ಜಿಲ್ಲಾದ್ಯಂತ ಪೋಲಿಯೋ ಲಸಿಕೆ ಅಭಿಯಾನ
Team Udayavani, Feb 1, 2021, 11:29 AM IST
ಹಾಸನ: ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವುದನ್ನು ಪೋಷಕರು ಮರೆಯ ಬಾರದು ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಯಾವುದೇ ಒಂದು ಮಗು ಲಸಿಕೆ ಪಡೆಯದೆ ತೊಂದರೆಗೀಡಾಗಿ ಮುಂದಿನ ಭವಿಷ್ಯ ಹಾಳಾಬಾರದು. 5 ವರ್ಷದೊಳಗಿನ ಮಕ್ಕಳಿಗೆಈ ಹಿಂದೆ ಲಸಿಕೆ ಕೊಡಿಸಲಾಗಿದ್ದರೂ ಮತ್ತೆ ಹಾಕಿಸುವುದನ್ನು ಮರೆಯಬಾರದು ಎಂದು ಎಂ ದು ಹೇಳಿದರು.
ಉತ್ತಮ ಸಮಾಜ ನಿರ್ಮಾಣ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ತುಂಬಾ ನಿಗಾವಹಿಸಿದೆ. ಪೋಲಿಯೋ ರೋಗದಿಂದ ಶಾಶ್ವತ ಅಂಗವಿಕಲರಾಗುತ್ತಾರೆ. ಈ ಬಗ್ಗೆ ಹೆಚ್ಚು ಗಮನ ನೀಡಿ ಸರಿಯಾದ ಸಮಯಕ್ಕೆ ಪೋಲಿಯೋ ಲಸಿಕೆ ಹಾಕಿಸುವುದರ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಮುಕ್ತ ಮಾಡಿ ಉತ್ತಮ ಸಮಾಜ ನಿರ್ಮಾಣ ಮಾಡೋಣ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಪ್ರತಿ ಮಗುವಿಗೂ ಲಸಿಕೆಯನ್ನು ತಪ್ಪದೇ ಕೊಡುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಹಾಸನ ಜಿಲ್ಲೆಯಲ್ಲಿ 5 ವರ್ಷಕ್ಕಿಂತ ಕಡಿಮೆಯಿರುವ ಎಲ್ಲಾ ಮಕ್ಕಳಿಗಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ:ಲಸಿಕೆ ಹಾಕಿಸಿ, ಪೊಲೀಯೋ ತೊಲಗಿಸಿ
ಮನೆಗಳಿಗೆ ಭೇಟಿ: ರೋಗ ನಿರೋಧಕ ಶಕ್ತಿ ಕುಂಠಿತವಾಗಿರುವಂತಹ ಆರೋಗ್ಯ ಸಮಸ್ಯೆ ಗಳನ್ನು ಹೊಂದಿರುವ ಮಕ್ಕಳು ಈ ಅಭಿಯಾನದಿಂದ ಹೊರಗುಳಿಯುವ ಸಂಭವ ವಿದೆ. ಹಾಗಾಗಿ ಅಭಿಯಾನದ ಮೊದಲನೇ ದಿನ ಬೂತ್ ಮಟ್ಟದಲ್ಲಿ ಅಂಗನವಾಡಿ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದ್ದು, ಉಳಿದ ದಿನಗಳಲ್ಲಿ ಅಭಿಯಾನದಿಂದ ಹೊರಗುಳಿದ ಮಕ್ಕಳಿಗೆ ಆರೋಗ್ಯಕಾರ್ಯಕರ್ತರು ಮನೆಗಳಿಗೆ ಭೇಟಿ ಮಾಡಿ ಪೋಲಿಯೋ ಲಸಿಕೆ ನೀಡುತ್ತಾರೆ ಎಂದು ಹೇಳಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮೂರ್ತಿ, ಹಿಮ್ಸ್ ನಿರ್ದೇಶಕ ಡಾ.ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ಕುಮಾರ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕಾಂತರಾಜು, ಡಾ. ಲಕ್ಷ್ಮೀಕಾಂತ್, ಹಿಮ್ಸ್‌ನ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ.ವಿನಯ್, ಆಯುಷ್ ಅಧಿಕಾರಿ ವೀಣಾ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.