ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅಗೌರವ: ಆರೋಪ
Team Udayavani, Sep 12, 2019, 3:00 AM IST
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ನೂರಾರು ಕೋಟಿ ರೂ.ಆಸ್ತಿಯ ಒಡೆಯರಾಗಿದ್ದು, ಲೋಕಸಭಾ ಚುನಾವಣೆಗೆ ನಾಮಪತ್ರದ ಜೊತೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಈ ಸಂಬಂಧ ತಾವು ರಾಜ್ಯ ಉತ್ಛ ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣ ಸಂಬಂಧ ನ್ಯಾಯಾಲಯವು ಎರಡು ಬಾರಿ ನೋಟಿಸ್ ನೀಡಿದರೂ ಸ್ವೀಕರಿಸದೇ ಯಾಲಯಕ್ಕೆ ಅಗೌರವ ತೋರಿದ್ದಾರೆ ಎಂದು ವಕೀಲ ದೇವರಾಜೇಗೌಡ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆವರು, ಹಾಸನ ಜಿಲ್ಲಾ ನ್ಯಾಯಾಧೀಶರ ಮೂಲಕವೂ ನೀಡಿದ ನೋಟಿಸ್‌ನ್ನು ಪ್ರಜ್ವಲ್ ರೇವಣ್ಣ ಅವರು ಸ್ವೀಕರಿಸದೇ ನ್ಯಾಯಾಂಗಕ್ಕೆ ಅಗೌರವ ತೋರಿದ್ದಾರೆ. ಈಗ ಅಂತಿಮವಾತಿ ನ್ಯಾಯಾಲಯವು ಪತ್ರಿಕೆಗಳಿಗೆ ಜಾಹಿರಾತು ನೀಡುವ ಮೂಲಕ ನೋಟಿಸ್ ಜಾರಿ ಮಾಡಿ ಸೆ.30ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ ಎಂದು ಹೇಳಿದರು.
ನೂರಾರು ಕೋಟಿ ರೂ. ಒಡೆಯ: ನ್ಯಾಯಲಯವು ಜಾರಿಗೊಳಿಸಿದ ನೋಟೀಸನ್ನೂ ಸ್ವೀಕರಿಸದಷ್ಟು ಉಢಾಫೆ ಧೋರಣೆಯ ಪ್ರಜ್ವಲ್ ರೇವಣ್ಣ 28 ನೇ ವಯಸ್ಸಿಗೇ ನೂರಾರು ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯನಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧವೂ ಮುಂದಿನ ದಿನಗಳಲ್ಲಿ ಸಿಬಿಐ , ಐಟಿ, ಹಾಗೂ ಇಡಿ ತನಿಖೆಗಳು ನಡೆಯಬೇಕು ಎಂದು ಒತ್ತಾಯಿಸಿದರು.
ಪಡುವಲಹಿಪ್ಪೆ ಮತದಾನ ಕೇಂದ್ರದಲ್ಲಿ ಮತದಾನಕ್ಕೆ ಮುನ್ನ 18ನಿಮಿಷ ಹಾಗೂ ಮತದಾನದ ನಂತರ 8 ನಿಮಿಷಗಳ ಕಾಲ ಎಚ್‌ಡಿ.ರೇವಣ್ಣ ಅವರು ಮತಗಟ್ಟೆಯಲ್ಲಿದ್ದು ನಕಲಿ ಮತದಾನ ಮಾಡಿಸಿದ್ದಾರೆಂಬ ದೂರಿನ ಹಿನ್ನೆಲೆಯಲ್ಲಿ ಅಂದಿನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಪಡುವಲಹಿಪ್ಪೆ ಮತಗಟ್ಟೆಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದ್ದರು. ಈ ಕ್ರಮ ಆಧರಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ರಾಜ್ಯ ಚುನಾವಣಾ ಆಯೋಗವು ಮುಂದಿನ ಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿಯವರಿಗೆ ಸೂಚನೆ ನೀಡಿದೆ.
ಈ ಹಿಂದಿನ ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು ಚುನಾವಣಾ ಆಯೋಗದ ಸೂಚನಾ ಪತ್ರವನ್ನು ಮುಚ್ಚಿಟ್ಟಿದ್ದರೆಂದು ದೂರಿದರು. ಜಿಲ್ಲೆಯಲ್ಲಿರುವ ಭ್ರಷ್ಟ ಅಧಿಕಾರಿಗಳನ್ನು ಶಾಸಕ ಪ್ರೀತಂ ಜೆ.ಗೌಡ ಅವರು ರಕ್ಷಣೆ ಮಾಡಬಾರದು. ಇದರಿಂದ ಶಾಸಕರಿಗೇ ಕೆಟ್ಟ ಹೆಸರು ಬರುತ್ತದೆ. ಕಾಂಗ್ರೆಸ್ ಸರ್ಕಾರವಿದ್ದಾಗಲೂ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರ ಭ್ರಷ್ಟಾಚಾರದ ವಿರುದ್ಧವೂ ನಾನು ಹೋರಾಟ ಮಾಡಿದ್ದೆ ಎಂದು ಹೇಳಿದರು.
ರೇವಣ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಚ್.ಡಿ.ರೇವಣ್ಣ ಅವರು ಹೊಳೆನರಸೀಪುರ ತಾಲೂಕು ಪಡುವಲಹಿಪ್ಪೆ ಮತಗಟ್ಟೆಯಲ್ಲಿ ನಕಲಿ ಮತದಾನಕ್ಕೆ ಕುಮ್ಮಕ್ಕು ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗವು ಜಿಲ್ಲಾ ಚುನಾವಣಾಧಿಕಾರಿಯವರಿಗೆ ಸೂಚನೆ ನೀಡಿದೆ. ಅಕ್ರಮ ಮತದಾನಕ್ಕೆ ರೇವಣ್ಣ ಅವರು ಕುಮ್ಮಕ್ಕು ನೀಡಿದ್ದಾರೆ ಎಂದು ತಾವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೆ. ಈ ಸಂಬಂಧ ಚುನಾವಣಾ ಆಯೋಗವು ಕ್ರಮ ಕೈಗೊಂಡಿದೆ ಎಂದು ವಕೀಲ ದೇವರಾಜೇಗೌಡ ಹೇಳಿದರು.
ಜಿಲ್ಲೆಯಲ್ಲಿ ಬೇರೂರಿ ಕುಳಿತಿದ್ದ ಅಧಿಕಾರಿಗಳು ಮಾಜಿ ಸಚಿವ ರೇವಣ್ಣ ಅವರ ಆಜ್ಞಾಪಾಲಕರಂತೆ ಕೆಲಸ ಮಾಡಿಕೊಂಡು ವ್ಯಾಪಕ ಭ್ರಷ್ಟಾಚಾರ ನಡೆಸಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರ ರಕ್ಷಣೆಗೆ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರೂ ಸಹಕಾರ ನೀಡುತ್ತಿದ್ದಾರೆ. ಹಲವು ಭ್ರಷ್ಟ ಅಧಿಕಾರಿಗಳನ್ನು ಪ್ರೀತಂಗೌಡ ಅವರು ಉಳಿಸಿಕೊಳ್ಳುತ್ತಿದ್ದಾರೆ.
-ದೇವರಾಜೇಗೌಡ, ವಕೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.