ಪ್ರಜ್ವಲ್ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸಿ: ಎಚ್.ಡಿ.ರೇವಣ್ಣ
Team Udayavani, Apr 10, 2019, 3:00 AM IST
ಜಾವಗಲ್: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಗೆಲುವಿಗಾಗಿ ಜಾವಗಲ್ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತರು ಒಮ್ಮತದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಮನವಿ ಮಾಡಿದರು.
ಜಾವಗಲ್ ಪಟ್ಟಣದ ಎಪಿಎಂಸಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಜಾವಗಲ್ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈತ್ರಿ ಪಕ್ಷದ ಕಾರ್ಯಕರ್ತರಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದರು.
ಕೋಮುವಾದಿಗಳನ್ನು ದೂರವಿಡಲು ಮೈತ್ರಿ: ಕೋಮುವಾದಿ ಬಿಜೆಪಿಯನ್ನು ದೂರವಿಡಲು ರಾಷ್ಟ್ರಮಟ್ಟದಲ್ಲಿ ಹಲವಾರು ಪಕ್ಷಗಳು ಒಗ್ಗೂಡಿ ಬಿಜೆಪಿ ವಿರುದ್ಧ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿವೆ ಈ ನಿಟ್ಟಿನಲ್ಲಿ ರಾಜ್ಯದಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದರು.
ಮೋದಿ ಸರ್ಕಾರದ ಅಧಿಕಾರಾವಧಿಯಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ರಾಜ್ಯದ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವು ರೈತರ ಸಾಲಮನ್ನಾ ಮಾಡಲು ಧೃಡ ನಿಲುವು ತಾಳಿದೆ ಎಂದರು.
ಜಾವಗಲ್ ಹೋಬಳಿ ಅಭಿವೃದ್ಧಿ: ಜಾವಗಲ್ ಹೋಬಳಿಯ ಸಮಗ್ರ ಅಭಿವೃದ್ಧಿಗೆ ಶಿವರಾಂ, ಜವರೇಗೌಡ, ಶಾಸಕ ಹಾಗೂ ತಾವು ಸೇರಿದಂತೆ ಹೆಚ್ಚಿನ ಗಮನ ಹರಿಸುವುದಾಗಿ ತಿಳಿಸಿದರು. ಚುನಾವಣೆಯ ನಂತರ ಹೋಬಳಿಯ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು.
ರಾಜ್ಯಸಭಾ ಮಾಜಿ ಸದಸ್ಯ ಎಚ್.ಕೆ.ಜವರೇಗೌಡ ಮಾತನಾಡಿ, ಶಾಸಕ ಕೆ.ಎಸ್.ಲಿಂಗೇಶ್ ಕಾಂಗ್ರೆಸ್, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಬೂತ್ ಕಮಿಟಿ ರಚಿಸಿ ಒಗ್ಗಟ್ಟಿನಿಂದ ಮತಯಾಚಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದರು.
ಜಿ ಪಂ ಅಧ್ಯಕ್ಷೆ ಶ್ವೇತಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್, ಜಿಲ್ಲಾ ಸೇವಾದಳ ಸಂಘಟಕ ಜೆ.ಎಸ್. ಶ್ರೀಕಂಠಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ಆನಂದಮೂರ್ತಿ, ಮಹಾದೇವಪ್ಪ, ತಾ.ಪಂ.ಸದಸ್ಯರುಗಳಾದ ವಿಜಯಕುಮಾರ್, ಪ್ರಭಾಕರ್, ಬಸವರಾಜು ಮತ್ತಿತರರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ ಕಳೆದ 36ವರ್ಷಗಳಿಂದ ಜಾವಗಲ್ ಹೋಬಳಿಯ ಕಾರ್ಯಕರ್ತರೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಇಂತಹ ಹೃದಯ ಶ್ರೀಮಂತಿಕೆಯುಳ್ಳ ಕಾರ್ಯಕರ್ತರನ್ನು ಬೇರೆಲ್ಲೂ ಕಾಣಲು ಸಾಧ್ಯವಿಲ್ಲವೆಂದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೃಜನ್ ಶಿವರಾಂ, ಜಿಪಂ ಸದಸ್ಯೆ ಲೋಲಾಕ್ಷಮ್ಮ, ಗ್ರಾಪಂ ಅಧ್ಯಕ್ಷೆ ಯಶೋಧಮ್ಮ, ಜಿಪಂಮಾಜಿ ಉಪಾಧ್ಯಕ್ಷ ರಾಜಶೇಖರ್, ಮಾಜಿ ಸದಸ್ಯ ಯಶೋಧರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿಹಳ್ಳಿ ವಿರೂಪಾಕ್ಷ, ಕೃಷ್ಣಶೆಟ್ಟಿ ಧರ್ಮಪ್ಪ, ಸೋಮೇಗೌಡ, ದೇವರಾಜು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಹಾಲಿ ಮತ್ತು ಮಾಜಿ ಅಧ್ಯಕ್ಷ , ಉಪಾಧ್ಯಕ್ಷರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.