ಪರಿಹಾರಕ್ಕೆ ಆಗ್ರಹಿಸಿ ಎತ್ತಿನ ಹೊಳೆ ಯೋಜನೆ ಸಂತ್ರಸ್ತರ ಪ್ರತಿಭಟನೆ

Team Udayavani, May 31, 2019, 3:00 AM IST

parihara

ಸಕಲೇಶಪುರ: ಎತ್ತಿನಹೊಳೆ ಯೋಜನೆಗಾಗಿ ವಶಪಡಿಸಿಕೊಂಡಿರುವ ಭೂಮಿಗೆ ಕೂಡಲೇ ಪರಿಹಾರ ನೀಡುವಂತೆ ಆಗ್ರಹಿಸಿ ಬೆಳಗೋಡು ಹೋಬಳಿಯ ಸಂತ್ರಸ್ತರು ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ತಡೆದು ಪ್ರತಿಭಟನೆ ನಡೆಸಿದರು.

ತಾಲೂಕಿನ ಬೆಳಗೋಡು ಹೋಬಳಿ ಹೆಬ್ಬನಹಳ್ಳಿ ಗ್ರಾಮದಲ್ಲಿ ಸೇರಿದ ಬೆಳಗೋಡು, ಹೆಬ್ಬನಹಳ್ಳಿ, ಶಿಡಿಗಳಲೆ, ಮೂಗಲಿ, ಲಕ್ಕುಂದ, ಕಟ್ಟೆಪುರ, ದೀಣೆಕೆರೆ, ಕೂಡನಹಳ್ಳಿ , ಮಾಸವಳ್ಳಿ ಮತ್ತಿತರ ಗ್ರಾಮಗಳ ಗ್ರಾಮಸ್ಥರು ದಲಿತ ಸಂಘರ್ಷ ಸಮಿತಿ (ಭೀಮವಾದ) ನೇತೃತ್ವದಲ್ಲಿ ಎತ್ತಿನಹೊಳೆ ಕಾಮಗಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.

ದಲಿತರಿಗೆ ಅನ್ಯಾಯ: ಬೆಳಗೋಡು ಹೋಬಳಿಯ ರೈತರನ್ನು ಮೂಲಭೂತ ಸೌಲಭ್ಯಗಳಿಂದ ವಂಚಿತರನ್ನಾಗಿಸಲಾಗಿದೆ. ಮೂಲ ಸೌಕರ್ಯಗಳನ್ನು ಕಲ್ಪಿಸದೇ ಇಷ್ಟ ಬಂದಂತೆ ಕಾಮಗಾರಿ ನಡೆಸಲಾಗುತ್ತಿದೆ. ದಲಿತರು ಕೆಲವೇ ಗುಂಟೆ ಜಮೀನನ್ನು ಹೊಂದಿದ್ದಾರೆ. ಅವರಿಗೆ ಕಾನೂನು ಬದ್ಧವಾಗಿ ಸಿಗಬೇಕಾದ ಪರಿಹಾರವನ್ನು ಕಲ್ಪಿಸಲಾಗಿಲ್ಲ. ಪರಿಹಾರಕ್ಕಾಗಿ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ದಲಿತರು ಹಾಗೂ ಅಮಾಯಕ ರೈತರ ಮೇಲೆ ದಬ್ಟಾಳಿಕೆ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.

ಸ್ಫೋಟಕಗಳಿಂದ ಮನೆ ಬಿರುಕು: ಗ್ರಾಮದಲ್ಲಿ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದ ಹಲವು ಮನೆಗಳಿಗೆ ಬಿರುಕು ಉಂಟಾಗಿದೆ. ಹೆಬ್ಬನಹಳ್ಳಿ ಗ್ರಾಮದ ಸರ್ವೆ ನಂ 86ರಲ್ಲಿ ಒಟ್ಟು 12 ಪರಿಶಿಷ್ಟ ಜಾತಿಗೆ ಸೇರಿದ ಫ‌ಲಾನುಭವಿಗಳಿಗೆ 1984-85 ರಲ್ಲಿ ಅಂದಿನ ಉಪವಿಭಾಗಾಧಿಕಾರಿಗಳು ಜಮೀನು ಮಂಜೂರು ಮಾಡಿದ್ದಾರೆ. ಆದರೆ ವಿನಾಕಾರಣ ಈ ಕುಟುಂಬಗಳಿಗೂ ಸಹ ಪರಿಹಾರ ನೀಡದೇ ಕೇವಲ ಗುಡ್‌ವಿಲ್‌ ಹಣ ನೀಡಿ ಸತಾಯಿಸಲಾಗುತ್ತಿದೆ.

ತಾಲೂಕು ಕಚೇರಿಯಲ್ಲಿ ಮೂಲ ದಾಖಲಾತಿಗಳನ್ನು ಪಡೆಯಲು ವಿಳಂಬವಾಗುತ್ತಿದ್ದು ಕೂಡಲೇ ಪ್ರತಿಯೊಬ್ಬ ಸಂತ್ರಸ್ತರಿಗೂ ಪರಿಹಾರ ನೀಡಬೇಕು ಅಲ್ಲಿಯವರೆಗೂ ಕಾಮಗಾರಿ ಮಾಡಲು ಬಿಡುವುದಿಲ್ಲ ಎಂದು ಪ್ರತಿಭಟನಕಾರರು ಧರಣಿ ಕುಳಿತರು. ಈ ಸಂದರ್ಭದಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಆಲಿಸಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.

ದಲಿತ ಸಂಘರ್ಷ ಸಮಿತಿ (ಭೀಮವಾದ) ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ನಾಗರಾಜ್‌ ಹೆತ್ತೂರು, ಬೆಳಗೋಡು ಬಸವರಾಜು, ರೇಣುಕಾ ಹೇರೂರು, ರವೀಶ್‌ ಬೆಳಗೋಡು, ತಿರುಮಲ ಗೋವಿಂದು, ಕುಮಾರ್‌ ಕೂಡನಹಳ್ಳಿ, ಮಂಜಯ್ಯ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.