ನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ
ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಫ್ರಾನ್ಸಿಸ್ ಸೂಚನೆ
Team Udayavani, Apr 26, 2019, 5:24 PM IST
ಹಾಸನ: ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಬೇಕು. ಕಪ್ಪುಬಣ್ಣದ ಪ್ಲಾಸ್ಟಿಕ್ ಉತ್ಪಾದನೆ ಮಾರಾಟದ ಮೇಲೆ ನಿಗಾ ವಹಿಸಿ ಬಟ್ಟೆ ಬ್ಯಾಗ್‌ಗಳನ್ನು ಕಡಿಮೆ ದರದಲ್ಲಿ ತಯಾರಿಸಿ ಗ್ರಾಹಕರ ಬಳಕೆಗೆ ಲಾಭವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹಾಸನ ನಗರಸಭೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು, ಕುಡಿಯುವ ನೀರಿನ ಯೋಜನೆಯ ಮಾಹತಿ ಪಡೆದ ಅವರು, ಹಾಸನ ನಗರದಲ್ಲಿ ಕಸಲೇವಾರಿ ತೃಪ್ತಿಕರವಾಗಿಲ್ಲ. ನಗರಸಭೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಅಂಗಡಿ, ಹೋಟೆಲ್ಗಳ ಸಾರ್ವಜನಿಕರಿಗೆ ಸ್ವಚ್ಛತಾ ಪ್ರಜ್ಞೆ, ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸಬೇಕು. ಎಲ್ಲಾ ಮನೆಗಳಿಂದ ಸ್ವಚ್ಛತಾ ಸೆಸ್ ಸಂಗ್ರಹಿಸಬೇಕು ಎಂದರು. ಅಮೃತ್ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಉಪವಿಭಾಗಾಧಿಕಾರಿ, ತಹ ಶೀಲ್ದಾರ್ ಹಂತದಲ್ಲಿ ಪ್ರತ್ಯೇಕ ಸಭೆ ನಡೆಸುವಂತೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.
ಸ್ವಯಂ ಸೇವಾ ಸಂಸ್ಥೆಗಳು ಕೆರೆಗಳ ಪುನಶ್ಚೇತನ ಹಾಗೂ ಪರಿಸರ ಕಾಳಜಿ ಚಟುವಟಿಕೆಯಲ್ಲಿ ತೊಡಗಿವೆ ಇದೇ ರೀತಿ ನಗರಸಭೆಯಿಂದ ಎಲ್ಲರ ಸಹಕಾರ ದಿಂದ ಕೆರೆ, ವಾರ್ಡ್‌ಗಳ ಅಭಿವೃದ್ಧಿ ಕೈ ಗೊಳ್ಳಬೇಕು ಎಂದರು. ನಗರಸಭೆ ಆಯುಕ್ತೆ ರೂಪಶೆಟ್ಟಿ ಮತ್ತಿತರರು ಸಭೆ ಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.