ಕಾಡಾನೆಗಳಿಗೆ ರೆಡಿಯೋ ಕಾಲರ್‌ ಅಳವಡಿಕೆ

ಅಭಿಮನ್ಯು ಸೇರಿ ಮೂರು ಸಾಕಾನೆ ಬಳಕೆ: ಸಂರಕ್ಷಣಾಧಿಕಾರಿ ಬಸವರಾಜು

Team Udayavani, Jan 21, 2021, 12:13 PM IST

Radio collar installation to Elephant

ಹಾಸನ: ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ನಿಯಂತ್ರಿಸಲು ನಾಲ್ಕಕ್ಕೆ ರೆಡಿಯೋ ಕಾಲರ್‌ ಅಳವಡಿಸುವ ಕಾರ್ಯಾಚರಣೆ ಜ.21ರಿಂದ ಆರಂಭವಾಗಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್‌.ಬಸವರಾಜು ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು, ಉಪಟಳ ನೀಡುತ್ತಿರುವ ಒಂಟಿ ಸಲಗ, ಮೂರು ಹೆಣ್ಣಾನೆಗಳಿಗೆ ರೆಡಿಯೋ ಕಾಲರ್‌ ಅಳವಡಿಸುವ ಕಾರ್ಯಾಚರಣೆ ಜ.27ರವರೆಗೆ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಮತ್ತಿಗೋಡು ಆನೆ ಕ್ಯಾಂಪ್‌ನಿಂದ ಅಭಿಮನ್ಯು ಸೇರಿ ಮೂರು ಆನೆಗಳನ್ನು ಕಾರ್ಯಾಚರಣೆಗೆ ಬಳಲಾಗುತ್ತಿದೆ. ಈಗಾಗಲೇ ಆಲೂರು ತಾಲೂಕಿನ ನಾಗಾವರದ ಶಿಬಿರಕ್ಕೆ ಮೂರು ಸಾಕಾನೆಗಳು ಬಂದಿಳಿದಿವೆ ಎಂದು ಮಾಹಿತಿ ನೀಡಿದ್ದಾರೆ.

ಅನುಮತಿ ಪಡೆದು ಕಾರ್ಯಾಚರಣೆ: ಕಾಡಾನೆಗಳಿಗೆ ರೆಡಿಯೋ ಕಾಲರ್‌ ಅಳವಡಿಕೆಗೆ ಅಭಿಮನ್ಯು ಸೇರಿದಂತೆ ಮೂರು ಕಾಡಾನೆ ಮತ್ತು 30 ಮಂದಿ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. ಒಂಟಿ ಸಲಗವನ್ನು ಸೆರೆಡಿದು ರೆಡಿಯೋ ಕಾಲರ್‌ ಅಳವಡಿಸಿ ಅದನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು. ಇನ್ನುಳಿದ ಮೂರು ಮೂರು ಹೆಣ್ಣಾನೆಗೆ ರೆಡಿಯೋ ಕಾಲರ್‌ಗಳನ್ನು ಮರು ಅಳವಡಿಸಿ ನಂತರ ಸೆರೆಡಿದ ಸ್ಥಳದಲ್ಲಿಯೇ ಬಿಡಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಪಡೆದು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಾಡಾನೆಗಳು ನಾಡಿಗೆ ಬಂದು ಸಾರ್ವಜನಿಕರಿಗೆ ಹಾನಿ ಮಾಡುತ್ತಿರುವ ಕೆಲವು ಪುಂಡಾನೆಗಳನ್ನು ಆಯ್ಕೆ ಮಾಡಿ, ಅವುಗಳ ಚಲನ- ವಲನ ಕಂಡುಹಿಡಿದು ಹಾನಿ ಮಾಡುವುದನ್ನು ತಡೆಗಟ್ಟಲು ಅನುಕೂಲವಾಗುವಂತೆ ರೆಡಿಯೋ ಕಾಲರ್‌ ಅಳವಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಹಕ್ಕಿ ಜ್ವರ ಇಲ್ಲ, ಧೈರ್ಯವಾಗಿ ಕೋಳಿ ಮಾಂಸ ತಿನ್ನಿ

ಆನೆ ಸಮಸ್ಯೆಗೆ ಶಾಶ್ವತ ಕ್ರಮ ಕೈಗೊಳ್ಳಲಿ

ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದ್ದು, ಗ್ರಾಮಗಳೊಳಗೆ ಕಾಡಾನೆಗಳು ಹಾಡ ಹಗಲೇ ಸಂಚರಿಸುತ್ತಿವೆ. ಕಾಡಾನೆಗಳ ಹಾವಳಿ ತಡೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಮಲೆನಾಡ ಜನರು ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ಸರ್ಕಾರ ಆನೆ ಕಾರಿಡಾರ್‌ ನಿರ್ಮಾಣ ಸೇರಿದಂತೆ ಶಾಶ್ವತ ಕ್ರಮಗಳನ್ನು ಕೈಗೊಳ್ಳದೆ ಪ್ರತಿಭಟನೆಗಳು ಹೆಚ್ಚಿದಾಗ ಒಂದೆರೆಡು ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸಿ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ. ಈಗ ಕಾಡಾನೆಗಳಿಗೆ ರೆಡಿಯೋ ಕಾಲರ್‌ ಅಳವಡಿಕೆ ಮಾಡುವುದರಿಂದ ಕಾಡಾನೆಗಳ ಹಾವಳಿ ತಡೆಯಲು ಸಾಧ್ಯವಿಲ್ಲ. ಶಾಶ್ವತ ಕ್ರಮಗಳ ಬಗ್ಗೆ ಸರ್ಕಾರ ಚಿಂತಿಸಬೇಕು ಎಂದು ಮಲೆನಾಡು ಪ್ರದೇಶದ ಜನರ ಆಗ್ರಹವಾಗಿದೆ.

ನಾಲ್ಕು ಆನೆಗಳಿಗೆ ರೆಡಿಯೋ ಕಾಲರ್‌, ಒಂದು ಆನೆ ಹಿಡಿದು ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ. ಸರ್ಕಾರದ ಆದೇಶದಂತೆ ಗುರುವಾರದಿಂದ ಕಾರ್ಯಾಚರಣೆ ನಡೆಯಲಿದೆ. ದಸರಾ ಆನೆ ಅಭಿಮನ್ಯು, ಗಣೇಶ, ಗೋಪಾಲ ಕೃಷ್ಣ ಎನ್ನುವ ಆನೆ ಬಂದಿದೆ. ಉಳಿದ ಎರಡು ಬೆಳಗ್ಗೆ ಭಾಗಿಯಾಗಲಿವೆ. ಪೂಜೆ ಸಲ್ಲಿಸಿದ ಬಳಿಕ ಡಿಎಫ್ಒ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತದೆ.

ವಿನಯ್‌ಚಂದ್ರ, ವಲಯ ಅರಣ್ಯಾಧಿಕಾರಿ, ಆಲೂರು ತಾಲೂಕು

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.