ಪ್ರಜ್ವಲ್ ಗೆಲುವಿಗಲ್ಲ,ಲೀಡ್‌ಗಷ್ಟೇ ಕುತೂಹಲ
ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಪರವಾಗಿ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ
Team Udayavani, May 13, 2019, 1:14 PM IST
ಹಾಸನ: ಪ್ರಜ್ವಲ್ ರೇವಣ್ಣ ಅವರ ಗೆಲುವಿನ ಬಗ್ಗೆ ಅನುಮಾನವಿಲ್ಲ. ಆದರೆ ಬಹುಮತ ಎಷ್ಟು ಎಂಬುದಷ್ಟಕ್ಕೇ ಕುತೂಹಲ ಎಂದು ಪ್ರಜ್ವಲ್ ರೇವಣ್ಣ ಅವರ ತಾಯಿ, ಜಿಪಂ ಸದಸ್ಯೆ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ.
ಭಾರೀ ಬಹುಮತದಿಂದ ಗೆಲುವು: ನಗರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ – ಕಾಂಗ್ರೆಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಭಾರೀ ಬಹುಮತ ಗಳಿಂದ ಪ್ರಜ್ವಲ್ ರೇವಣ್ಣ ಗೆಲ್ಲುವ ನಿರೀಕ್ಷೆಯಿದ್ದು, ಸುಮಾರು 3 ಲಕ್ಷ ಮತಗಳ ಅಂತರದ ಜಯವನ್ನು ನಿರೀಕ್ಷಿಸಿದ್ದೇವೆ. ಹಾಗಾಗಿ ಪ್ರಜ್ವಲ್ ಗೆಲುವಿನ ಬಗ್ಗೆ ಅನುಮಾನವಿಲ್ಲ. ಲೀಡ್‌ಗಷ್ಟೇ ಕುತೂಹಲ ಎಂದರು.
ಎಚ್ಎಂಟಿ ಕ್ಷೇತ್ರದ ಪ್ರಾಮುಖ್ಯತೆ: ದೇವೇಗೌಡರು ಮತ್ತು ಕುಟುಂಬದವರು ಸ್ಪರ್ಧಿಸಿರುವ ಹಾಸನ, ಮಂಡ್ಯ, ತುಮಕೂರು ಕ್ಷೇತ್ರಗಳನ್ನು ಎಚ್ಎಂಟಿ ಎಂದೇ ಮಾಧ್ಯಮಗಳು ಬಿಂಬಿಸಿವೆ. ಈ ಮೂರೂ ಕ್ಷೇತ್ರಗಳಲ್ಲೂ ಜೆಡಿಎಸ್- ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದೂ ಭವಾನಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಶೈಕ್ಷಣಿಕ ಸುಧಾರಣೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳೂ ಸಹಕಾರ ನೀಡಿದರು. ಮುಖ್ಯವಾಗಿ ಶಿಕ್ಷಕರ ಮತ್ತು ಮಕ್ಕಳ ಶ್ರಮದಿಂದ ಹಾಸನ ಜಿಲ್ಲೆ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ 31 ನೇ ಸ್ಥಾನದಲ್ಲಿದ್ದುದು 13 ನೇ ಸ್ಥಾನಕ್ಕೆ, ಆನಂತರ 7 ನೇ ಸ್ಥಾನಕ್ಕೆ ಬಂದು ಈ ವರ್ಷ ಪ್ರಥಮ ಸ್ಥಾನ ಪಡೆದಿದೆ. ಇದಕ್ಕಾಗಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರನ್ನು ಅಭಿನಂದಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಕೈಗೊಂಡ ಕ್ರಮಗಳೂ ಕಾರಣವಂತೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರು ಏನಾದ್ರೂ ಹೇಳಿಕೊಳ್ಳಲಿ. ನಾವು ಏನೇನು ಮಾಡಿದ್ದೇವೆ. ಎಷ್ಟು ಸಭೆಗಳನ್ನು ನಡೆಸಿದ್ದೇವೆ ಎಂಬುದು ಅಧಿಕಾರಿಗಳಿಗೆ ಗೊತ್ತಿದೆ. ಶಾಲೆಗಳಲ್ಲಿ ಶಿಕ್ಷಕರು ಎಷ್ಟು ಶ್ರಮಿಸಿದ್ದಾರೆ ಎಂಬುದು ಮಕ್ಕಳು ಮತ್ತು ಪೋಷಕರಿಗೆ ಗೊತ್ತಿದೆ. ತಾಯಂದಿರ ಸಭೆಗಳನ್ನು ಹಾಸನ ಜಿಲ್ಲೆಯಲ್ಲಿ ಮೊದಲ ಬಾರಿಗೆ ನಾವು ನಡೆಸಿದೆವು. ಈ ಕ್ರಮ ರಾಜ್ಯದಲ್ಲಿಯೇ ಮೊದಲು. ಈ ಎಲ್ಲಾ ಕ್ರಮಗಳಿಗೆ ಭಗವಂತನು ಫಲ ನೀಡಿದ್ದರಿಂದಾಗಿ ಹಾಸನ ಜಿಲ್ಲೆ ಜಿಲ್ಲೆ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದರು.
ಮುಂದಿನ ವರ್ಷದ ಪರೀಕ್ಷೆಯಲ್ಲೂ ಮೊದಲ ಸ್ಥಾನವನ್ನು ಉಳಿಸಿಕೊಳ್ಳುವ ಸವಾಲು ನಮ್ಮ ಮುಂದಿದೆ. ಆ ನಿಟ್ಟಿನಲ್ಲಿ ನಾನು ಈಗಾಗಲೇ ಕೆಲವು ಕಾರ್ಯಕ್ರಮಗಳನ್ನು ಯೋಜಿಸಿದ್ದೇನೆ. ಆ ನಿಟ್ಟಿನಲ್ಲಿ ಕಾರ್ಯೋನ್ನಮುಖರಾಗುತ್ತೇವೆ ಎಂದೂ ಭವಾನಿ ರೇವಣ್ಣ ಅವರು ಸ್ಪಷ್ಪಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.