ಕಾಡಾನೆ ಹಾವಳಿ ತಡೆಗೆ ಸಚಿವರ ಬಳಿಗೆ ನಿಯೋಗ
Team Udayavani, Apr 17, 2021, 1:39 PM IST
ಹಾಸನ: ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಹಾವಳಿತಡೆಗೆ ಸರ್ಕಾರ ಕೈಗೊಳ್ಳಬೇಕಾದ ತುರ್ತುಕ್ರಮಗಳಮನವರಿಕೆ ಮಾಡಿಕೊಡಲು ಏ.19 ರಂದು ಅರಣ್ಯಸಚಿವರನ್ನು ಭೇಟಿಯಾಗಲು ಬೆಂಗಳೂರಿಗೆ ನಿಯೋಗತೆರಳುವುದಾಗಿ ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಕಾಡಾನೆ ದಾಳಿಯಿಂದತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿರುವ ಸಕಲೇಶಪುರ ತಾಲೂಕು ಹಳೇಕೆರೆಗ್ರಾಮದ ಗ್ರಾಪಂ ಮಾಜಿ ಸದಸ್ಯ ಚಂದ್ರಶೇಖರ್ ಅವರನ್ನುಭೇಟಿಯಾಗಿದ್ದ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿ,ಅರಣ್ಯ ಸಚಿವರು ಸಕಲೇಶಪುರದಲ್ಲಿ ಸಭೆ ನಡೆಸಿದಸಂದರ್ಭದಲ್ಲಿ ಕಾಡಾನೆಗಳ ಹಾವಳಿ ತಡೆಯುವ ಶಾಶ್ವತಕ್ರಮಗಳಿಗಾಗಿ ದೆಹಲಿಗೆ ಶಾಸಕರ ನಿಯೋಗ ಕರೆದೊಯ್ಯುವುದಾಗಿ ಹೇಳಿದ್ದರು.
ಆದರೆ, ಇದುವರೆಗೂ ಆ ಭರವಸೆಈಡೇರಿಲ್ಲ ಎಂದರು. ಸಕಲೇಶಪುರ ತಾಲೂಕು ಹಳೇಕೆರೆಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ಶಿವಣ್ಣ ಎಂಬವರ ಮೇಲೆಆನೆ ದಾಳಿ ನಡೆಸಿ ಕೊಂದು ಹಾಕಿತ್ತು. ಇದೀಗ ಅದೇ ಗ್ರಾಮದಚಂದ್ರಶೇಖರ್ ಅವರ ಮೇಲೆ ಆನೆ ದಾಳಿ ನಡೆಸಿದೆ. ಅವರಆಸ್ಪತ್ರೆ ಖರ್ಚನ್ನು ಸಂಪೂರ್ಣವಾಗಿ ಸರ್ಕಾರದಿಂದಲೇಭರಿಸಲು ಕ್ರಮ ವಹಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.