ಸಾಧಕ ಪಿಡಿಒಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ
4 ಬಾರಿ ಗಾಂಧಿ ಗ್ರಾಮ ಪುರಸ್ಕಾರ, ಬಹಿರ್ದೆಸೆ ಮುಕ್ತ ಗ್ರಾಪಂ, ನರೇಗಾ ಸಾಧನೆಗಾಗಿ ಸಿದ್ದಲಿಂಗ ಸರೂರುಗೆ ಗೌರವ
Team Udayavani, Nov 1, 2020, 4:37 PM IST
ಬೇಲೂರು: ತಾವು ಕಾರ್ಯನಿರ್ವಹಿಸುವ ಗ್ರಾಪಂಗೆ ನಾಲ್ಕು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ತಂದು ಕೊಡುವುದರ ಜೊತೆಗೆ ಗ್ರಾಮಗಳ ಸ್ವಚ್ಛತೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪಿಡಿಒ ಸಿದ್ದಲಿಂಗ ಸರೂರು ತಾಲೂಕು ಆಡಳಿತ ನೀಡುವ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತಾಲೂಕಿನ ಅಂದಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಗಿರುವ ಸರೂರು, 2010ರಲ್ಲಿ ರಾಜನಶಿರೀಯೂರು ಪಿಡಿಒ ಆಗಿದ್ದಾಗ ಜಿಲ್ಲೆಯಲ್ಲೇ ಪ್ರಥಮವಾಗಿ ರಾಜೀವ್‌ಗಾಂಧಿ ಸೇವಾ ಕೇಂದ್ರ ಆರಂಭ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂತರದಲ್ಲಿ ತಾಲೂಕಿನ ಅಂದಲೆ ಗ್ರಾಮ ಪಂಚಾಯಿತಿಗೆ ವರ್ಗವಾದ ಬಳಿಕ 2015 -16ರಲ್ಲಿ ಬಯಲು ಬಹಿರ್ದೆಸೆ ಮುಕ್ತ ಗ್ರಾಪಂ,2016-17ರಲ್ಲಿ ಗಾಂಧಿ ಗ್ರಾಮ ಪುರಸ್ಕಾರ,2017-18ರಲ್ಲಿ ನಮ್ಮ ಗ್ರಾಮ ನಮ್ಮ ಯೋಜನೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ಕೆ 10 ಲಕ್ಷ ರೂ. ನಗದು ಬಹುಮಾನ ಪಡೆದ ಅವರು, 2018- 19 ರಲ್ಲಿ ಪುನಃ ಗಾಂಧಿ ಗ್ರಾಮ ಪುರಸ್ಕಾರ, 2019-20ನೇ ಸಾಲಿನಲ್ಲಿ ಮತ್ತೆ ಗಾಂಧಿ ಗ್ರಾಮ ಪುರಸ್ಕಾರ ಪಡೆಯುವ ಮೂಲಕ ಗ್ರಾಪಂಗೆ 25 ಲಕ್ಷ ರೂ. ನಗದು ಬಹುಮಾನ ತಂದುಕೊಟ್ಟು ಉತ್ತಮ ಹೆಸರು ಗಳಿಸಿದ್ದಾರೆ.
ಇವರ ಅಧಿಕಾರಾವಧಿಯಲ್ಲಿ ಗ್ರಾಮ ಪಂಚಾಯಿತಿಯನ್ನು ಸಾರ್ವಜನಿಕರ ಸ್ನೇಹಿ ಆಗಿ ನವೀಕರಣಗೊಳಿಸಿದ್ದು, ಬಹುಮಾನ ಬಂದಿರುವ ಹಣದಲ್ಲಿ ಗ್ರಾಪಂಗೆ ಆದಾಯ ತರುವ ದೃಷ್ಟಿಯಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿದ್ದಾರೆ. ಅಲ್ಲದೆ, ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆನೇರವಾಗಿ ತಿಳಿಸಲು ಕಚೇರಿಯಲ್ಲಿ ಟಿ.ವಿ ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಸರ್ಕಾರದ ಮಹತ್ತರ ಯೋಜನೆಯಾದ ಮಹಾತ್ಮ ಗಾಂಧಿ, ನರೇಗಾ ಯೋಜನೆ ಅಡಿಯಲ್ಲಿ ರೈತರಿಗೆ ಅವಶ್ಯಕವಾದ ತೆಂಗು, ಅಡಕೆ, ಬದು, ಕೃಷಿ ಹೊಂಡ ನಿರ್ಮಾಣ ಮತ್ತು ವೈಯಕ್ತಿಕ ಕಾಮಗಾರಿ ನಡೆಸುವ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚು ಮನ್ನಣೆ ನೀಡಿದ್ದಾರೆ. ಪಂಚಾಯಿತಿ ವ್ಯಾಪ್ತಿಯಲ್ಲಿ 623 ಮನೆಗಳು ಇದ್ದು, ಗ್ರಾಮಗಳ ಸ್ವತ್ಛತೆ, ನೈರ್ಮಲ್ಯ ಕಾಪಾಡಲು ಚರಂಡಿ ಹಾಗೂ ಪ್ರತಿ ಮನೆಗೆ ಬಚ್ಚಲು ಗುಂಡಿ ನಿರ್ಮಾಣ ಮಾಡಿಸುವ ಮೂಲಕ ಗ್ರಾಮಗಳ ಅಭಿವೃದ್ಧಿ ಕಡೆ ಗಮನಹರಿಸಿದ್ದಾರೆ.
ಈಗಾಗಲೇ ಪಂಚಾಯಿತಿ ವ್ಯಾಪ್ತಿಯ ಬೈರೇಗೌಡನ ಕೊಪ್ಪಲು, ಗೊರೂರು, ಗೊರೂರು ಕೊಪ್ಪಲು, ಹಾರೋಹಳ್ಳಿ ಗ್ರಾಮಗಳನ್ನು ಬಚ್ಚಲು ನೀರು ಮುಕ್ತ ಗ್ರಾಮಗಳನ್ನಾಗಿ ಮಾಡುವ ಮೂಲಕ ಗ್ರಾಮೀಣ ಅಭಿವೃದ್ಧಿಯಲ್ಲಿ ಹೆಚ್ಚಿನ ಅಸಕ್ತಿ ತೋರಿಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಎಂಎ ಪದವಿ ಪಡೆದಿರುವ ಸಿದ್ದಲಿಂಗ ಸರೂರು ಅವರ ಗ್ರಾಮೀಣ ಅಭಿವೃದ್ಧಿ ಸಾಧನೆಗೆ ತಾಲೂಕು ಆಡಳಿತ 2020-21ನೇ ಸಾಲಿನಲ್ಲಿ ನಾಗರಿಕ ಸೇವೆಗೆ ನೀಡುವ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಶ್ಲಾಘನೀಯ.
ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದು ಸಂತಸ ತಂದಿದೆ. ಜನರ ಸಮಸ್ಯೆಗೆ ಮತ್ತಷ್ಟು ಸ್ಪಂದಿಸಲು ಉತ್ತೇಜನ ನೀಡಿದಂತಾಗಿದೆ. ಸಾಧನೆಗೆ ಕಚೇರಿ ಸಿಬ್ಬಂದಿ, ಹಿಂದಿನ ಆಡಳಿತ ಮಂಡಳಿ ನೀಡಿದ ಸಂಪೂರ್ಣ ಸಹಕಾರ ಕಾರಣ ವಾಗಿದೆ. ಗ್ರಾಪಂ ಮಾದರಿ ಮಾಡಿದ್ದೇವೆ, ಗ್ರಾಮಗಳಲ್ಲಿ ಬೀದಿದೀಪ, ಸೋಲಾರ್ ದೀಪ ಅಳವಡಿಸಿ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಪಹಣಿ, ಜಾತಿ ಮತ್ತು
ಆದಾಯ ಪ್ರಮಾಣ ಪತ್ರ ಸೇರಿದಂತೆ ಇತರೆ ಸೇವೆಗಳನ್ನು ಜಿಲ್ಲೆಯಲ್ಲೇ ಹೆಚ್ಚು ಒದಗಿಸಿದ್ದೇವೆ. ಇತರೆ ಇಲಾಖೆಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸುತ್ತಿದ್ದೇವೆ. ಗ್ರಾಪಂ ಸಮಗ್ರ ಅಭಿವೃದ್ಧಿ ನನ್ನ ಕನಸಾಗಿದೆ. ಇದಕ್ಕೆ ಈ ಪ್ರಶಸ್ತಿ ಸ್ಫೂರ್ತಿ ಆಗಿದೆ. –ಸಿದ್ದಲಿಂಗ ಸರೂರು, ಪಿಡಿಒ
– ಡಿ.ಬಿ.ಮೋಹನ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.