ಒಂದೇ ಕುಟುಂಬದ ಮೂವರಿಗೆ ಪಾಸಿಟಿವ್‌


Team Udayavani, May 20, 2020, 6:53 AM IST

moovarige

ಹಾಸನ: ಮುಂಬೈನಿಂದ ಹಾಸನಕ್ಕೆ ಕಾರಿನಲ್ಲಿ ಬಂದಿದ್ದ ಹೊಳೆನರಸೀಪುರದ ಒಂದೇ ಕುಟುಂಬದ ಮೂವರಿಗೆ ಕೋವಿಡ್‌ 19 ಪಾಸಿಟಿವ್‌ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 17 ವರ್ಷದ (ಪಿ 1310) ವರ್ಷದ (ಪಿ 1311) ಬಾಲಕ ಹಾಗೂ 38 ವರ್ಷದ (ಪಿ 1312) ಮಹಿಳೆಗೆ ಸೋಂಕು ಕಾಣಿಸಿ ಕೊಂಡಿದೆ. ಈ ಮೂವರು ತಾಯಿ, ಮಗಳು ಮತ್ತು ಮಗ.

ಇವರನ್ನು ಜಿಲ್ಲೆಯ  ಐಸೋಲೇಷನ್‌ ವಾರ್ಡ್‌ಗೆ ಸ್ಥಳಾಂತರಿಲಾಗಿದೆ ಎಂದು ಹೇಳಿದರು. ಮುಂಬೈನ್‌ನ ಅಂಧೇರಿ ಪ್ರದೇಶದಿಂದ ಮೇ 14ರಂದು ಇನೋವಾ ಕಾರಿನಲ್ಲಿ ಹೊಳೆನರಸೀಪುರಕ್ಕೆ 6 ಮಂದಿ ಬಂದಿದ್ದರು. ಇವರಲ್ಲಿ ಇಬ್ಬರು ಮಂಡ್ಯ ಜಿಲ್ಲೆ ಕೆ.ಆರ್‌. ಪೇಟೆಗೆ ತೆರಳಿದ್ದಾರೆ. ಉಳಿದ ನಾಲ್ವರ ಗಂಟಲು ದ್ರವ ಮಾದರಿ ಪಡೆದು ಜಿಲ್ಲೆಯ ತಟ್ಟೆಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ಮೂರು ಜನರ ವರದಿ ಪಾಸಿಟಿವ್‌ ಬಂದಿದ್ದು, ಅವರನ್ನು ಜಿಲ್ಲಾ  ಕೋವಿಡ್‌ ಆಸ್ಪತ್ರೆಗೆ ಕರೆತರಲಾಗಿದೆ. ಮತ್ತೂಬ್ಬರ ವರದಿ ಬರಬೇಕಿದೆ ಎಂದರು.

ಕೋವಿಡ್‌ 19 ಬಗ್ಗೆ ತೀವ್ರ ನಿಗಾ: ಕೋವಿಡ್‌ 19 ರೋಗಿಗಳಿಗೆ ಚಿಕಿತ್ಸೆ ನೀಡಲು ಅನುಭವಿ ಸಮಿತಿ ರಚಿಸಲಾಗಿದೆ. ಸ್ಪೆಷಲಿಸ್ಟ್‌ ಗ್ರೂಪ್‌ ಮಾಡಲಾಗಿದೆ ಅಲ್ಲದೆ ರಾಜ್ಯದಲ್ಲಿ ಸೆಂಟ್ರಲ್‌ ಕಮಿಟಿ ಇದ್ದು, ಅಂತರ್ಜಾಲದ ಮೂಲಕ ರೋಗಿಗಳ  ಮಾಹಿತಿ ಕಲೆಹಾಕಲಾಗುತ್ತಿದೆ. ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗು ತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ 19 ಬಗ್ಗೆ ಹೆಚ್ಚಿನ ನಿಗಾವಹಿಸಲಾಗುವುದು, ಹಾಸನ ಜಿಲ್ಲಾ ಕೋವಿಡ್‌ 19 ಆಸ್ಪತ್ರೆಯಲ್ಲಿ ಇರುವ ಎಲ್ಲಾ ಸೋಂಕಿತರ  ಆರೋಗ್ಯದಲ್ಲಿ ಸುಧಾರಣೆ  ಕಂಡು ಬರುತ್ತಿರುವುದಾಗಿ ತಿಳಿಸಿದರು.

ವಲಸೆ ಕಾರ್ಮಿಕರಿಗೆ ನೆರವು: ಜಿಲ್ಲೆಯಿಂದ ವಾಸವಾಗಿದ್ದ ಮಧ್ಯಪ್ರದೇಶಕ್ಕೆ 166 ಜನ ಹಾಗೂ ಜಾರ್ಖಂಡ್‌ಗೆ 126 ಮಂದಿ ಕಾರ್ಮಿಕನ್ನು ಕಳುಹಿಸಲಾಗಿದೆ. ಬಿಹಾರಕ್ಕೆ ಹೋಗಲು ಜಿಲ್ಲೆಯಿಂದ ಹೆಚ್ಚಿನ ಕಾರ್ಮಿಕರ  ಬೇಡಿಕೆ ಇದ್ದು,  ಶೀಘ್ರದಲ್ಲಿ ಮತ್ತೂಂದು ರೈಲಿನ ವ್ಯವಸ್ಥೆ ಮಾಡಲಾಗುವುದು. ಜಿಲ್ಲೆ ಯಿಂದ 600 ಮಂದಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದಲೂ ಕಾರ್ಮಿಕರು ಬರುತ್ತಿದ್ದಾರೆ ಎಂದರು.

ಅಕ್ರಮ ಪ್ರವೇಶಕ್ಕೆ ತಡೆ: ರಾಜ್ಯ ಸರ್ಕಾರದ ನಿರ್ದೇಶನದಂತೆ ಹೊರ ರಾಜ್ಯದಿಂದ ಜಿಲ್ಲೆಗೆ ಆಗಮಿಸುವವರಿಗೆ ಹೊಸದಾಗಿ ಪಾಸ್‌ ನೀಡುವುದನ್ನು ಸ್ಥಗಿತ ಮಾಡಲಾಗಿದೆ. ಮಹಾ ರಾಷ್ಟ್ರ, ತಮಿಳುನಾಡು ಹಾಗೂ ಗುಜುರಾತ್‌ ರಾಜ್ಯದಿಂದ  ಬರುವವರಿಗೆ ಸಂಪೂರ್ಣ ನಿಷೇಧ ಮಾಡಲಾಗಿದೆ. ರಾಜ್ಯದ ಗಡಿ ಭಾಗದಲ್ಲಿ ಸರ್ಕಾರ ಹೆಚ್ಚು ಬಿಗಿ ಮಾಡಿದೆ. ಈ ನಡುವೆಯೂ ಅಕ್ರಮವಾಗಿ ನುಸಳಿ ಬಂದವರನ್ನು ಪತ್ತೆ ಹಚ್ಚಲಾಗುವುದು, ಗ್ರಾಮ ಪಂಚಾಯಿತಿಯಿಂದ ಪ್ರತಿ  ಗ್ರಾಮದಲ್ಲಿಯೂ ಸ್ವಯಂ ಸೇವಕರನ್ನು ನೇಮಿಸಿ ಮಾಹಿತಿ ಕಲೆಹಾಕಲಾಗುವುದು ಎಂದರು.

ಕೋವಿಡ್‌ 19 ಪರೀಕ್ಷೆಗೆ ಹೊಸ ಯಂತ್ರ: ಪಕ್ಕದ ಚಿಕ್ಕಮಗಳೂರು ಜಿಲ್ಲೆಯವರ ಗಂಟಲು ದ್ರವ ಮಾದರಿ ಪರೀಕ್ಷೆಯನ್ನು ಹಾಸನದಲ್ಲೇ ಮಾಡ  ಬೇಕಾಗಿರುವುದರಿಂದ ಹಾಸನಕ್ಕೆ ಮತ್ತೂಂದು ಹೊಸ ಯಂತ್ರ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಿಮ್ಸ್‌ ನಿರ್ದೇಶಕ ಡಾ. ಬಿ.ಸಿ.ರವಿಕುಮಾರ್‌ ಬೇಡಿಕೆ ಇಟ್ಟಿದ್ದರು. ಹಾಗಾಗಿ ಈಗ ಜಿಲ್ಲೆಗೆ  ಹೊಸ ಯಂತ್ರ ನೀಡಿದ್ದು ಕೋವಿಡ್‌ 19 ಪರೀಕ್ಷೆ ವೇಗವಾಗಿ ನಡೆಯಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.