ಹಾಸನದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ
Team Udayavani, Jun 10, 2019, 10:57 AM IST
ಹಾಸನ ನಗರಸಭೆ ಆರೋಗ್ಯ ನಿರೀಕ್ಷಕರು ಮತ್ತು ಸಿಬ್ಬಂದಿ ಸಗಟು ವ್ಯಾಪಾರಿ ಮಳಿಗೆಗಳು ಹಾಗೂ ಟ್ರಾನ್ಸ್‌ಪೋರ್ಟ್ ಗೋದಾಮುಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಂಡರು.
ಹಾಸನ: ಪ್ಲಾಸ್ಟಿಕ್ ನಿಷೇಧ ಆಂದೋಲನ ಆರಂಭಿಸಿರುವ ಹಾಸನ ನಗರಸಭೆ ನೌಕರರು ಭಾನುವಾರವೂ ನಗರದ ವಿವಿಧ ಸಗಟು ವ್ಯಾಪಾರಿ ಮಳಿಗೆಗಳು ಹಾಗು ಟ್ರಾನ್ಸ್‌ಪೋರ್ಟ್ ಗೋದಾಮುಗಳ ಮೇಲೆ ದಾಳಿ ನಡೆಸಿ ಸಾವಿರಾರು ರೂ. ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿದಕೊಂಡರು.
ನಗರದ ಶ್ರೀ ಚೌಡೇಶ್ವರಿ ದೇವಾಲಯ ರಸ್ತೆ ಬಳಿ ಇರುವ ಎಸ್.ಆರ್.ಕೆ. ಟ್ರೇಡರ್ ಗೋದಾಮು ಸೇರಿದಂತೆ ವಿವಿ ಧೆಡೆ ಹಾಸನ ನಗರಸಭೆ ಆರೋಗ್ಯಾಧಿ ಕಾರಿಗಳು ದಾಳಿ ಮಾಡಿ ಪ್ಲಾಸ್ಟಿಕ್ ಕವರ್‌ಗಳು, ಪ್ಲಾಸ್ಟಿಕ್ ಲೋಟಗಳು ಸೇರಿದಂತೆ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿ ಕೊಂಡರು. ನಿಷೇಧಿತ ಪ್ಲಾಸ್ಟಿಕ್ ಬಳಕೆ, ಮಾರಾಟ ಮಾಡಬಾರದೆಂದು ಹಲ ವಾರು ಬಾರಿ ಸೂಚನೆ ನೀಡಿದರೂ ಸಗಟು ವ್ಯಾಪಾರ ಮಾಡುತ್ತಿದ್ದ ಮಾಹಿತಿ ಅಧರಿಸಿ ನಗರಸಭೆ ಆರೋಗ್ಯ ನಿರೀಕ್ಷಕ ಆದೀಶ್ ಕುಮಾರ್ ಮತ್ತು ಮಂಜುನಾಥ್ ಅವರು ಸಿಬ್ಬಂದಿ ಯೊಂದಿಗೆ ದಾಳಿ ನಡೆಸಿದರು.
ಗೋದಾಮುಗಳಲ್ಲಿ ಚೀಲಗಟ್ಟಲೆ ದಾಸ್ತಾನಿದ್ದ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಕ್ಕೆ ಪಡೆದುಕೊಂಡ ನಗರಸಭೆ ನೌಕರರು ವ್ಯಾಪಾರಿಗಳಿಗೆ ದಂಡ ವಿಧಿಸಿದ್ದು, ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು. ಹಾಸನ ನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದ್ದರೂ ಪ್ಲಾಸ್ಟಿಕ್ ಬಳಕೆ ಮಾತ್ರ ನಿಂತಿಲ್ಲ. ಹಾಗಾಗಿ ನಗರಸಭೆ ಸಿಬ್ಬಂದಿ ಸಗಟು ಮಾರಾಟ ಮಳಿಗೆಗಳು ಹಾಗೂ ಲಾರಿ ಟ್ರಾನ್ಸ್‌ಫೋರ್ಟ್‌ಗಳ ಗೋದಾಮುಗಳ ಮೇಲೆ ದಾಳಿ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ
H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.