ಹಾಸನಾಂಬೆ ಭಕ್ತರಿಗೆ ದಿನವಿಡೀ ಮಳೆಯ ಕಾಟ

Team Udayavani, Oct 22, 2019, 3:00 AM IST

hasanambe-bha

ಹಾಸನ: ಕಳೆದ ನಾಲ್ಕು ದಿನಗಳಿಂದ ಸುಸೂತ್ರವಾಗಿ ಹಾಸನಾಂಬೆಯ ದರ್ಶನ ಪಡೆಯುತ್ತಿದ್ದ ಭಕ್ತರು 5 ನೇ ದಿನವಾದ ಸೋಮವಾರ ಮಳೆಯ ಕಾಟದಿಂದ ಸಂಕಷ್ಟ ಅನುಭವಿಸಿದರು. ಮಧ್ಯಾಹ್ನ 2.30 ಕ್ಕೆ ಆರಂಭವಾದ ಮಳೆ ಕೆಲಕಾಲ ಬಿಡುವು ನೀಡಿತದಾರೂ ಸಂಜೆ ಮತ್ತೆ ಆರಂಭವಾದ ಮಳೆ ರಾತ್ರಿವರೆಗೂ ಸುರಿಯುತ್ತಲೇ ಇತ್ತು.

ಸತತ ಮಳೆಯಿಂದ ಭಕ್ತರು ದೇವಾಲಯದ ಕಡೆ ಹೋಗಲೂ ಸಾಧ್ಯವಾಗಲಿಲ್ಲ. ಕಾರುಗಳಲ್ಲಿ ಮತ್ತು ಆಟೋಗಳಲ್ಲಿ ತೆರಳುವವರು ಬಿಟ್ಟರೆ ದ್ವಿಚಕ್ರ ವಾಹನಗಳಲ್ಲಿ ಹಾಗೂ ನಡಿಗೆಯಲ್ಲಿ ಭಕ್ತರು ಹಾಸನಾಂಬ ದೇವಾಲಯದತ್ತ ಹೋಗಲಾಗಿಲ್ಲ. ಮಳೆಯಿಂದಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರೂ ಪರದಾಡುವಂತಾಯಿತು. ದೇವಾಲಯದ ಸುತ್ತಮುತ್ತ ಬೀದಿ ಬದಿಯ ವ್ಯಾಪಾರಿಗಳೂ ಮಳೆಯಿಂದ ಬೇಸತ್ತು ಹೋದರು.

ಭಾನುವಾರ ರಾತ್ರಿವರೆಗೂ ಭಾರೀ ಸಂಖ್ಯೆಯಲ್ಲಿ ಭಕ್ತರು ದೇವಾಲಯದತ್ತ ಬಂದಿದ್ದರು. ಆದರೆ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ನಿರೀಕ್ಷಿಸಿದಷ್ಟು ಪ್ರಮಾಣದಲ್ಲಿ ಭಕ್ತರು ದೇವಾಲಯದತ್ತ ಬರಲಿಲ್ಲ. ಆದರೆ ದೇವಾಲಯಕ್ಕೆ ಬಂದ ಭಕ್ತರು ಸಲೀಸಾಗಿ ನೂಕು ನುಗ್ಗಲು ಇಲ್ಲದೆ ದೇವಿಯ ದರ್ಶನ ಪಡೆದರು.

ಮುಸ್ಲಿಮರಿಂದ ಹಾಸನಾಂಬೆ ದರ್ಶನ: ಕೆಲ ಮುಸಲ್ಮಾನರೂ ಹಾಸನಾಂಬೆಯ ದೇವಾಲಯಕ್ಕೆ ಬಂದು ಸೋಮವಾರ ದೇವಿಯ ದರ್ಶನ ಪಡೆದು. ಕೆಲ ಮುಸ್ಲಿಂ ಮಹಿಳೆಯರು ತಮ್ಮ ಮಕ್ಕಳೊಂದಿಗೆ ಆಗಮಿಸಿ ಹಾಸನಾಂಬೆಯ ದರ್ಶನ ಪಡೆದರು. ಗರ್ಭ ಗುಡಿಯ ಮುಂದೆ ನಿಂತು ಪ್ರಾರ್ಥನೆ ಸಲ್ಲಿಸಿ, ಮಂಗಳಾರತಿ ಪಡೆದರು. ಕೆಲ ಪುರಷ ಮುಸಲ್ಮಾನರೂ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನಾಂಬೆಗೆ ಚಿತ್ರನಟಿ ತಾರಾ ವಿಶೇಷ ಪೂಜೆ: ಹಾಸನ, ಚಲನಚಿತ್ರ ನಟಿ ತಾರಾ ಅವರು ಕುಟುಂಬದವರೊಂದಿಗೆ ಸೋಮವಾರ ಹಾಸನಾಂಬೆಯ ದರ್ಶನ ಪಡೆದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗರ್ಭ ಗುಡಿಯಲ್ಲಿ ಕುಳಿತು ಹಾಸನಾಂಬೆಯ ಸನ್ನಿಧಿಯಲ್ಲಿ ಕೆಲಕಾಲ ಕುಳಿತು ವಿಶೇಷ ಪೂಜೆ ಸಲ್ಲಿಸಿದರು. 76 ರ ವಯೋವೃದ್ಧ ತಾಯಿ ಪುಷ್ಪಾ ಅವರೊಂದಿಗೆ ಬಾಗಿನ ಸಮೇತರಾಗಿ ಆಗಮಿಸಿದ್ದ ತಾರಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿಯೂ ಅರ್ಚನೆ ಮಾಡಿಸಿದರು. ನಂತರ ದರ್ಬಾರ್‌ ಗಣಪತಿ ಹಾಗೂ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ನೆರವೇರಿಸಿದರು.

ಪೂಜೆ ಸಲ್ಲಿಸಿ ದೇವಾಲಯದಿಂದ ಹೊರಗೆ ಬಂದ ತಾರಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿವರ್ಷ ನಾನು ಹಾಸನಾಂಬೆ ದರ್ಶನ ಮಾಡುತ್ತಿದ್ದೇನೆ. ಕಳೆದ ವರ್ಷ ಮಾತ್ರ ವೈಯಕ್ತಿಕ ಕಾರಣಗಳಿಂದ ಬರಲು ಸಾಧ್ಯವಾಗಿರಲಿಲ್ಲ. ಹಾಸನಾಂಬೆಯ ಮೇಲೆ ಬಹಳ ನಂಬಿಕೆ ಇದೆ ಎಂದರು. ವಿಧಾನ ಪರಿಷತ್‌ ಸದಸ್ಯ‌ ಬೋಜೇಗೌಡ ಅವರೂ ಸೋಮವಾರ ಹಾಸನಾಂಬೆಯ ದರ್ಶನ ಪಡೆದರು.

ವಿವಿಧ ಸ್ವಾಮೀಜಿಗಳಿಂದ ದೇವಿ ದರ್ಶನ: ಹಾಸನ, ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡಗಿನ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಶನಿವಾರಸಂತೆ ಮುದ್ದಿನಕಟ್ಟೆ ಮಠದ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ, ತೊರೆನೂರು ಮಠದ ಮಲ್ಲೇಶ್ವರ ಸ್ವಾಮೀಜಿಯವರು ಆಗಮಿಸಿ ಹಾಸನಾಂಬೆ ಮತ್ತು ಶ್ರೀ ಸಿದ್ದೇಶ್ವರ ದೇವಾಲಯಕ್ಕೆ ಸೋಮವಾರ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.