕ್ತಗೊಳಿಸುವಂತಹ ಸಾಮಾಜಿಕ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿವೆ. ಇದು ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಹೇಳಿದರು.
ನಮ್ಮಲ್ಲಿ ಸಾಮಾಜಿಕ ಕಾರ್ಯಗಳಿಗಿಂತ ಧಾರ್ಮಿಕ ವಿಷಯಗಳೇ ಹೆಚ್ಚಾಗಿ ಚರ್ಚೆಯಾಗುತ್ತವೆ ಎಂಬ ಅಭಿಪ್ರಾಯವಿದೆ. ಆದರೆ, ಅದು ತಪ್ಪು ಕಲ್ಪನೆ. ಸಮಾಜದಲ್ಲಿ ಕಾಲ ಕಾಲಕ್ಕೆ ಸಂತರು, ಮುನಿಗಳು,ಆಚಾರ್ಯರು ಉದಯಿಸಿ ಸಮಾಜವನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಮಾರ್ಗದರ್ಶನ ಮಾಡುತ್ತ ಬಂದಿದ್ದಾರೆ. ಈಗ ಬದಲಾವಣೆಯ ಯುಗದಲ್ಲಿಯೂ ಉಚಿತ ಸಾರ್ವಜನಿಕ ಆಸ್ಪತ್ರೆ ಆರಂಭಿಸಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರವೂ ಬಡವರ ಆರೋಗ್ಯ ರಕ್ಷಣೆಗೆ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ವಿಶ್ವದ ಯಾವ ರಾಷ್ಟ್ರವೂ ಆಲೋಚನೆ
ಮಾಡದಂತಹ ಯೋಜನೆ ಜಾರಿಗೆ ತಂದಿದೆ. ದೇಶದ ಪ್ರತಿಯೊಬ್ಬ ಬಡವನ ಕುಟುಂಬದ ಆರೋಗ್ಯ ರಕ್ಷಣೆಗೆ ಆಯುಷ್‌ಮಾನ್ ಭಾರತ ವಿಮಾ ಯೋಜನೆ ಮೂಲಕ ವಾರ್ಷಿಕ ಐದು ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದರು.
ಬಡ ಕುಟುಂಬದಲ್ಲಿ ಒಬ್ಬ ವ್ಯಕ್ತಿ ಅನಾರೋಗ್ಯಕ್ಕೀಡಾದರೆ ಇಡೀ ಕುಟುಂಬ ಸಂಕಷ್ಟಕ್ಕೀಡಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ತಿಳಿಸಿದರು.
ಕೇಂದ್ರದ ಕೈಲಾದ ಸೇವೆ: ಬಾಹುಬಲಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಬಂದ ಬೇಡಿಕೆಯನ್ನು ಈಡೇರಿಸುವ ಮೂಲಕ ಕೈಲಾದ ಪ್ರಯತ್ನ ಮಾಡಿದ್ದೇವೆ. ಬಾಹುಬಲಿ ದರ್ಶನಕ್ಕೆ ಹೊಸ ಮೆಟ್ಟಿಲುಗಳನ್ನು ಮಾಡಲು ಬೇಡಿಕೆ ಬಂದಾಗ ಕೇಂದ್ರ ಸರ್ಕಾರ ಮುಕ್ತ ಮನಸ್ಸಿಂದ ಒಪ್ಪಿ ಕೆಲಸ ಮಾಡಿದೆ ಎಂದರು.
ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಬಾಹುಬಲಿ ಮಹಾ ಮಜ್ಜನ ಕಾರ್ಯಕ್ರಮದಲ್ಲಿ ಪ್ರಧಾನಿಯಾಗಿ ಪಾಲ್ಗೊಂಡಿರುವುದು ನನ್ನ ಭಾಗ್ಯ. ಮಹಾಮಜ್ಜನದ ಸಮಯದಲ್ಲಿಯೇ ನಾನು ಪ್ರಧಾನಿಯಾಗಿರುವುದು ನನ್ನ ಸೌಭಾಗ್ಯ.
– ನರೇಂದ್ರ ಮೋದಿ, ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್ಗೆ 3ನೇ ನೋಟಿಸ್
Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.