ರೈಲ್ವೆ ಕಾಮಗಾರಿಗೆ ತ್ವರಿತ ಭೂ ಸ್ವಾಧೀನ: ಸಿಎಸ್ ಸೂಚನೆ
Team Udayavani, Nov 1, 2019, 4:13 PM IST
ಹಾಸನ: ರೈಲ್ವೆ ಕಾಮಗಾರಿಗಾಗಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ(ಸಿಎಸ್) ಟಿ.ಎಂ. ವಿಜಯಭಾಸ್ಕರ್ ಅವರು ಸೂಚಿಸಿದರು.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ರೈಲ್ವೆ ಕಾಮಗಾರಿಗೆ ಸಂಬಂಧಿಸಿದ ಭೂ ಸ್ವಾಧೀನ ಕುರಿತುಒಂದು ವಾರದೊಳಗಾಗಿ ಸ್ವಾಧೀನಕ್ಕೆ ನಿಗದಿಪಡಿಸಿರುವ ಜಾಗವನ್ನುಸಂಬಂಧಿತ ಅಧಿಕಾರಿಗಳ ವ್ಯಾಪ್ತಿಗೆ ಪಡೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ವಿಡಿಯೋ ಸಂವಾದ ಸಭೆಯ ನಂತರ ಅಧಿಕಾರಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಆರ್. ಗಿರೀಶ್, ರೈಲ್ವೇ ಕಾಮಗಾರಿಗಾಗಿ ಗೊತ್ತು ಪಡಿಸಿರುವ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ತಕರಾರುಗಳಿದ್ದಲ್ಲಿ, ಭೂಮಿಯ ಮಾಲೀಕರನ್ನು ಕರೆದು ಸಂಧಾನ ಸಭೆ ನಡೆಸಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಬೇಕು ಎಂದು ಸಂಬಂಧಿತ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಗಿರೀಶ್ ಅವರು ತಾಕೀತು ಮಾಡಿದರು.
ತಕರಾರುಗಳು ಎದುರಾದರೆ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಜಾಗವನ್ನು ಸ್ವಾಧೀನಕ್ಕೆ ಪಡೆಯುವಂತೆಯೂ ಸೂಚಿಸಿದರು. ಎಡೀಸಿ ಕವಿತಾ ರಾಜಾರಾಂ, ಜಿಪಂ ಸಿಇಒ ಬಿ.ಎ. ಪರಮೇಶ್, ಉಪಭಾಗಾಧಿಕಾರಿಗಳಾದ ನವೀನ್ ಭಟ್ ಮತ್ತು ಗಿರೀಶ್ ನಂದನ್, ತಹಶೀಲ್ದಾರ್ ಪಾರ್ಥಸಾರಥಿ, ಎಸ್‌ಎಲ್‌ಎಒ ಗಳಾದ ಮಂಜುನಾಥ್ ಮತ್ತು ಶ್ರೀನಿವಾಸಗೌಡ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಭಾರ ಹಿರಿಯಭೂ ವಿಜ್ಞಾನಿ ಜಿ. ಶ್ರೀನಿವಾಸ್ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.