ಜ.1 ರಿಂದ ಬೆಂಬಲ ಬೆಲೆಯಲಿ ಭತ್ತ ,ರಾಗಿ ಖರೀದಿ

Team Udayavani, Dec 19, 2022, 3:55 PM IST

ಜ.1 ರಿಂದ ಬೆಂಬಲ ಬೆಲೆಯಲಿ ಭತ್ತ ,ರಾಗಿ ಖರೀದಿ

ಹಾಸನ: ಸರ್ಕಾರವು 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ವತಿಯಿಂದ ಭತ್ತ ಮತ್ತು ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಿದೆ. ರೈತರ ನೋಂದಣಿ ಡಿ.15ರಿಂದ ಪ್ರಾರಂಭವಾಗಿದ್ದು, ಜ.1 ರಿಂದ ಜ.31 ರವರೆಗೆ ಖರೀದಿ ಮಾಡಲಾಗುತ್ತದೆ.

ಜಿಲ್ಲೆಯ ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್‌ ತಂತ್ರಾಂಶದ ಗುರುತಿನ ಪತ್ರ, ಆಧಾರ್‌ ಜೋಡಣೆ ಮಾಡಿದ ಮತ್ತು ವ್ಯವಹಾರ ಚಾಲ್ತಿಯಲ್ಲಿರುವ ಬ್ಯಾಂಕ್‌ ಖಾತೆ ಪ್ರತಿ ನೀಡಿ ರಾಗಿ ಮತ್ತು ಭತ್ತ ಮಾರಾಟಕ್ಕೆ ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ ಅವರು ತಿಳಿಸಿದ್ದಾರೆ.

ಉತ್ಪಾದನೆಗೆ ಅನುಗುಣವಾಗಿ ಖರೀದಿ: ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ರಾಗಿ ಮತ್ತು ಭತ್ತ ಖರೀದಿಸುವ ಕುರಿತು ಶನಿ ವಾರ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್‌ ಸಭೆ ನಡೆಸಿದ ಅವರು, ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗು ಣವಾಗಿ ಪ್ರತಿ ಎಕರೆಗೆ 25 ಕ್ವಿಂಟಲ್‌ನಂತೆ ಗರಿಷ್ಠ 40 ಕ್ವಿಂಟಲ್‌ ಮೀರದಂತೆ ಭತ್ತವನ್ನು ಖರೀದಿಸಲಾಗುವುದು ಮತ್ತು ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಲ್‌ನಂತೆ ಗರಿಷ್ಠ 20 ಕ್ವಿಂಟಲ್‌ ರಾಗಿಯನ್ನು ಖರೀ ದಿಸಲಾಗುವುದು ಎಂದರು.

ಭತ್ತ ಕ್ವಿಂಟಲ್‌ಗೆ 2040 ರೂ.ದರ ನಿಗದಿ: ಸಾಮಾನ್ಯ ದರ್ಜೆಯ ಭತ್ತವನ್ನು ಪ್ರತಿ ಕ್ವಿಂಟಲ್‌ಗೆ 2040 ರೂ , ಗ್ರೇಡ್‌-ಎ ಭತ್ತವನ್ನು ಪ್ರತಿ ಕ್ವಿಂಟಲ್‌ಗೆ 2060 ರೂ. ರಾಗಿಯನ್ನು ಪ್ರತಿ ಕ್ವಿಂಟಲ್‌ಗೆ 3578 ರೂ.ಗಳಲ್ಲಿ ಖರೀದಿ ಮಾಡಲಾಗುವುದು ಎಂದು ಅವರು ಹೇಳಿದರು.

ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 25 ಕ್ವಿಂಟಲ್‌ನಂತೆ ಗರಿಷ್ಠ 40 ಕ್ವಿಂಟಲ್‌ ಮೀರದಂತೆ ಭತ್ತವನ್ನು ಖರೀದಿಸಲಾಗುವುದು.

ನೋಂದಣಿ ಮಾಡಿಸಿಕೊಳ್ಳಿ: ಭತ್ತ ಮತ್ತು ರಾಗಿ ಖರೀದಿ ಹಾಸನದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ ಆವರಣದಲ್ಲಿ ಮೊಸಳೆ ಹೊಸಳ್ಳಿಯ ಎಪಿಎಂಸಿ ಪ್ರಾಂಗಣ, ದುದ್ದ ಎಪಿಎಂಸಿ ಪ್ರಾಂಗಣದಲ್ಲಿ ಖರೀದಿ ಕೇಂದ್ರ ತೆಗೆಯಲಾಗುವುದು. ಕಟ್ಟಾಯ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಣಿ ಮಾತ್ರ ನಡೆಯಲಿದೆ ಎಂದು ಹೇಳಿದರು.

ಅರಸಿಕೆರೆ ತಾಲೂಕಿನ ಜಾವಗಲ್‌, ಗಂಡಸಿ, ಜೆ.ಸಿ.ಪುರ, ಬಾಣಾವಾರ, ಅರಸೀಕೆರೆ, ಕೃಷಿ ಉತ್ಪನ್ನ ಮಾರು ಕಟ್ಟೆ ಪ್ರಾಂಗಣದಲ್ಲಿ ರಾಗಿ ಮಾತ್ರ ನೋಂದಣಿ ಹಾಗೂ ಖರೀದಿಸಲಾಗುತ್ತದೆ ಎಂದರು.

ಭತ್ತ, ರಾಗಿ ಖರೀದಿಗೆ ನೋಂದಣಿ: ಅರಕಲಗೂಡು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ ಹಾಗೂ ರಾಮನಾಥಪುರ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಣಿ ಮತ್ತು ಅರಕಲಗೂಡಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಮತ್ತು ರಾಗಿ ನೋಂದಣಿ ಹಾಗೂ ಖರೀದಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಬೇಲೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಹಾಗೂ ಚನ್ನರಾಯಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ನುಗ್ಗೇಹಳ್ಳಿ, ಶ್ರವಣಬೆಳಗೊಳ, ಉದಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಮತ್ತು ರಾಗಿ ನೋಂದಣಿ ಹಾಗೂ ಖರೀದಿ ಮಾಡ ಲಾಗುವುದು ಎಂದರು.

ಹೊಳೆನರಸೀಪುರ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಮತ್ತು ರಾಗಿ ಹಾಗೂ ಸಕಲೇಶಪುರ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಮಾತ್ರ ಖರೀದಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಜಂಟಿ ಕೃಷಿ ನಿರ್ದೇಶಕ ರಾಜ ಸುಲೋಚನಾ, ಲೀಡ್‌ ಬ್ಯಾಂಕ್‌ನ ವ್ಯವಸ್ಥಾಪಕಿ ರೇವತಿ ಸುಧಾಕರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.