ರಣಘಟ್ಟ ನೀರಾವರಿ ಯೋಜನೆ ಕಾಮಗಾರಿ ಶೀಘ್ರ ಆರಂಭ
Team Udayavani, Jan 5, 2020, 3:00 AM IST
ಬೇಲೂರು: ಬರ ಪೀಡಿತ ಪ್ರದೇಶಗಳಾದ ಹಳೇಬೀಡು, ಮಾದಿಹಳ್ಳಿ ಮತ್ತು ಸಾಲಗಾಮೆ ಕೆರೆಗಳಿಗೆ ನೀರು ತುಂಬಿಸುವ 126 ಕೋಟಿ ರೂ. ವೆಚ್ಚದ ರಣಘಟ್ಟ ನೀರಾವರಿ ಯೋಜನೆ ಕಾಮಗಾರಿಯನ್ನು ಶೀಘ್ರದಲ್ಲಿ ಆರಂಭಿಸುವುದಾಗಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ತಾಲೂಕಿನ ಹಳೇಬೀಡು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪುಷ್ಪಗಿರಿ ಮಠದಿಂದ ಹಮ್ಮಿಕೊಂಡಿದ್ದ ಪುಷ್ಪಗಿರಿ ರಾಷ್ಟ್ರೀಯ ಉತ್ಸವ ಮತ್ತು ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಲವಾರು ದಶಕಗಳಿಂದ ನನೆಗುದಿಗೆ ಬಿದ್ದಿರುವ ಈ ನೀರಾವರಿ ಯೋಜನೆ ತಾಂತ್ರಿಕ ಒಪ್ಪಿಗೆ ದೊರೆತಿದ್ದು, ಕೂಡಲೇ ಕಾಮಗಾರಿ ಆರಂಭಿಸಿ ಈ ಭಾಗದ ರೈತರ ಹಿತ ಕಾಪಾಡಲಾಗುವುದು ಎಂದರು.
ರೈತರ ಹಿತ ಕಾಪಾಡಲು ಬದ್ಧ: ರೈತರ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಿ ಬೆಳೆಗಳಿಗೆ ಸೂಕ್ತ ಬೆಲೆ ನೀಡುವ ಯೋಜನೆ ರೂಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಬೇಲೂರು ಹಳೇಬೀಡು ಪ್ರವಾಸಿ ಕೇಂದ್ರಗಳಾಗಿದ್ದು, ಪ್ರವಾಸೋಧ್ಯಮ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸುವುದಾಗಿ ತಿಳಿಸಿದರು.
ಶಿಕ್ಷಣ, ಅನ್ನ ದಾಸೋಹ: ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಮಾತನಾಡಿ, ಮಠಗಳು ಸಮಾಜದ ಏಳಿಗೆಗಾಗಿ ದುಡಿಯುತ್ತಿದ್ದು, ಬಹು ಮುಖ್ಯವಾಗಿ ಶಿಕ್ಷಣ ದಾಸೋಹದಂತಹ ಮಹತ್ತರ ಸೇವೆ ಮಾಡುತ್ತಿದ್ದು, ಸಮಾಜಕ್ಕೆ ಶಿಕ್ಷಣದ ಮಹತ್ವವನ್ನು ತಿಳಿಸುತತ್ತಿವೆ ಎಂದರು.
ಬೇಲೂರು ತಾಲೂಕು ಮಲೆನಾಡು ಹಾಗೂ ಬಯಲು ಸೀಮೆ ಪ್ರದೇಶಗಳನ್ನು ಹೊಂದಿದ್ದು, ಒಂದು ಕಡೆ ಅತಿ ಹೆಚ್ಚು ಮಳೆ ಇನ್ನೂಂದು ಕಡೆ ಮಳೆ ಇಲ್ಲದೇ ಜನರು ತೊಂದರೆ ಅನುಭವಿಸುವಂತಾಗಿದೆ. ಪ್ರಸ್ತುತು ಕೃಷಿಗೆ ಹೆಚ್ಚು ಒತ್ತು ನೀಡಬೇಕಿದೆ ಅಲ್ಲದೆ ರೈತರು ವಲಸೆ ಹೋಗವುದನ್ನು ತಪ್ಪಿಸುವುದು ಬಹು ಮುಖ್ಯವಾಗಿದ್ದು ತಾಲೂಕಿನ ರೈತರ ಹಿತದೃಷ್ಟಿಯಿಂದ ನೀರಾವರಿ ಯೋಜನೆಗಳನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಬೇಲೂರು, ಹಳೇಬೀಡು ಅಭಿವೃದ್ಧಿ: ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮಾತನಾಡಿ, ಪ್ರವಾಸಿ ಕೇಂದ್ರಗಳಾದ ಬೇಲೂರು ಹಳೇಬೀಡುಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಆನೇಕ ಕಾರ್ಯ ಕ್ರಮಗಳನ್ನು ರೂಪಿಸಿದೆ. ಇದರ ಜೊತೆಯಲ್ಲಿ ಈ ಭಾಗದ ನೀರಾವರಿ ಯೋಜನೆಗಳನ್ನು ಶೀಘ್ರ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದರು.
ತಾಲೂಕಿನ ಅಭಿವೃದ್ಧಿಗೆ ಮನವಿ: ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ತಾಲೂಕು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು ನೀರಾವರಿ, ರಸ್ತೆ ಸಂಪರ್ಕ, ಬೇಲೂರು ಪಟ್ಟಣದ ಮುಖ್ಯ ರಸ್ತೆ ಅಗಲಿಕರಣಮತ್ತು ಪರ್ಯಾಯ ರಸ್ತೆ ನಿರ್ಮಾಣ, ರಣಗಟ್ಟ ಯೋಜನೆ, ಅನುಷ್ಠಾನಕ್ಕೆ ತರುವಂತೆ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡಿದರು.
ಸಮಾರಂಭದಲ್ಲಿ ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಚಿತ್ರ ನಟರಾದ ಪುನೀತ್‌ರಾಜ್‌ಕುಮಾರ್, ಧನಂಜಯ, ದೊಡ್ಡಣ್ಣ, ಶಾಸಕರಾದ ಪ್ರೀತಂಗೌಡ, ಬೆಳ್ಳಿಪ್ರಕಾಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ, ಸದಸ್ಯ ಮಂಜಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷ ರಂಗೇಗೌಡ, ಮಾಜಿ ಶಾಸಕರಾದ ಬಿ.ಶಿವರಾಂ, ಎಚ್.ಎಂ. ವಿಶ್ವನಾಥ್, ಬಿಜೆಪಿ ತಾಲೂಕು ಅದ್ಯಕ್ಷ ಕೊರಟೀಕೆರೆ ಪ್ರಕಾಶ್, ಇತರರು ಇದ್ದರು.
11 ಕೆರೆಗಳ ಭರ್ತಿಗೆ ಕ್ರಮ: ರಣಘಟ್ಟ ಒಡ್ಡು ನಿರ್ಮಿಸಿ ಯಗಚಿ ನದಿ ನೀರನ್ನು ಹಳೇಬೀಡು ಮಾದಿಹಳ್ಳಿ ಭಾಗದ 11 ಕೆರೆಗಳ ಭರ್ತಿಮಾಡಲಾಗುವುದು ಎಂದರಲ್ಲದೇ ಹಾಸನ ತಾಲೂಕಿನ ಸಾಲಗಾಮೆ ಹೋಬಳಿಗಳ ಬಹುತೇಕ ಕೆರಗಳ ತುಂಬಿಸುವ ಯೋಜನೆಗೂ ಹಣ ಮಂಜೂರು ಮಾಡಿ ಕಾಮಗಾರಿ ಪ್ರಾರಂಭಿಸುವಂತೆ ಸೂಚಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ಪುಷ್ಪಗಿರಿ ಮಠಕ್ಕೆ 5 ಕೋಟಿ ರೂ. ಅನುದಾನ: ರಾಜ್ಯದಲ್ಲಿ ಧಾರ್ಮಿಕ ಸಂಸ್ಥೆಗಳು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಪವಿತ್ರ ಕೇಂದ್ರಗಳಾಗಿದ್ದು, ಸಮಾಜದ ಏಳಿಗೆಗೆ ಮಠಗಳು ತಮ್ಮದೇ ಅದ ಕೊಡುಗೆ ನೀಡಿವೆ. ಪುಷ್ಪಗಿರಿ ಮಠ ಹಮ್ಮಿಕೊಂಡಿರುವ ಗ್ರಾಮಿಣಾಭಿವೃದ್ಧಿ ಯೋಜನೆಗೆ ಸರ್ಕಾರದಿಂದ 5 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.