ಶವವಿಟ್ಟು ಪ್ರತಿಭಟನೆ : ಪರಿಹಾರಕ್ಕೆ ಆಗ್ರಹ
Team Udayavani, Jul 14, 2021, 7:07 PM IST
ಹಾಸನ: ಜಿಯೋ ಕಂಪನಿಯ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದು, ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಜಿಯೋ ಕಂಪನಿಯ ಕಚೇರಿ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದರು.
ಅರಸೀಕೆರೆ ತಾಲೂಕು ಜಾವಗಲ್ ಹಾಗೂ ಬಾಣವಾರ ಹೋಬಳಿಯಲ್ಲಿ ಜಿಯೋ ಕಂಪನಿಯ ಟವರ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಸ್ವಾಮಿ (33) ಸೋಮವಾರ ಬೆಳಗ್ಗೆ ಕೆಲಸಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮೃತನ ಕುಟುಂಬಕ್ಕೆ ಜಿಯೋ ಕಂಪನಿ ಪರಿಹಾರ ನೀಡಬೇಕು ಎಂದು ಸಂಬಂಧಿಕರು ನಗರದ ಎಂ.ಜಿ.ರಸ್ತೆಯಲ್ಲಿರುವ ಜಿಯೋ ಕಂಪನಿ ಕಚೇರಿ ಬಳಿ ಶವ ಇಟ್ಟು ಮಂಗಳವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು.
ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಪ್ರಯತ್ನಿಸಿದರು. ಆದರೆ ಪ್ರತಿಭಟನಾಕಾರರು ಜಗ್ಗಲಿಲ್ಲ. ಸ್ಥಳಕ್ಕಾಗಮಿಸಿದ ಬಿಜೆಪಿ ಮುಖಂಡರಾದ ಉದ್ದೂರು ಪುರಷೋತ್ತಮ ಮತ್ತು ಪುನೀತ್ ಜಿಯೋ ಕಂಪನಿಯವರ ಜೊತೆ ದೂರವಾಣಿಯಲ್ಲಿ ಮಾತನಾಡಿ ಮೃತಪಟ್ಟ ನೌಕರನಿಗೆ ಕಂಪನಿಯ ವಿಮೆ ಪಡೆಯಲು ಅವಕಾಶ ಕಲ್ಪಿಸಿಕೊಡುವುದಾಗಿ ಸುಮಾರು10 ಲಕ್ಷ ಪರಿಹಾರ ಕೊಡುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದು ಶವವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.