ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶೀಘ್ರ ಅನುದಾನ
ರಾಜ್ಯ ಮೂಲ ಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಭರವಸೆ
Team Udayavani, Mar 20, 2021, 5:19 PM IST
ಹಾಸನ: ಹಾಸನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತುರ್ತು ಕಾಮಗಾರಿಗಳಿಗೆ ಬೇಕಾಗಿರುವ ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಇಂಧನ ಮತ್ತು ಮೂಲಭೂತ ಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರು ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ತ್ವರಿತವಾಗಿ ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭವಾಗಬೇಕು. ವಿಮಾನ ನಿಲ್ದಾಣ ನಿರ್ಮಾಣ ಪ್ರದೇಶದಲ್ಲಿ ಹಾದು ಹೋಗಿರುವ ಹೈಟೆನ್ಷನ್ ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾರ್ಯ ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಈ ವೇಳೆ ಮಾತನಾಡಿದ ಮೂಲ ಸೌಕರ್ಯ ಇಲಾಖೆಯ ಸಹಾಯಕ ಕಾರ್ಯದರ್ಶಿ ವಿ.ಚೈತ್ರಾ, ಹಾಲಿ 9 ಕಿ.ಮೀ. ವ್ಯಾಪ್ತಿಯಲ್ಲಿರುವ 35 ಮೀಟರ್ ವಿಸ್ತೀರ್ಣದ ಹೈಟೆನÒನ್ ತಂತಿ ಹಾಗೂ ಟವರ್‌ಗಳನ್ನು 17 ಕಿ.ಮೀ. ದೂರಕ್ಕೆ ಸ್ಥಳಾಂತರಿಸಬೇಕಾಗಿದೆ. ಅದಕ್ಕೆ ತಗಲುವ ವೆಚ್ಚವನ್ನು ಮೂಲ ಸೌಕರ್ಯ ಇಲಾಖೆಯಿಂದ ಒದಗಿಸಿ ಕೊಡಬೇಕಾಗಿದ್ದು, ಭೂ ಪರಿಹಾರ ಧನವನ್ನು ಆದಷ್ಟು ಬೇಗ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಉದ್ದೇಶಿತ ಪ್ರದೇಶದ ವಿದ್ಯುತ್ ಮಾರ್ಗವನ್ನು ಸ್ಥಳಾಂತರಿಸಲು 7.3 ಕೋಟಿ ರೂ. ಭೂ ಪರಿಹಾರಧನ ಸೇರಿ 19.7 ಕೋಟಿ ರೂ. ಬಿಡುಗಡೆ ಮಾಡುವಂತೆ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಲಾಗಿದ್ದು, ಒಟ್ಟು 34 ಎಕರೆ ಭೂ ಪ್ರದೇಶಕ್ಕೆ ಪರಿಹಾರ ನೀಡಬೇಕಾಗಿದೆ ಎಂದು ತಿಳಿಸಿದರು.
ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಾಡಿಕೊಡುವಂತೆ ಕೋರಲಾಗಿದೆ. ವಿದ್ಯುತ್ ಮಾರ್ಗ ಸ್ಥಳಾಂತರದ ಪರಿಹಾರ ನೀಡಿದ ನಂತರ ರೈತರು ತಮ್ಮ ಜಮೀನನ್ನು ನೀಡುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಬಿ.ಎ.ಜಗದೀಶ್, ಕೆಪಿಟಿಸಿಎಲ್ ಮುಖ್ಯ ಎಂಜಿನಿಯರ್ ನಾಗಾರ್ಜುನ್, ಸೂಪರ್‌ಡೆಂಟ್ ಎಂಜಿನಿಯರ್ ಉಮೇಶ್, ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೇಶ್, ಹಾಸನ ತಹಶೀಲ್ದಾರ್ ಶಿವಶಂಕರಪ್ಪ ಮತ್ತಿತರರು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.