2ನೇ ಹಂತದ ಚುನಾವಣೆಗೆ ಸಕಲ ಸಿದ್ಧತೆ

Team Udayavani, Dec 25, 2020, 3:40 PM IST

2ನೇ ಹಂತದ ಚುನಾವಣೆಗೆ ಸಕಲ ಸಿದ್ಧತೆ

ಹಾಸನ: ಜಿಲ್ಲೆಯ 4 ತಾಲೂಕುಗಳಲ್ಲಿ ಎರಡನೇ ಹಂತದಲ್ಲಿ ನಡೆಯಲಿರುವ 120 ಗ್ರಾಪಂ ಚುನಾವಣೆಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಸೀಕೆರೆ, ಬೇಲೂರು, ಆಲೂರು ಮತ್ತು ಹೊಳೆನರಸೀಪುರ ತಾಲೂಕಿನ 120 ಗ್ರಾಪಂನ 1648 ಸದಸ್ಯ ಸ್ಥಾನಗಳಿಗೆ ಡಿ.27ರಂದು ಚುನಾವಣೆ ನಡೆಯಲಿದ್ದು, ಒಟ್ಟು 4041 ಅಭ್ಯರ್ಥಿಗಳುಸ್ಪರ್ಧಾಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆದ ಕಾರಣ ಎರಡು ಸದಸ್ಯ ಸ್ಥಾನಗಳು ಖಾಲಿ ಉಳಿದಿವೆ. ಈಗಾಗಲೇ 178 ಸದಸ್ಯರು ಅವಿರೋಧವಾಗಿಆಯ್ಕೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಅಯಾಯ ತಾಲೂಕು ಕೇಂದ್ರಗಳಲ್ಲಿ ಡಿ.26ರಂದು ಬೆಳಗ್ಗೆಯಿಂದಲೇ ಮಸ್ಟರಿಂಗ್‌ ನಡೆಯಲಿದ್ದು, ಯಾವುದೇ ಗೊಂದಲಗಳಿಲ್ಲದಂತೆ ನಿರ್ವಹಿಸುವಂತೆ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ. 220 ಸೂಕ್ಷ್ಮ ಮತಗಟ್ಟೆ ಸೇರಿ 905 ಮತಗಟ್ಟೆಗಳಲ್ಲಿ 4,92,536 ಅರ್ಹ ಮತದಾರರು ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಮತಪೆಟ್ಟಿಗೆಗಳು ಸೇರಿ ಮತದಾನ ಪರಿಕರಗಳೊಂದಿಗೆ 3,982ಚುನಾವಣಾ ಸಿಬ್ಬಂದಿಯನ್ನು ನಿಯೋಜಿತ ಸ್ಥಳಕ್ಕೆ ಕೊಂಡೊಯ್ಯಲು 127ಕೆಎಸ್‌ಆರ್‌ಟಿಸಿ ಬಸ್‌, 37 ಮ್ಯಾಕ್ಸಿಕ್ಯಾಬ್‌, 49 ಜೀಪ್‌ ಸೇರಿ ಒಟ್ಟು 213 ವಾಹನ ಚುನಾವಣೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

4 ತಾಲೂಕುಗಳಲ್ಲಿ 76 ಮಂದಿ ಕೋವಿಡ್ ಸೋಂಕಿತ ಮತದಾರರನ್ನು ಗುರುತಿಸಿದ್ದು, ಅವರು ಮತ ಚಲಾವಣೆ ಮಾಡಲು ಇಚ್ಛಿಸಿದರೆ ಸಂಬಂಧಪಟ್ಟ ಚುನಾವಣಾಧಿಕಾರಿಗಳಲ್ಲಿ ಧೃಢೀಕರಣ ಪತ್ರದೊಂದಿಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ಸೋಂಕಿತರು ಮತದಾನ ಮಾಡಲು ಜಿಲ್ಲಾಡಳಿತವು ವ್ಯವಸ್ಥೆ ಮಾಡಲಿದೆ ಎಂದು ಡೀಸಿ ಸ್ಪಷ್ಟಪಡಿಸಿದರು. ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಎಎಸ್ಪಿ ಬಿ.ಎನ್‌.ನಂದಿನಿ, ಡಿಎಚ್‌ಒ ಡಾ.ಸತೀಶ್‌ಕುಮಾರ್‌ ಹಾಜರಿದ್ದರು.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.