ಸೆಸ್ಕ್ ಅಧಿಕಾರಿಗಳ ಕಾರ್ಯವೈಖರಿಗೆ ತಾಪಂ ಅಧ್ಯಕ್ಷೆ ಗರಂ


Team Udayavani, Feb 22, 2019, 7:25 AM IST

ses.jpg

ಅರಸೀಕೆರೆ: ತಾಲೂಕು ಈಗಾಗಲೇ ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ. ಬೇಸಿಗೆ ಕಾಲದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಕಾಡದಂತೆ ಎಚ್ಚರಿಕೆ ವಹಿಸಬೇಕಾದ ಸೆಸ್ಕ್ ಅಧಿಕಾರಿಗಳ ಕಾರ್ಯವೈಖರಿಗೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ರೂಪಾ ಹರಿಹಾಯ್ದ ಪ್ರಸಂಗ ಶುಕ್ರವಾರ ನಡೆಯಿತು. ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಸಾಮರ್ಥ್ಯಸೌಧದಲ್ಲಿ ಗುರುವಾರ ತಾಪಂ ಅಧ್ಯಕ್ಷೆ ರೂಪಾ ಅವರ ಅಅಧ್ಯಕ್ಷೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸೆಸ್ಕ್ಯ ಸಹಾಯಕ ಅಭಿಯಂತರ ಮನೋಹರ್‌ ಇಲಾಖೆಯ ವರದಿ ಮಂಡಿಸಿದರು.

ಗಂಗಾ ಕಲ್ಯಾಣ ಯೋಜನೆಯಲ್ಲಿ ಕಳೆದ 2 ವರ್ಷಗಳಲ್ಲಿ 150 ಫ‌ಲಾನುಭವಿಗಳು ಕೊರೆಸಿದ ಕೊಳವೆಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಕುಡಿಯುವ ನೀರಿನ 100 ಸ್ಥಾವರಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. 740 ಪರಿವರ್ತಕಗಳನ್ನು ಬದಲಾಯಿಸಿದ್ದು, ಹೆಚ್ಚುವರಿಯಾಗಿ 427 ಪರಿವರ್ತಕಗಳನ್ನು ಅಳವಡಿಸಲಾಗಿದೆ. ತಾಲೂಕಿನಲ್ಲಿ ಪರಿವರ್ತಕಗಳ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದರು.

ಮುಂಜಾಗ್ರತೆ ಅಗತ್ಯ: ಈ ಸಂದರ್ಭದಲ್ಲಿ ಸೆಸ್ಕ್ ಅಧಿಕಾರಿ ಮನೋಹರ್‌ ವಿರುದ್ಧ ಹರಿಹಾಯ್ದ ಅಧ್ಯಕ್ಷೆ ರೂಪಾ ಅವರು ಕೆಲ್ಲಂಗೆರೆ ಬೋವಿ ಕಾಲೋನಿಯ ಶಾಲೆಯ ಪಕ್ಕದಲ್ಲಿ ವಿದ್ಯುತ್‌ ಕಂಬ ಮುರಿದು ಬೀಳುವಂತಿದ್ದು,ಕೂಡಲೇ ವಿದ್ಯುತ್‌ ಕಂಬ ಬದಲಾವಣೆ ಮಾಡಲು ಸೂಚಿಸಿ ಒಂದು ವರ್ಷವಾಗುತ್ತಿದೆ.ಅನಾಹುತಗಳು ಸಂಭವಿಸುವ ಮುನ್ನವೇ ಸೂಕ್ತ ಕ್ರಮಕೈಗೊಳ್ಳಬೇಕಾದ ತಾವು ಇದುವರೆಗೂ ಕಂಬವನ್ನು ಬದಲಿಸಿಲ್ಲ ನಾಗರೀಕರಿಗೆ ಏನಾದರು ಹೆಚ್ಚು ಕಮ್ಮಿಯಾದಲ್ಲಿ ಯಾರು ಹೊಣೆಯಾಗುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಕರ್ತವ್ಯ ಲೋಪಕ್ಕೆ ಖಂಡನೆ: ಚುನಾಯಿತ ಜನಪ್ರತಿನಿಧಿಗಳ ಸೂಚನೆಯನ್ನು ಪಾಲಿಸದೇ ತಾವು ಕರ್ತವ್ಯ ಲೋಪ ಎಸಗುತ್ತಿದ್ದೀರಿ, ಅಲ್ಲದೆ ತಮ್ಮ ಕಾರ್ಯವೈಖರಿಯನ್ನು ತಿದ್ದಿಕೊಳ್ಳದೇ ಸಮರ್ಥನೆ ಮಾಡಿಕೊಳ್ಳುತ್ತೀರುವುದು ಸರಿಯಲ್ಲ. ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸಬೇಕಾದ ಚುನಾಯಿತ ಜನಪ್ರತಿನಿಧಿಗಳು. ಸರ್ಕಾರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಸಾಮಾನ್ಯಜನರ ಪಾಡೇನು ಎಂದು ಹರಿಹಾಯ್ದರು.

ಅಧ್ಯಕ್ಷರ ಮಾತು ಕೇಳಿ: ತಾಪಂ ಸದಸ್ಯ ಭೋಜನಾಯ್ಕ ಮಧ್ಯ ಪ್ರವೇಶಿಸಿ ಮಾತನಾಡಿ, ಅಧಿಕಾರಿಗಳು ಅಧ್ಯಕ್ಷರು ಹೇಳುತ್ತಿರುವ ಸಮಸ್ಯೆಗಳನ್ನು ವ್ಯವಧಾನದಿಂದ ಕೇಳಿ ಅದನ್ನು ಬಗೆಹರಿಸುವ ಪ್ರಯತ್ನವನ್ನು ಮಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸಿ. ಅವರ ಮಾತಿಗೆ ಪ್ರತ್ಯುತ್ತರ ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸುವ ಮೂಲಕ ಪರಿಸ್ಥಿತಿ ಶಾಂತಗೊಳಿಸುವಲ್ಲಿ ಯಶಸ್ವಿಯಾದರು.

ಬಿಸಿಯೂಟ ಸಮಸ್ಯೆ ನಿವಾರಿಸಿ: ಶಾಲಾ ಮಕ್ಕಳಿಗೆ ನೀಡುತ್ತಿರು ಬಿಸಿಯೂಟದ ಆಹಾರ ಪದಾರ್ಥಗಳಿಗೆ ಇಲಾಖೆಯಲ್ಲಿ ಮೇಲಾಧಿಕಾರಿಗಳೇ ಕತ್ತರಿ ಹಾಕುತ್ತಿದ್ದು ಕುರಿ ಕಾಯಲು ತೋಳವನ್ನು ನೇಮಿಸಿದಂತಾಗಿದೆ. ಯಾರೋ ಮಾಡಿದ ತಪ್ಪಿಗೆ ಕೆಳಮಟ್ಟದ ಅಧಿಕಾರಿಗಳು ಶಾಲೆಯ ಶಿಕ್ಷಕರು ಜನಪ್ರತಿನಿಧಿಗಳಿಂದ ಆರೋಪಕ್ಕೆ ಗುರಿಯಾಗಿದ್ದಾರೆ ಎಂದು ತಾಪಂ ಉಪಾಧ್ಯಕ್ಷ ಲಿಂಗರಾಜು ಅವರು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ ಕುಮಾರ್‌ ಅವರನ್ನು ಪ್ರಶ್ನಿಸಿದರು.

ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಭೋಜನಾಯ್ಕ ತಾಲೂಕಿನ ಅನೇಕ ಶಾಲೆಗಳಿಗೆ ಬಿಸಿಯೂಟದ ಆಹಾರ ಪದಾರ್ಥ ಗಳನ್ನು ನೀಡುವಾಗ ಕಡಿಮೆ ಪ್ರಮಾಣದಲ್ಲಿ ಸ್ಥಳೀಯ ಅಧಿಕಾರಿಗಳು ನೀಡುತ್ತಾರೆ. ನಮ್ಮ ಗ್ರಾಮದ ಶಾಲೆಗೆ ಆಹಾರ ಪದಾರ್ಥ ಬಂದಾಗ 38ಕೇಜಿ ಅಕ್ಕಿ ,4ಕೇಜಿ ಬೆಳೆ ಕಡಿಮೆ ಇದ್ದಿದ್ದು ಕಂಡು ಬಂದಿದೆ.

ಈ ಬಗ್ಗೆ ಶಿಕ್ಷಣ ಇಲಾಖೆ ಜಿಲ್ಲೆಯ ಮೇಲಾಧಿಕಾರಿ ಅವರಿಗೆ ದೂರವಾಣಿ ಮೂಲಕ ಹೇಳಿದಾಗ ಶಿಕ್ಷಕರಿಗೆ ಮೇಲಾಧಿಕಾರಿಗಳೇ ಬೆದರಿಕೆ ಹಾಕಿ ಕೊಟ್ಟಿದ್ದನ್ನ ಬೇಯಿಸಿ ಹಾಕಿ ಇಲ್ಲದ ಉಸಾಬರಿ ನಿಮಗೇಕೆ? ತಾಪಂ ಸದಸ್ಯರಿಗೇಕೆ ಈ ವಿಚಾರ ಮುಟ್ಟಿಸಿದ್ದೀರಿ ಎಂದು ಬಿಸಿಯೂಟದ ಮೇಲಾಧಿಕಾರಿಗಳೇ ಶಿಕ್ಷಕರನ್ನು ಬೆದರಿಸಿದ್ದಾರೆ. ಇಂತಹ ಅಧಿಕಾರಿಗಳು ಇಲಾಖೆಯಲ್ಲಿ ಇರುವವರೆಗೆ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆ ಎಲ್ಲಿ ಸಫ‌ಲವಾಗಲು ಸಾಧ್ಯ ಎಂದು ಪ್ರಶ್ನಿಸಿದರು.

ಮಕ್ಕಳಿಗೆ ಸರ್ಕಾರ ನೀಡುವ ಆಹಾರ ಪದಾರ್ಥಗಳಿಗೆ ಕನ್ನ ಹಾಕುತ್ತಿದ್ದರೂ ಯಾವುದೇ ಶಿಕ್ಷಕರು ಈ ಬಗ್ಗೆ ದೂರಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಉಪಾಧ್ಯಕ್ಷರು ಹಾಗೂ ಸದಸ್ಯರು ಒತ್ತಾಯಿಸಿದರು. ಸಾಮಾನ್ಯಸಭೆಯಲ್ಲಿ ತಾಪಂಉಪಾಧ್ಯಕ್ಷ ಶ್ಯಾನೇಗೆರೆ ಲಿಂಗರಾಜು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ತಮ್ಮ ತಮ್ಮ ಇಲಾಖೆಯ ಪ್ರಗತಿ ಕುರಿತು ವರದಿಯನ್ನು ಸಭೆಯಲ್ಲಿ ಮಂಡಿಸಿದರು. 

ಕುಡಿಯುವ ನೀರಿನ ಸಮಸ್ಯೆ: ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವಾಡುತ್ತಿದೆ. ಟ್ಯಾಂಕರ್‌ ಮೂಲಕ ಕಳೆದ 3 ವರ್ಷಗಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್‌ ನಲ್ಲಿ ಪೂರೈಕೆ ಮಾಡಿದ ಬಾಬ್ತು 5.46 ಕೋಟಿ ರೂ . ಖರ್ಚು ಮಾಡಲಾಗಿದೆ. ಇನ್ನೂ 1. 77 ಕೋಟಿ ರೂ. ಬಾಕಿ ಹಣವನ್ನು ನೀಡಬೇಕಾಗಿದೆ.

ಈಗ ಟ್ಯಾಂಕರ್‌ ಗಳ ಮೂಲಕ ನೀರು ಸರಬರಾಜು ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದಾರೆ. ಇದರಿಂದ ಗ್ರಾಮೀಣ ಜನರಿಗೆ ಕುಡಿಯುವ ನೀರನ್ನು ಪೂರೈಸುವುದು ಹೇಗೆ ಎಂದು ಸದಸ್ಯ ನೇರ್ಲಿಗೆ ವಿಜಯಕುಮಾರ್‌, ಜಾವಗಲ್‌ ಪ್ರಭಾಕರ್‌ ಕೊಳಗುಂದ ಬಸವರಾಜು, ಜೆ.ಪಿ.ಪುರ ಮಹೇಶ್ವರಪ್ಪ, ಕರಗುಂದ ಪ್ರಕಾಶ್‌ ಪ್ರಶ್ನಿಸಿದರು.

 ಇದಕ್ಕೆ ಉತ್ತರಿಸಿದ ತಾಪಂ ಇಒ ಕೃಷ್ಣಮೂರ್ತಿ, ಗ್ರಾಮೀಣ ಪ್ರದೇಶದಲ್ಲಿ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಕೆ ಮಾಡಿದ್ದು, ಇದರಲ್ಲಿ ಯಾವುದೇ ರೀತಿ ಲೋಪ ಎಸಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಕ್ಷೇಪಣೆ ಮಾಡಿಲ್ಲ. ಬದಲಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಕೆಯನ್ನು ನಿಲ್ಲಿಸಿ ಕೊಳವೆ ಬಾವಿಗಳಿಂದ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗೆ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಈಗಾಗಲೇ ಬಾಕಿ ಉಳಿದಿರುವ ಹಣವನ್ನು ಪರಿಶೀಲನೆ ನಡೆಸಿ ನೀಡಲಾಗುತ್ತದೆ ಯಾವುದೇ ಕಾರಣಕ್ಕೆ ತಡೆಹಿಡಿಯುವುದಿಲ್ಲ ಎಂದರು. 

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-alur

Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.