ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ

Team Udayavani, Jan 31, 2020, 2:36 PM IST

hasan-tdy-1

ಸಕಲೇಶಪುರ: ತಾಲೂಕಿನ ಬಾಗೆ ಬೇಲೂರು ರಾಜ್ಯ ಹೆದ್ದಾರಿ ಅಗಲೀಕರಣದ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಜೊತೆಗೆ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ತಾಲೂಕಿನ ಬೆಳಗೋಡು ಸುತ್ತಮುತ್ತಲ ಗ್ರಾಮಸ್ಥರು ಹೋಬಳಿ ಕೇಂದ್ರ ಬೆಳಗೋಡಿನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ತಾಲೂಕಿನ ಬೆಳಗೋಡಿನಿಂದ ಫಾತಿಮಪುರದವರೆಗೆ ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ 33 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿದೆ. ಕಾಮಗಾರಿಯನ್ನು ಕೊಥಾರಿ ಎನ್ನುವರಿಗೆ ನೀಡಲಾಗಿದ್ದು, ಕಳೆದ ಮೂರು ತಿಂಗಳಿಂದ ಕಾಮಗಾರಿ ನಡೆಯುತ್ತಿದೆ ಎಂದು ಆಪಾದಿಸಿದರು.

ಧೂಳಿನಿಂದ ಕಿರಿಕಿರಿ: ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸಕಲೇಶಪುರ-ಆಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್‌.ಕೆ. ಕುಮಾರಸ್ವಾಮಿ ಅಂದು 15 ಮೀ. ವರೆಗೆ ರಸ್ತೆ ಅಗಲೀಕರಣ ಮಾಡಲಾಗುವುದೆಂದು ಭರವಸೆ ನೀಡಿದ್ದರು. ಆದರೆ ಇಲ್ಲಿ ಕೇವಲ 9, 10 ಮೀ. ಮಾತ್ರ ಅಗಲೀಕರಣ ನಡೆಯುತ್ತಿದ್ದು, ಬೇಕಾಬಿಟ್ಟಿ ಕೆಲಸ ಮಾಡುತ್ತಿದ್ದಾರೆ. ಇಡೀ ರಸ್ತೆ ಧೂಳು ಮಯವಾಗಿದ್ದು, ನೀರು ಕೂಡ ಹಾಕದೆ ಜನರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ. ಒಂದೇ ರಸ್ತೆಗೆ ಮೂರು ಬಾರಿ ಗುದ್ದಲಿ ಪೂಜೆ ನೆರವೇರಿಸಲಾಗಿದ್ದು ಬಾಗೆ, ಬೆಳಗೋಡು ಹಾಗೂ ಫಾತಿಮಾಪುರದಲ್ಲಿ ಗುದ್ದಲಿ ಪೂಜೆ ಮಾಡಿದ ಉದ್ದೇಶವೇನು ಎಂಬುದು ಎಲ್ಲರಿಗೂ ಪ್ರಶ್ನೆಯಾಗಿ ಕಾಡುತ್ತಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.

ವಿಳಂಬಕ್ಕೆ ಎಂಜಿನಿಯರ್‌, ಶಾಸಕರೇ ಹೊಣೆ: ಕೇವಲ 9 ಮೀ.ರಸ್ತೆ ವಿಸ್ತರಣೆ ಮಾಡಿ, ಮರವನ್ನು ಕಡಿಯದೇ, ವಿದ್ಯುತ್‌ ಕಂಬಗಳನ್ನು ತೆರವುಗೊಳಿಸದೇ ಕೆಲಸ ಮಾಡಲಾಗುತ್ತಿದೆ. ಇಡೀ ರಸ್ತೆ ಅಸ್ತವ್ಯಸ್ತವಾಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದು, ಅಪಘಾತಗಳಿಗೆ ಕಾರಣವಾಗುತ್ತಿದೆ. ಇದಕ್ಕೆ ಗುತ್ತಿಗೆದಾರ ಹಾಗೂ ಎಂಜಿನಿಯರ್‌ ಹಾಗೂ ಶಾಸಕ ಎಚ್‌.ಕೆ. ಕುಮಾರಸ್ವಾಮಿ ಅವರೇ ನೇರ ಹೊಣೆಗಾರರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಯ ಬದಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯವರು ಕೈಗೊಳ್ಳಬೇಕು. ಭೂಮಿ ಕಳೆದುಕೊಳ್ಳುವವರಿಗೆ ಸೂಕ್ತ ಪರಿಹಾರ ನೀಡಬೇಕು. ಕೂಡಲೇ ರಸ್ತೆ ಬದಿಯಲ್ಲಿರುವ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಬೇಕು. ರಸ್ತೆಯನ್ನು 15 ಮೀ. ವರೆಗೆ ವಿಸ್ತರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆ ಅಗಲೀಕರಣಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ನಾಗರಾಜ್‌ ಹೆತ್ತೂರು, ತಾಪಂ ಸದಸ್ಯ ಯಡೇಹಳ್ಳಿ ಮಂಜುನಾಥ್‌ ಬೆಳಗೋಡು ಬಸವರಾಜ್‌, ಹೆನ್ರಿ,ಲೋಕೇಶ್‌ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ಟಾಪ್ ನ್ಯೂಸ್

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

NK-MOdi

Podcast: ಗಾಂಧೀಜಿ ಎಂದೂ ಟೋಪಿ ಧರಿಸುತ್ತಿರಲಿಲ್ಲ, ಆದರೆ ದೇಶದಲ್ಲಿ “ಗಾಂಧಿ ಟೋಪಿ’ ಜನಜನಿತ!

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.