ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
Team Udayavani, Feb 22, 2021, 3:10 PM IST
ಅರಸೀಕೆರೆ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಪೂರ್ವ ಜನತೆಗೆ ನೀಡಿದ್ದ ಹಲವು ಭರವಸೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಲ್ಲದೆ, ಕೃಷಿ ಕಾಯ್ದೆ ತಿದ್ದುಪಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿ ಪ್ರವಾಸಿ ಮಂದಿರದ ಮುಂಭಾಗದಿಂದ ಯುವ ಕಾಂಗ್ರೆಸ್ ಅಧ್ಯಕ್ಷನಾಗಸಮುದ್ರದ ಸ್ವಾಮಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕೇಂದ್ರಸರ್ಕಾರದ ವಿರುದ್ಧ ಘೋಷಣೆ ಕೂಗಿ ಪಿ.ಪಿ.ವೃತ್ತಕ್ಕೆಬಂದು ರಸ್ತೆ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಜನಸಾಮಾನ್ಯರ ಜೇಬಿಗೆ ಕತ್ತರಿ: ಈ ಸಂದರ್ಭದಲ್ಲಿ ಜಿಪಂ ಸದಸ್ಯ ಪಟೇಲ್ ಶಿವಪ್ಪ ಮಾತನಾಡಿ, ಏಳು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ಮೋದಿ, ಚುನಾವಣೆ ಪೂರ್ವ ದೇಶದ ಜನತೆಗೆ ನೀಡಿದ್ದ ಹಲವು ಭರವಸೆಗಳನ್ನು ಇದುವರೆಗೂ ಈಡೇರಿಸಿಲ್ಲ, ಬದಲಿಗೆ ನೋಟ್ ಬ್ಯಾನ್ ಮಾಡುವ ಮೂಲಕ ದೇಶದ ಆರ್ಥಿಕತೆ ಜಿಡಿಪಿಯನ್ನು ದ್ವಿಗುಣಗೊಳಿಸುವ ಭರವಸೆಯುಹುಸಿಯಾಗಿದೆ. ಪರೋಕ್ಷವಾಗಿ ಜಿಡಿಪಿ ಬದಲಿಗೆ ಗ್ಯಾಸ್, ಡಿಸೇಲ್, ಪೆಟ್ರೋಲ್ ಬೆಲೆಗಳು ಮಾತ್ರದ್ವಿಗುಣಗೊಳಿಸುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ದೂರಿದರು.
ಪ್ರತಿಭಟನೆ ಹತ್ತಿಕ್ಕುವ ಹುನ್ನಾರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್ ಮಾತನಾಡಿ, ಕೇಂದ್ರ ಸರ್ಕಾರ ದೇಶದ ಬೆನ್ನೆಲುಬು ರೈತರ ಸಮಸ್ಯೆಗಳಿಗೆ ಸ್ಪಂದಿಸದೇ ಇತ್ತೀಚೆಗೆ ಕೃಷಿ ಕಾಯ್ದೆಗೆತಿದ್ದುಪಡಿ ತಂದಿರುವುದನ್ನು ಕಳೆದ 2 ತಿಂಗಳಿಂದರೈತರು ವಿರೋಧಿಸಿ ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದರು. ಸಮಸ್ಯೆ ಪರಿಹಾರಕ್ಕೆ ಸ್ಪಂದಿಸದೆ ಪ್ರತಿಭಟನೆಯನ್ನು ಹತ್ತಿಕ್ಕುವ ಹುನ್ನಾರ ಮೋದಿ ಸರ್ಕಾರ ನಡೆಸುತ್ತಿದೆ ಎಂದು ಹೇಳಿದರು.
ಜನ ವಿರೋಧಿ ಕೃತ್ಯಕ್ಕೆ ಖಂಡನೆ: ದಿನಬಳಕೆ ಆಹಾರ ಪದಾರ್ಥಗಳು, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಗಗನಕ್ಕೆ ಎರುತ್ತಿದ್ದರೂ ಸರ್ಕಾರ ನಿಯಂತ್ರಣ ಮಾಡದೆ ಕಾಳಸಂತೆಕೋರರಿಗೆರತ್ನಗಂಬಳಿ ಹಾಸಿ ಸ್ವಾಗತಿಸುವ ಜನವಿರೋಧಿಕೃತ್ಯವನ್ನು ಉಗ್ರವಾಗಿ ಖಂಡಸಿ ಕಾಂಗ್ರೆಸ್ ಪಕ್ಷ ಜನತೆಗೆ ಪರವಾಗಿ ಬೀದಿಗಿಳಿದು ಹೋರಾಟ ಮಾಡುತ್ತಿದೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಎಸ್. ಚಂದ್ರಶೇಖರ್ ಮುಖಂಡರಾದ ಜಿ.ಬಿ.ಶಶಿಧರ್,ಯುವ ಕಾಂಗ್ರೆಸ್ ಅಧ್ಯಕ್ಷ ಸ್ವಾಮಿ ಮತ್ತಿತರರು ಮಾತನಾಡಿ, ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಶ್ರೀನಿವಾಸ್, ನಗರಸಭೆ ಸದಸ್ಯ ವೆಂಕಟಮುನಿ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಜಯಪದ್ಮಾ, ಗಂಡಸಿ ರಘು, ಪಿ.ಯು.ದಿನೇಶ್,ಬಿ.ಜಿ.ನಿರಂಜನ್, ಗೌಸ್‌ಖಾನ್, ರೋಷನ್, ದಲಿತಸಂಘಟನೆ ಮುಖಂಡರಾದ ವೆಂಕಟೇಶ್,ರಂಗನಾಥ್, ಮಂಜುನಾಥ್, ಮದನ್, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.