ಪರೀಕ್ಷೆಗೆ ಹೆಚ್ಚುವರಿ ಬಸ್‌ ಸೇವೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Mar 1, 2023, 3:08 PM IST

tdy-20

ಚನ್ನರಾಯಪಟ್ಟಣ: ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ನಿರ್ವಾಹಕರು ಪಾಸ್‌ ಹೊಂದಿರುವ ವಿದ್ಯಾರ್ಥಿಗಳನ್ನು ಬಸ್‌ ಹತ್ತಲು ಬಿಡದೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆ ಮುಖಂಡರು ಪ್ರತಿ ಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಬಿದ್ರೆ ಕಾವಲ್‌ ಮಹೇಶ್‌ ಮಾತನಾಡಿ, ಪಟ್ಟಣದ ಬಸ್‌ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಬಸ್‌ ಹತ್ತಲು ಹೋದರೆ ಅಸಡ್ಡೆಯಿಂದ ಕಾಣುತ್ತಾ ರೆ. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಜತೆಗೆ ಚಾಲಕರು ಹಾಗೂ ನಿರ್ವಾಹಕರು ತಮ್ಮ ವರ್ತನೆ ಬದಲಿಸಿಕೊಳ್ಳಬೇಕು. ನಿಲ್ದಾಣದಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಖಾಸಗಿ ವಾಹನಗಳ ಹಾವಳಿ ಯಿಂದ ಹೆಣ್ಣು ಮಕ್ಕಳು, ಹೆಂಗಸರಿಗೆ ರಕ್ಷಣೆ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್‌ ಹತ್ತಲು ಹೋದರೆ ನಿರ್ವಾಹಕರು ಮಕ್ಕಳ ಮೇಲೆ ದುರ್ವತನೆ ತೋರುತ್ತಿದ್ದಾರೆ ಎಂದು ಆರೋಪಿಸಿದರು.

ಶಿಸ್ತು ಕ್ರಮಕ್ಕೆ ಆಗ್ರಹ: ರೈತ ಸಂಘದ ತಾಲೂಕು ಅಧ್ಯಕ್ಷ ರವಿಗೌಡಯ್ಯ ಧರಣಿ ಉದ್ದೇಶಿಸಿ ಮಾತನಾಡಿ, ಬೆಂಗಳೂರು ಮತ್ತು ಹಾಸನ ಕಡೆಗೆ ಹೋಗಲು ಚನ್ನರಾಯಪಟ್ಟಣ ಬಸ್‌ ಡಿಪೋಗೆ ಬ ರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಬಸ್ಸುಗಳಿಗೆ ವಿದ್ಯಾರ್ಥಿಗಳು ಹತ್ತಲು ಹೋ ದರೆ ಬೇಕಾ ಬಿಟ್ಟಿ ಮಾತನಾಡಿ ಪ್ರಯಣಕ್ಕೆ ತೊಂದರೆ ನೀಡುತ್ತಿದ್ದಾರೆ. ಈ ಬಗ್ಗೆ ವ್ಯವಸ್ಥಾಪ ಕರು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ಸ್ಪಂದಿಸದ ಡಿಪೋ ವ್ಯವಸ್ಥಾಪಕರು: ಬೆಂಗಳೂರು ಮತ್ತು ಹಾಸನಕ್ಕೆ ಹೋಗುವ ಬಸ್‌ಗಳು ಫ್ಲೈಓವರ್‌ ಮೇಲೆ ಹೋಗುತ್ತಿರು ವುದರಿಂದ ಶೆಟ್ಟಿಹಳ್ಳಿ, ಮಟ್ಟನವಿಲೆ, ಹಿರೀಸಾವೆ ಕಡೆಗೆ ಹೋಗುವ ಮಕ್ಕಳಿಗೆ ಮತ್ತು ಹಾಸನದ ಕಡೆಗೆ ಹೋಗುವ ಉದಯಪುರದಲ್ಲಿ ಬಸ್ಸು ಹತ್ತುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಯಾಗುತ್ತಿದೆ. ಡಿಪೋ ವ್ಯವಸ್ಥಾಪಕರಿಗೆ ಮನವಿ ಮಾಡಿದರು ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಪರೀಕ್ಷೆ ಹೆಚ್ಚುವರಿ ಬಸ್‌ ಸೇವೆಗೆ ಆಗ್ರಹ: ಭೂಮಿ ಕ್ಷೇಮಾಭಿವೃದ್ಧಿ ಸಂಘದ ಮುಖ್ಯಸ್ಥ ರಾಜ್‌ಕುಮಾರ್‌ ಮಾತನಾಡಿ, ರಾಜಕೀಯ ಕಾರ್ಯಕ್ರಮಗಳಿಗೆ ಹೆಚ್ಚು ಬಸ್‌ಗಳನ್ನು ಪರೀಕ್ಷೆ ವೇಳೆಯಲ್ಲಿ ನೀಡಬಾರದು. ರಾಜಕೀಯ ಸಮಾವೇಶಕ್ಕೆ ಬಸ್‌ ನೀಡಿದರೆ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲು ಹಾಗೂ ಪರೀಕ್ಷೆಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಕೆಎಸ್‌ಆರ್‌ ಟಿಸಿ ಆಯುಕ್ತರು ಇತ್ತ ಗಮನ ಹರಿಸಬೆಕು ಎಂದು ಆಗ್ರಹಿಸಿದರು.

ಕ್ರಮ ಕೈಗೊಳ್ಳುವ ಭರವಸೆ: ಪಟ್ಟಣ ಡಿಪೋ ವ್ಯವಸ್ಥಾಪಕಿ ಶಾಜೀಯಾ ಭಾನು ಮನವಿ ಪತ್ರ ಸ್ವೀಕರಿಸಿ ಮಾತ ನಾಡಿ, ಮೇಲಾಧಿಕಾರಿಗಳ ಸಲಹೆ ಪಡೆದು ಶುಕ್ರವಾರದೊಳಗೆ ಸಮಸ್ಯೆ ಬಗೆಹರಿಸಲು ಮುಂದಾಗುತ್ತೇನೆ. ವಿದ್ಯಾರ್ಥಿ ಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ. ಫ್ಲೈ ಓವರ್‌ ಮೇಲೆ ಸಂಚಾರ ಮಾಡುವ ಬಸ್ಸಿನ ಚಾಲಕ ಮತ್ತು ನಿರ್ವಾಹಕರಿಗೆ ನೋಟಿಸ್‌ ನೀಡಲಾಗುವುದು ಭರವಸೆ ನೀಡಿದ ಮೇಲೆ ಧರಣಿ ಹಿಂಪಡೆದರು.

ಕುರುನಾಡು ಕಟ್ಟಡ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಶ್ರೀನಿವಾಸ್‌, ಉಪಾಧ್ಯಕ್ಷ ಗಿರೀಶ್‌, ರೈತ ಸಂಘದ ಜಿಲ್ಲಾಧ್ಯಕ್ಷ ಮೀಸೆ ಮಂಜಣ್ಣ, ಭೂಮಿ ಕ್ಷೇಮಾಭೀವೃದ್ಧಿ ಸಂಘದ ಅಧ್ಯಕ್ಷ ನಾಗರಾಜು, ರಮೇಶ್‌, ಸೋಮ ಶೇಖರ್‌, ಪ್ರಕಾಶ್‌ಕೋಟೆ, ಶಂಕರೇ ಗೌಡ, ಕುಮಾರ್‌, ತಾಂಡವೇಶ್‌, ಸ್ವಾಮಿ, ನಂಜುಂ ಡಪ್ಪ, ತಮ್ಮಯ್ಯ, ರಂಗಸ್ವಾಮಿ, ಚನ್ನೇಗೌಡ ವಿವಿಧ ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.