ಪ್ರಜ್ವಲ್‌ರೇವಣ್ಣಗೆ ಭಾರೀ ಅಂತರದ ವಿಜಯ


Team Udayavani, May 24, 2019, 3:00 AM IST

prajwal

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪ್ರತಿನಿಧಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಅವರ ಮೊಮ್ಮಗ ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರ ವಿರುದ್ಧ 1,41,324 ಮತಗಳ ಅಂತರದ ಜಯ ಸಾಧಿಸಿದ್ದಾರೆ.

ಮತ ಎಣಿಕೆ ಆರಂಭದಿಂದ ಮುನ್ನಡೆ: ಪ್ರಜ್ವಲ್‌ ರೇವಣ್ಣ ಅವರು 6,76,606 ಮತಗಳನ್ನು ಪಡೆದು ವಿಜಯಿಯಾದರೆ, ಅವರ ಸಮೀಪದ ಪ್ರತಿಸ್ಪರ್ಧಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎ. ಮಂಜು ಅವರು 5,35,282 ಮತಗಳನ್ನು ಪಡೆದು ಪರಾಭವಗೊಂಡರು. ಮತ ಎಣಿಕೆ ಆರಂಭವಾದ ಮೊದಲ ಸುತ್ತಿನಿಂದಲೇ ಮುನ್ನಡೇ ಕಾಯ್ದುಕೊಂಡ ಪ್ರಜ್ವಲ್‌ ರೇವಣ್ಣ ಅವರು ಎಲ್ಲಾ 23 ಸುತ್ತುಗಳಲ್ಲೂ ಮುನ್ನಡೆ ಸಾಧಿಸುತ್ತಲೇ ಸಾಗಿದ ರೇವಣ್ಣ ಅವರು ಭಾರೀ ಅಂತರದ ಜಯ ದಾಖಲಿಸಿ ಮೊದಲ ಪ್ರಯತ್ನದಲ್ಲೇ ಸಂಸತ್‌ ಪ್ರವೇಶ ಮಾಡುತ್ತಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ಗೆಲುವಿನೊಂದಿಗೆ ಹಾಸನ ಲೋಕಸಭಾ ಕ್ಷೇತ್ರ ಅತ್ಯಂತ ಕಿರಿಯ ಪ್ರತಿನಿಧಿಯನ್ನು ಹೊಂದಿದ ದಾಖಲೆ ಮಾಡಿದೆ. 28ರ ಹರೆಯದ, ಅವಿವಾಹಿತರಾದ ಪ್ರಜ್ವಲ್‌ ರೇವಣ್ಣ ಅವರೇ ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿ. ಈ ಹಿಂದೆ ವೈ.ಎನ್‌ ರುದ್ರೇಶಗೌಡ (1996 ರ ಚುನಾವಣೆ) ಅವರನ್ನು ಬಿಟ್ಟರೆ ಹಾಸನ ಲೋಕಸಭಾ ಕ್ಷೇತ್ರವನ್ನು ಎಚ್‌.ಎನ್‌.ನಂಜೇಗೌಡ, ಎಚ್‌.ಸಿ.ಶ್ರೀಕಂಠಯ್ಯ, ಜಿ.ಪುಟ್ಟಸ್ವಾಮಿಗೌಡ ಅವರಂಥ ಹಿರಿಯ ರಾಜಕಾರಣಿಗಳು, ದೇವೇಗೌಡರಂತಹ ಮುತ್ಸದ್ದಿ ನಾಯಕರು ಪ್ರತಿನಿಧಿಸಿದ್ದರು.

ಮತಗಳಿಕೆ ವಿವರ: ಮತಯಂತ್ರಗಳಲ್ಲಿ ಚಲಾವಣೆಗೊಂಡ ಒಟ್ಟು 12,74,438 ಮತಗಳ ಪೈಕಿ ಪ್ರಜ್ವಲ್‌ ರೇವಣ್ಣ 6,75,512 ಮತಗಳನ್ನು ಪಡೆದರೆ ಎ. ಮಂಜು ಅವರು 5,33,389 ಮತಗಳನ್ನು ಗಳಿಸಿದ್ದಾರೆ. ಬಹುಜನ ಸಮಾಜ ಪಕ್ಷದ ವಿನೋದ್‌ರಾಜ್‌ 3,8682 ಮತ ಪಡೆದರೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಎಚ್‌.ಎಂ. ಚಂದ್ರೇಗೌಡ ಅವರು 7,007 ಮತಗಳಿಸಿದ್ದು, ಪಕ್ಷೇತರ ಅಭ್ಯರ್ಥಿಗಳಾದ ಎಂ. ಮಹೇಶ್‌ ಅವರು 3,706 ಹಾಗೂ ಆರ್‌.ಜಿ. ಸತೀಶ್‌ ಅವರು 4,501 ಮತಗಳನ್ನು ಪಡೆದಿದ್ದಾರೆ. 11,641 ನೋಟಾ ಮತಗಳು ದಾಖಲಾಗಿವೆ.

ಇದಲ್ಲದೆ 4,215 ಅಂಚೆ ಮತಗಳು ಸ್ವೀಕೃತಗೊಂಡಿದ್ದು ಅದರಲ್ಲಿ 1,101 ಮತಗಳು ತಿರಸೃತಗೊಂಡಿವೆ, ಪುರಸ್ಕೃತ ಗೊಂಡಿರುವ ಮತಗಳಲ್ಲಿ ಪ್ರಜ್ವಲ್‌ ರೇವಣ್ಣ ಅವರು 1,094, ಎ. ಮಂಜು 1,893, ಬಿಎಸ್‌ಪಿ ಅಭ್ಯರ್ಥಿ ವಿನೋದ್‌ ರಾಜ್‌ 79, ಪ್ರಜಾಕೀಯ ಪಕ್ಷದ ಎಚ್‌.ಎಂ ಚಂದ್ರೇಗೌಡ 16, ಪಕ್ಷೇತರರಾದ ಎಂ. ಮಹೇಶ್‌ 04 ಮತ್ತು ಆರ್‌.ಜಿ. ಸತೀಶ್‌ 07 ಅಂಚೆ ಮತಗಳನ್ನು ಪಡೆದಿದ್ದಾರೆ.

ರೇವಣ್ಣ ಅವರ ಕೈ ಬಿಡದ ಮತದಾರರು: ಪ್ರಜ್ವಲ್‌ ರೇವಣ್ಣ ಅವರ ಗೆಲುವಿನ ಹಿಂದೆ ಎಚ್‌.ಡಿ.ರೇವಣ್ಣ ಅವರ ಹೋರಾಟ ಬಹುದೊಡ್ಡ ಫ‌ಲ ನೀಡಿದೆ. ಜಿಲ್ಲೆಯ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಮಾಡುತ್ತಿರುವ ರೇವಣ್ಣ ಅವರು, ಚುನಾವಣೆ ಘೋಷಣೆ ಆದ ನಂತರ ಮೈತ್ರಿ ಪಕ್ಷದ ಕಾಂಗ್ರೆಸ್‌ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಸಂಘಟಿತ ಪ್ರಚಾರ ನಡೆಸಿದರು. ಪಕ್ಷದ ಸಂಘಟನೆ, ರೇವಣ್ಣ ಅವರ ವರ್ಚಸ್ಸು ಪ್ರಜ್ವಲ್‌ ಗೆಲುವಿಗೆ ಬಹುದೊಡ್ಡ ಕೊಡುಗೆ ನೀಡಿದೆ. ಹಾಸನ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಅಭ್ಯರ್ಥಿ ಬಹುಮತ ಸಾಧಿಸಿರುವುದೇ ಇದಕ್ಕೆ ಸಾಕ್ಷಿ.

ಎ.ಮಂಜುಗೆ ಸತತ 3 ಸೋಲು: ರಾಜಕೀಯ ಭವಿಷ್ಯದ ಚಿಂತೆ
ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ರಾಜಕೀಯ ವೈರಿಯಾಗಿಯೇ ಗುರ್ತಿಸಿಕೊಂಡಿರುವ ಮಾಜಿ ಸಚಿವ ಎ.ಮಂಜು ಅವರು ಪ್ರಜ್ವಲ್‌ ರೇವಣ್ಣ ಅವರೆದರು ಸೋಲು ಅನುಭವಿಸುವ ಮೂಲಕ ಲೋಕಸಭೆ ಪ್ರವೇಶದ ಕನಸು ಭಗ್ನವಾಗಿದೆ. ಅಷ್ಟೇ ಅಲ್ಲ. ಸತತವಾಗಿ ಮೂರು ಚುನಾವಣೆಗಳಲ್ಲಿ ಸೋಲು ಅನುಭವಿಸುವ ಮೂಲಕ ಜಿಲ್ಲೆಯ ರಾಜಕಾರಣದಲ್ಲಿ ಹಿನ್ನಡೆಯನ್ನೂ ಅನುಭವಿಸಿದ್ದಾರೆ.

ಜೆಡಿಎಸ್‌ ಭದ್ರಕೋಟೆ ಎಂದೇ ಗುರ್ತಿಸಿರುವ ಹಾಸನ ಜಿಲ್ಲೆಯಲ್ಲಿ 2013 ರ ವಿಧಾನಸಭಾ ಚುನಾವಣೆಯಲ್ಲಿ 7 ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್‌ ಗೆದ್ದಿತ್ತು. ಅದರಲ್ಲಿ ಎ.ಮಂಜು ಅವರೂ ಒಬ್ಬರು. ಐವರು ಜೆಡಿಎಸ್‌ ಶಾಸಕರು, ರಾಜಕೀಯ ದಿಗ್ಗಜ, ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರೆದರು ಹೋರಾಡುತ್ತಲೇ ಹಾಸನ ಜಿಲ್ಲೆಯ ರಾಜಕಾರಣದಲ್ಲಿ ಗುರ್ತಿಸಿಕೊಂಡಿದ್ದ ಎ.ಮಂಜು ಅವರು 2014 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರೆದರು ಕಾಂಗ್ರೆಸ್‌ನಿಂದ ಸ್ಪರ್ಧೆಗಿಳಿದು 1.04 ಲಕ್ಷ ಮತಗಳ ಅಂತರದಿಂದ ಸೋಲು ಅನುಭವಿಸಿದರು.

ಅದಾದ ನಂತರ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಪಶುಸಂಗೋಪನಾ ಸಚಿವರಾಗಿ ಎರಡೂವರೆ ವರ್ಷ ಜಿಲ್ಲೆಯಲ್ಲಿ ಜೆಡಿಎಸ್‌ನೊಂದಿಗೆ ಸಂಘರ್ಷ ನಡೆಸಿಕೊಂಡೇ ಬಂದ ಎ.ಮಂಜು ಅವರು 2018 ರ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದು ಹ್ಯಾಟ್ರಿಕ್‌ ಗೆಲುವಿನ ಕನಸು ಕಂಡಿದ್ದರು. ಆದರೆ ಜೆಡಿಎಸ್‌ ಅಭ್ಯರ್ಥಿ ಎ.ಟಿ.ರಾಮಸ್ವಾಮಿ ಅವರೆದುರು 12 ಸಾವಿರ ಮತಗಳ ಅಂತರದಿಂದ ಪರಾಭವಗೊಂಡರು.

2ಸೋಲಿನ ಕಹಿ ಮರೆಯುವ ಮುನ್ನವೇ ಎದುರಾದ ಲೊಕಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿದು ರಾಜಕೀಯವಾಗಿ ಚೇತರಿಸಿಕೊಳ್ಳುವ ಯತ್ನದಲ್ಲಿದ್ದಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಚುನಾವಣಾ ಮೈತ್ರಿ ಮಾಡಿಕೊಂಡು ಲೊಕಸಭಾ ಚುನಾವಣೆ ಎದುರಿಸುವ ನಿರ್ಧಾರ ಪ್ರಕಟವಾಗಯಿತು. ಹಾಸನ ಲೊಕಸಭಾ ಕ್ಷೇತ್ರ ಜೆಡಿಎಸ್‌ ಪಾಲಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಟಿಕೆಟ್‌ ಖಾತರಿಪಡಿಸಿಕೊಂಡು ಆ ಸೇರಿದ ಎ.ಮಂಜು ಅವರು ಈಗ ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರೆದುರು 1.43 ಲಕ್ಷ ಮತಗಳ ಅಂತರದಲಿ ಪರಾಭವಗೊಂಡಿದ್ದಾರೆ. ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಲ್ಲಿ ರಾಜಕೀಯ ನೆಲೆಗಾಗಿ ಅಡ್ಡಾಡುತ್ತಲೇ 2 ಲೋಕಸಭಾ ಚುನಾವಣೆಗಳೂ ಸೇರಿ ಸತತ ಮೂರು ಸೋಲು ಅನುಭವಿಸಿರುವ ಎ.ಮಂಜು ಅವರಿಗೆ ಭವಿಷ್ಯದ ರಾಜಕೀಯ ಚಿಂತೆ ಕಾಡುತ್ತಿದೆ.

ಟಾಪ್ ನ್ಯೂಸ್

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.