
ಕ್ವಿಟ್ ಇಂಡಿಯಾ ನೆನಪು ಕಾರ್ಯಕ್ರಮ
Team Udayavani, Aug 10, 2020, 9:52 AM IST

ಹಾಸನ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕ್ವಿಟ್ ಇಂಡಿಯಾ ಚಳವಳಿಯ ಒಂದು ನೆನಪು ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು.
ಹಾಸನ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಘು ಮಾತನಾಡಿ, 1942, ಆ.8ರಂದು ಮುಂಬೈನ ಗೊವಾಳಿಯ ಮೈದಾನದಲ್ಲಿ ಗಾಂಧೀಜಿಯವರು “ಮಾಡು ಇಲ್ಲವೆ ಮಡಿ’ ಘೋಷಣೆಯೊಂದಿಗೆ ಕ್ವಿಟ್ ಇಂಡಿಯಾ ಚಳವಳಿಯನ್ನು ಘೋಷಿಸಿದರು. ಆ.9 ರಿಂದ ಚಳವಳಿ ಆರಂಭವಾಯಿತು. ಕೊನೆಗೆ ಬ್ರಿಟಿಷರು ಗಾಂಧೀಜಿ ಯವರನ್ನು ಬಂಧಿಸಿ ಅಗಾಖಾನ್ ಅರಮನೆಯಲ್ಲಿ ಗೃಹ ಬಂಧನ ದಲ್ಲಿಟ್ಟದ್ದರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿ ಯು ಸ್ವಾತಂತ್ರ್ಯ ಹೋರಾಟದ ನಿರ್ಣಾಯಕ ಹಂತವಾಗಿತ್ತು ಎಂದರು.
ಗಾಂಧೀಜಿ ಬಂಧನಕ್ಕೊಳಗಾದ ನಂತರ ಜಯಪ್ರಕಾಶ್ ನಾರಾಯಣ್, ಲೋಹಿಯಾ, ಅರುಣಾ ಆಸಿಫ್ ಅಲಿ ಮತ್ತಿತರರು ಚಳವಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ಹೇಳಿದರು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಆರೀಫ್, ಎನ್‌ಎಸ್‌ಯುಐ ಅಧ್ಯಕ್ಷ ರಂಜಿತ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್, ಉಜ್ವಲ್, ಪ್ರಕಾಶ್, ಪ್ರವೀಣ್, ರಘು, ಶಿವಕುಮಾರ್ ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.