20 ಸಾವಿರ ಬಡ ಕುಟುಂಬಗಳಿಗೆ ಪಡಿತರ
Team Udayavani, Apr 12, 2020, 2:43 PM IST
ಹೊಳೆನರಸೀಪುರ: ಲಾಕ್ ಡೌನ್‌ನಿಂದ ಸಂಕಷ್ಟದಲ್ಲಿರುವ ಜಿಲ್ಲೆಯಲ್ಲಿನ 20 ಸಾವಿರ ಬಡ ಕುಟುಂಬಗಳಿಗೆ ಪ್ರಜ್ವಲ್ ರೇವಣ್ಣ ಬ್ರಿಗೇಡ್ ವತಿಯಿಂದ ಆಹಾರ ಪದಾರ್ಥಗಳ ಕಿಟ್ ನೀಡಲಾಗುತ್ತದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮತ್ತು ನಮ್ಮ ಅಭಿಮಾನಿಗಳು ಕಳೆದ ನಾಲ್ಕಾರು ದಿನಗಳಿಂದ ಆಹಾರ ಧಾನ್ಯ ಕಿಟ್ ತಯಾರಿಕೆ ಶ್ರಮಿಸುತ್ತಿದ್ದು, ಮೊದಲ ಹಂತದಲ್ಲಿ 20 ಸಾವಿರ ಕಿಟ್ ವಿತರಿಸುತ್ತಿದ್ದು ಎರಡನೇ ಹಂತದಲ್ಲಿಯೂ ಮತ್ತಷ್ಟು ಕಿಟ್‌ಗಳನ್ನು ವಿತರಿಸಲಾಗುತ್ತದೆ ಎಂದರು. ಈಗ ಸಿದ್ಧಪಡಿಸಿರುವ ಕಿಟ್, ಸ್ಯಾನಿಟೈಸರ್ ಹಾಗೂ ಮಾಸ್ಕ್ಗಳನ್ನು ಏ.13 ರಂದು ಎಂಟು ಲಾರಿಗಳಲ್ಲಿ ತುಂಬಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಯಾ ಕ್ಷೇತ್ರದ ಶಾಸಕರಿಗೆ ನೀಡಲಾಗುತ್ತದೆ. ಆಯಾ ಶಾಸಕರು ತಮ್ಮ ತಾಲೂಕಿನ ನಿರ್ಗತಿಕರಿಗೆ ವಿತರಿಸಲಿದ್ದಾರೆ ಎಂದರು. ಬ್ಯಾಂಕುಗಳ, ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು, ಅಂನವಾಡಿ ಹಾಗು ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಭವಾನಿರೇವಣ್ಣ ಮಾತನಾಡಿ, ಜಿಲ್ಲೆಯಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗಾಗಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ನಿತ್ಯ 30 ಸಾವಿರ ಲೀಟರ್ ಹಾಲನ್ನು ಉಚಿತವಾಗಿ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ರೇವಣ್ಣ ಅವರು ಹೊಳೆನರಸೀಪುರ ತಾಲೂಕಿನ ಜನರಿಗೆ ಸುಮಾರು 30 ಸಾವಿರ ಲೀ. ಹಾಲನ್ನು ವಿತರಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.