![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 31, 2020, 1:19 PM IST
ಹಾಸನ: ರಾಜ್ಯ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿ ಪಕ್ಷಪಾತ ಮಾಡು ತ್ತಿರುವುದರ ವಿರುದ್ಧ ಜಿಲ್ಲೆಯ 6 ಮಂದಿ ಜೆಡಿಎಸ್ ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿ ನಿವಾಸದ ಬಳಿ ಧರಣಿ ನಡೆಸುತ್ತೇವೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮಂಜೂರಾಗಿದ್ದ ಅಭಿವೃದ್ಧಿ ಯೋಜನೆ ಗಳ ರದ್ದು, ಅನುದಾನ ಕಡಿತ ಮಾಡಿರುವ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆ ಯುತ್ತೇವೆ. 15 ದಿನಗಳಲ್ಲಿ ಸ್ಪಂದಿಸದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.
ಹೋರಾಟದ ಬಗ್ಗೆ ಚರ್ಚೆ: ಈ ನಿಟ್ಟಿನಲ್ಲಿ ಆ.3 ರಂದು ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬೆಂಗಳೂರಿನಲ್ಲಿ ಕರೆದಿರುವ ಶಾಸಕರು ಹಾಗೂ ಪಕ್ಷದ ಮುಖಂಡರ ಸಭೆಯಲ್ಲಿಯೂ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲಾಗುವುದು ಎಂದರು.
ಕಾಲೇಜು ಸ್ಥಳಾಂತರ ಕೈಬಿಡಿ: ಬೇಲೂರು ತಾಲೂಕಿನ ಅರೇಹಳ್ಳಿ, ಸಕಲೇಶಪುರ ತಾಲೂಕಿನ ಹೆತ್ತೂರು, ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೊರತೆ ನೆಪವೊಡ್ಡಿ ಬೆಂಗಳೂರಿಗೆ ಕಾಲೇಜುಗಳನ್ನು ಸ್ಥಳಾಂತರಿಸಲಾಗಿದೆ. ಈ ಕಾಲೇಜುಗಳಿಗೆ ಸುಸಜ್ಜಿತ ಕಟ್ಟಡಗಳಿವೆ. ಆದರೆ ಪ್ರಾಧ್ಯಾಪಕರಿಲ್ಲದೆ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿಲ್ಲ. ಸರ್ಕಾರ ಪ್ರಾಧ್ಯಾಪಕರನ್ನು ನೇಮಿಸಿ ಆ ಕಾಲೇಜುಗಳ ಸ್ಥಳಾಂತ ಮಾಡುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಶಿಕ್ಷಣ ನೀಡಲು ರಾಜಕೀಯ: ಹಾಸನ ತಾಲೂಕು ಸೋಮನಹಳ್ಳಿ ಕಾವಲಿನಲ್ಲಿ ತೋಟಗಾರಿಕೆ ಇಲಾಖೆಗೆ ಸೇರಿದ 400 ಎಕರೆ ಫಾರಂ ಇದೆ. ಅಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಲು ಹಿಂದಿನ ಎಚ್.ಡಿ. ಕುಮಾರ ಸ್ವಾಮಿ ನೇತೃತ್ವದ ಸರ್ಕಾರ ತೀರ್ಮಾನಿಸಿ ಕಟ್ಟಡ ನಿರ್ಮಾಣ ಮತ್ತಿತರ ಮೂಲ ಸೌಕರ್ಯಗಳಿಗೆ 65 ಕೋಟಿ ರೂ. ಮಂಜೂರು ಮಾಡಿತ್ತು. ಆದರೆ ಆ ಕಾಲೇಜಿನ ಮಂಜೂರಾತಿಯನ್ನು ಸರ್ಕಾರ ರದ್ದುಪಡಿಸಿದೆ. ಮಕ್ಕಳಿಗೆ ಶಿಕ್ಷಣ ನೀಡುವುದರಲ್ಲಿಯೂ ಯಡಿಯೂರಪ್ಪನವರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಅಸಮಾಧಾನ
ವ್ಯಕ್ತಪಡಿಸಿದರು.
ಅನುದಾನ ತಡೆದ ಸರ್ಕಾರ: ಬೇಲೂರು ತಾಲೂಕಿನ ಹಳೆಬೀಡು ದ್ವಾರ ಸಮುದ್ರ ಕೆರೆಗೆ ನೇರವಾಗಿ ನೀರು ತುಂಬಿಸುವ ರಣಘಟ್ಟ ಕಾಲುವೆ ನಿರ್ಮಾಣದ 128 ಕೋಟಿ ರೂ. ಯೋಜನೆಯನ್ನೂ ಸರ್ಕಾರ ತಡೆಹಿಡಿದಿದೆ. ಬ್ರಿಟಿಷ್ ಆಡಳಿತದ ಕಾಲದಲ್ಲೇ ಹಾಸನ ವಿಮಾನ ನಿಲ್ದಾಣ ನಿರ್ಮಾಣದ ಯೋಜನೆ ರೂಪುಗೊಂಡಿತ್ತು. ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ವಿಮಾನ ನಿಲ್ದಾಣ ನಿರ್ಮಾಣ ಯೋಜನಗೆ ಮಂಜೂರಾತಿ ನೀಡಿ ಟೆಂಡರ್ ಪ್ರಕ್ರಿಯೆ ಆರಂಭಿಸಿತ್ತು. ಈಗ ಆ ಯೋಜನೆಯನ್ನೂ ಸರ್ಕಾರ ತಡೆಹಿಡಿದಿದೆ. ಜಿಲ್ಲೆಗೆ ಹೊಸ ಯೋಜನೆಗಳ ಮಂಜೂರು ಮಾಡುವುದಿರಲಿ. ಈಗಾಗಲೇ ಮಂಜೂರಾಗಿ ರುವ ಯೋಜನೆಗಳ ಅನುಷ್ಠಾನಕ್ಕೂ ಸರ್ಕಾರ ಬಿಡುತ್ತಿಲ್ಲ. ಯಡಿಯೂರಪ್ಪ ಅವರು ಹಾಸನ ಜಿಲ್ಲೆಯ ಅಭಿವೃದ್ಧಿಯನ್ನು ತಡೆದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ಬೇಲೂರು ಶಾಸಕ ಕೆ.ಎಸ್. ಲಿಂಗೇಶ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಚ್.ಪಿ. ಸ್ವರೂಪ್ ಇದ್ದರು.
ಬೀದಿಗಿಳಿದು ಹೋರಾಟ
ರೈತ ವಿರೋಧಿಯಾಗಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿ ಎಂಸಿ ಕಾಯ್ದೆ ತಿದ್ದುಪಡಿಯನ್ನು ಸರ್ಕಾರ ತಕ್ಷಣ ಹಿಂತೆಗೆದುಕೊಳ್ಳಬೇಕು. ವಿಧಾನ ಸಭೆಯಲ್ಲಿ ಚರ್ಚಿಸದೆ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಗೆ ತಿದ್ದುಪಡಿ ತಂದಿರುವ ಸರ್ಕಾರದ ಧೋರಣೆಯ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾದೀತು ಎಂದು ರೇವಣ್ಣ ಎಚ್ಚರಿಸಿದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.