ಉಚಿತ ಕಾನೂನು ಸೇವೆಯ ಅರಿವು ಮೂಡಿಸಿ
Team Udayavani, Sep 26, 2021, 4:41 PM IST
ಹಾಸನ: ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರು, ಶಿಕ್ಷಿತರು, ಬಡವರು, ಅಸಹಾಯಕರಿಗೆ ಕಾನೂನು ಸೇವಾ ಪ್ರಾಧಿಕಾರವು ಉಚಿತ ಕಾನೂನು ಸೇವೆ ನೀಡುತ್ತಿದೆ. ಈ ಬಗ್ಗೆ ತಾಲೂಕು ಹಾಗೂಗ್ರಾಮ ಮಟ್ಟದಲ್ಲಿ ಅರಿವು ಮೂಡಿಸಲು ಎಲ್ಲ ಇಲಾಖೆಗಳು ಕ್ರಮ ಕೈಗೊಳ್ಳಬೇಕುಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಪ್ಯಾನ್ ಇಂಡಿಯಾ ಕಾನೂನು ಅರಿವು ಕಾರ್ಯಕ್ರಮಗಳ ಕುರಿತು ಸಭೆ ನಡೆಸಿದ ಅವರು, 75ನೇ ವರ್ಷದ ಅಮೃತ ಮಹೋತ್ಸವ ಅಂಗವಾಗಿ ವಿವಿಧ ಇಲಾಖೆಗಳ ಮೂಲಕ ಅ.2 ರಿಂದ ನ. 14 ವರೆಗೆ ನಿರಂತರವಾಗಿ ಕಾನೂನು ಸೇವಾ ಪ್ರಾಧಿಕಾರದ ಉಚಿತ ಕಾನೂನು ಸೇವೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಕಾನೂನು ಸೇವೆ, ನಾಗರಿಕರ ಹಕ್ಕು, ಕರ್ತವ್ಯಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ದೇಶಿಸಿದೆ. ಜಿಲ್ಲಾಡಳಿತ ಹಾಗೂ ಸರಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ ಪ್ರತಿ ಹಳ್ಳಿಗೂ ಮಾಹಿತಿ ತಲುಪಿಸುವಂತೆ ಕ್ರಿಯಾ ಯೋಜನೆ ರೂಪಿಸಲಾಗುತ್ತದೆ ಎಂದರು.
ಜಿಲ್ಲಾದ್ಯಂತ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಕಾನೂನು ಪ್ರಾಧಿ ಕಾರದ ಮಹತ್ವ ಮತ್ತು ಕಾನೂನು ಸೇವಾ ಪ್ರಾಧಿಕಾರದ ಉಪಯೋಗಗಳನ್ನು ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಗಳನ್ನು ಆಯೋಜಿಸಬೇಕು. ವಿಶೇಷ ವಾಗಿ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಕಾನೂನು ಪ್ರಾಧಿಕಾರದ ಉಪಯೋಗಗಳನ್ನು ತಿಳಿಸುವುದು ಅವಶ್ಯಕವಾಗಿದೆ ಎಂದು ಹೇಳಿದರು.
ಮಹಿಳೆ, ಮಕ್ಕಳು ಮತ್ತು ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕಾನೂನು ತಿಳಿವಳಿಕೆ, ಮೂಲ ಭೂತ ಹಕ್ಕುಗಳು, ಮೂಲಭೂತ ಕರ್ತವ್ಯಗಳು, ಸಂವಿಧಾನದ ಆಶಯಗಳಕುರಿತು ಜಾಗೃತಿ ಮೂಡಿಸಲು ಪ್ರಾಧಿಕಾರದ ಜೊತೆಗೆ ಎಲ್ಲ ಇಲಾಖೆಗಳ ಪೂರ್ಣ ಪ್ರಮಾಣದಲ್ಲಿ ಕೈ ಜೋಡಿಸಬೇಕೆಂದು ತಾಕೀತು ಮಾಡಿದರು.
ಶಾಲಾ ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಪ್ರಾಧಿಕಾರ ಕುರಿತು ಕಾರ್ಯಾಗಾರ ನಡೆಸುವುದು,ಪ್ರಬಂಧ ಮತ್ತು ನಿಬಂಧಗಳ ಸ್ಪರ್ಧೆ, ಭಾಷಣ ಸ್ಪರ್ಧೆ ಏರ್ಪಡಿಸಿ ಮಕ್ಕಳಲ್ಲಿ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶ ರವಿಕಾಂತ್ ಮಾತ ನಾಡಿ, ಜಿಲ್ಲಾ ಪಂಚಾಯತ್ ವತಿಯಿಂದ ಸೇವಾ ಪ್ರಾಧಿಕಾರದ ಕಾರ್ಯಗಳಿಗೆ ಉತ್ತಮಸಹಕಾರ ನೀಡಿ, ಜಿಲ್ಲೆಯ ವಿವಿಧೆಡೆ ನೂರಾರು ಕಾರ್ಯಕ್ರಮಗಳನ್ನುಆಯೋಜಿಸಿ, ಯಶಸ್ವಿಯಾಗೊಳಿಸ ಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ಬಿ.ಎ.ಪರಮೇಶ್, ಉಪ ಕಾರ್ಯದರ್ಶಿ ಪುನೀತ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.