ತಾ.ಕಚೇರಿ ಕಾರ್ಯ ವಿಳಂಬ ಖಂಡಿಸಿ ಪ್ರತಿಭಟನೆ

Team Udayavani, Jul 19, 2022, 4:30 PM IST

ತಾ.ಕಚೇರಿ ಕಾರ್ಯ ವಿಳಂಬ ಖಂಡಿಸಿ ಪ್ರತಿಭಟನೆ

ಆಲೂರು: ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಕೆಲಸ ಆಗುತ್ತಿಲ್ಲವೆಂದು ಆರೋಪಿಸಿ ಬಿಜೆಪಿ ಮುಖಂಡ ಸಿಮೆಂಟ್‌ ಮಂಜುನಾಥ್‌ ಅವರ ನೇತೃತ್ವದಲ್ಲಿ ತಾಲೂಕು ರೈತ ಸಂಘದ ಮುಖಂಡರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಸೌಮ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ ಅಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಕಚೇರಿಯಲ್ಲಿ ಹಣ ಇಲ್ಲದೇ ಸಾರ್ವಜನಿಕರ ಯಾವುದೇ ಕೆಲಸಗಳಾಗುತ್ತಿಲ್ಲ ತಮ್ಮ ಕೆಲಸ ಕಾರ್ಯ ಬಿಟ್ಟು ಕಚೇರಿ ಅಲೆಯುವಂತಾಗಿದ್ದು,ತಾಲೂಕಿನ ಕೆಲವು ಕಚೇರಿಗಳಲ್ಲಿ ಅಸಮರ್ಥಅಧಿಕಾರಿಗಳಿದ್ದು ಜೆಡಿಎಸ್‌ ಅಧ್ಯಕ್ಷ ಮಂಜೇಗೌಡರ ಅಣತಿಯಂತೆ ಎಲ್ಲ ಕೆಲಸ ಕಾರ್ಯ ನಡೆಯುತ್ತಿವೆ.

ಶಾಸಕ ಕುಮಾರಸ್ವಾಮಿ ಅಸಮರ್ಥರಾಗಿದ್ದಾರೆ. ತಾಲೂಕಿನ ಅಭಿವೃದ್ಧಿಗೆ ಬಿಡುಗಡೆಯಾದ ಹಣಕ್ಕಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಮಾತುಕೇಳುತ್ತಿಲ್ಲವೆಂದು ರೈತ ಮುಖಂಡರು ಅಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ಮಿತಿಮೀರಿದೆ: ಭೂ ಮಾಪನ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಸರ್ವೆಯರ್‌ ಆಗಿ ಕಾರ್ಯ ನಿರ್ವಹಿಸುವ ಶಕೀಲ್‌ ಅಹಮದ್‌ ಎನ್ನುವ ವ್ಯಕ್ತಿ ಸುಮಾರು ಇಪ್ಪತ್ತು ವರ್ಷಗಳಿಂದ ಭೂ ಮಾಪನ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಹಣಕ್ಕಾಗಿ ಒಂದೆರಡು ವರ್ಷಗಳಿಂದ ರೈತರನ್ನ ಕಚೇರಿಗೆ ಅಲೆಸುತ್ತಿರುವ ಇವರನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದು ತಹಶೀಲ್ದಾರ್‌ ಅವರಿಗೆ ಒತ್ತಾಯಿಸಿದರು.

ವರ್ಗಾವಣೆ ಮಾಡಿ: ಬಿಜೆಪಿ ಮುಖಂಡ ಸಿಮೆಂಟ್‌ ಮಂಜುನಾಥ್‌ ಮಾತನಾಡಿ, ತಾಲೂಕು ಕಚೇರಿ ಸೇರಿದಂತೆ ಇತರೆ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಕೆಲ ಅಧಿಕಾರಿಗಳು 2 ದಶಕಗಳಿಂದ ಠಿಕಾಣಿ ಹೂಡಿದ್ದು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಶಾಸಕರು ಇವೆಲ್ಲವನ್ನೂ ನೋಡಿಯೂ ಕಣ್ಮುಚ್ಚಿ ಕುಳಿತ್ತಿದ್ದಾರೆ. ಸರ್ವೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಶಕೀಲ್‌ ಅವರನ್ನು ತಕ್ಷಣ ವರ್ಗಾವಣೆಮಾಡಬೇಕು. ಯಾವೆಲ್ಲ ಅಧಿಕಾರಿಗಳು ಹೆಚ್ಚು ವರ್ಷ ಒಂದೆ ಕಡೆ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನುಗುರುತಿಸಿ ವರ್ಗಾವಣೆ ಮಾಡಬೇಕು. ಈ ಬಗ್ಗೆ ಜಿÇÉಾಉಸ್ತುವಾರಿ ಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ದುಡ್ಡಿಗಾಗಿ ರೈತರನ್ನು ಕಾಡಬೇಡಿ: ಆಲೂರಿನ ರಾಧಮ್ಮ ಜನಸ್ಪಂಧನ ಸಂಸ್ಥೆ ಮುಖ್ಯಸ್ಥ ಹೇಮಂತ್‌ ಕುಮಾರ್‌ ಮಾತನಾಡಿ, ಕೆಲವು ಕಚೇರಿಗಳಲ್ಲಿಸಣ್ಣಪುಟ್ಟ ಕೆಲಸಕ್ಕೂ ರೈತರನ್ನು ಕಚೇರಿಗಳಿಗೆ ಈಗ ಬನ್ನಿ,ನಾಳೆ ಬನ್ನಿ, ಮೇಲಾಧಿಕಾರಿಗಳಿಲ್ಲ, ಮುಂದಿನ ವಾರಬನ್ನಿ ಎಂದು ಅಲೆಸುತ್ತಿದ್ದಾರೆ.

ರೈತರು ಕೆಲಸ ಕಾರ್ಯಬಿಟ್ಟು ಚಳಿ-ಗಾಳಿ-ಮಳೆ ಎನ್ನದೇ ಕಚೇರಿಗೆ ಬಂದು ಬರಿಗೈಯಲ್ಲಿ ವಾಪಸ್‌ ಆಗುತ್ತಿದ್ದಾರೆ. ಈ ಎಲ್ಲಅಂಶಗಳು ನನ್ನ ಗಮನಕ್ಕೆ ಬಂದಿದ್ದು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಮರೆತಿದ್ದಾರೆ. ಕೆ.ಹೊಸಕೋಟೆ ಹಾಗೂ ಕುಂದೂರು ಹೋಬಳಿಗಳಿಂದ ಸುಮಾರು ನಲವತ್ತು ಐವತ್ತು ಕಿ. ಮೀ.ನಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ತಮ್ಮ ಕೆಲಸ ಬಿಟ್ಟು ಕಚೇರಿಗೆ ಅಲೆಯುತ್ತಿದ್ದಾರೆ. ಅಧಿಕಾರಿಗಳ ಭಂಡಾಟ, ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ರೈತರು ನಮ್ಮ ಕಚೇರಿಗೆ ಬಂದು ದೂರು ನೀಡಿದ್ದಾರೆ. ಅಧಿಕಾರಿಗಳು ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಂಡು ಕೆಲಸ ಮಾಡಬೇಕು. ಇದೇ ರೀತಿ ರೈತರಿಗೆ ಕಿರುಕುಳ ನೀಡಿದರೆ ಉಗ್ರವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

 ರೈತರು ಬದುಕೋದೇಗೆ?: ರೈತ ಸಂಘದ ಮುಖಂಡ ಮೋಹನ್‌ ಮಾತನಾಡಿ ತಾಲೂಕಿನಲ್ಲಿ ರೈತರು ಕಾಡಾನೆ ಹಾವಳಿಯಿಂದ ಕಂಗಾಲಾಗಿದ್ದಾರೆ. ಅದರಲ್ಲಿ ಅಧಿಕಾರಿಗಳ ಕಾಟ ಬೇರೆ. ಇದರಿಂದ ರೈತರು ಹೇಗೆ ಬದುಕಬೇಕು? ತಾಲೂಕಿನಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಿದ್ದು, ಕೂಲಿ ಕೆಲಸ ಬಿಟ್ಟು ದುಡಿದ ಅರ್ಧಹಣವನ್ನು ಅಧಿಕಾರಿಗಳಿಗೆ ನೀಡಬೇಕು. ಅದರೂಕೆಲಸ ಮಾಡಿಕೊಡುತ್ತಿಲ್ಲ. ಇದೇ ರೀತಿ ಮುಂದುವರಿದರೇ ಜನ ಧಂಗೆ ಏಳುತ್ತಾರೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳ ವರ್ಗಾವಣೆ ಮಾಡಿ: ತಾಲೂಕು ರೈತ ಸಂಘದ ಉಪಾಧ್ಯಕ್ಷ ದಾಸೇಗೌಡ ಮಾತನಾಡಿ,ತಾಲೂಕು ಕಛೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ.ಅದರಲ್ಲೂ ಸರ್ವೆ ಇಲಾಖೆಯಲ್ಲಿ ಎರಡ್ಮೂರು ವರ್ಷಗಳಿಂದ ಅರ್ಜಿ ಕೊಟ್ಟು ಕಚೇರಿಗೆಅಲೆಯುತ್ತಿದ್ದಾರೆ. ಅದರೂ ಕೆಲಸ ಮಾಡುತ್ತಿಲ್ಲ.ಸರ್ವೆ ಇಲಾಖೆ ಸೇರಿದಂತೆ ಹಲವು ವರ್ಷಗಳಿಂದಝಂಡವುರಿರುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಹಾಗೂ ಸ್ಥಳೀಯ ಶಾಸಕರ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದರು.

ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ತಿಮ್ಮೇಗೌಡ,ರೈತ ಮುಖಂಡ ಹೈದೂರು ಜಯಣ್ಣ,ಮೋಹನ್‌, ರಾಧಮ್ಮ ಜನಸ್ಪಂಧನ ಸಂಸ್ಥೆ ಮುಖ್ಯಸ್ಥಹೇಮಂತ್‌ ಕುಮಾರ್‌, ಚಿಗಳೂರು ದಾಸೇಗೌಡ, ಹನುಮಂತೇಗೌಡ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.